India vs Australia 2nd Test: ದೆಹಲಿ ಹವಾಮಾನ ವರದಿ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಶುಕ್ರವಾರದಿಂದ ದೆಹಲಿಯಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಟೀಮ್ ಇಂಡಿಯಾ ಈ ಪಂದ್ಯದಲ್ಲೂ ಭರ್ಜರಿ ಪ್ರದರ್ಶನ ನೀಡುವ ಆತ್ಮವಿಶ್ವಾಸದಲ್ಲಿದೆ. ಮತ್ತೊಂದೆಡೆ ನಾಗ್ಪುರ ಟೆಸ್ಟ್‌ನಲ್ಲಿ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾ ಭಾರತದ ವಿರುದ್ಧ ತಿರುಗಿ ಬೀಳುವ ಪ್ರಯತ್ನ ನಡೆಸಲಿದೆ.
ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಬ್ಯಾಟಿಂಗ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರೆ ಕೆಳ ಕ್ರಮಾಂಕದ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕೂಡ ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು. ಮತ್ತೊಂದೆಡೆ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಅಮೋಘ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಜಡೇಜಾ ಐದು ವಿಕೆಟ್‌ಗಳ ಗೊಂಚಲು ಪಡೆದುಕೊಂಡಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ ಐದು ವಿಕೆಟ್‌ಗಳ ಗೊಂಚಲು ಕಬಳಿಸಿದ್ದಾರೆ.
ಇನ್ನು ಟೀಮ್ ಇಂಡಿಯಾದ ಪ್ರಮುಖ ದಾಂಡಿಗರಾದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ದೆಹಲಿ ಟೆಸ್ಟ್‌ನಲ್ಲಿ ಈ ಆಟಗಾರರಿಂದ ಉತ್ತಮ ಪ್ರದರ್ಶನದ ನಿರೀಕ್ಷೆಯಿದೆ.

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ ಹಾಗೂ ಲೈವ್ ಸ್ಟ್ರೀಮಿಂಗ್: ಇನ್ನು ಈ ಪಂದ್ಯ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದ್ದು ಸ್ಟಾರ್ ಸ್ಪೋರ್ಟ್ಸ್ ಕನ್ನಡವಾಹಿನಿಯಲ್ಲಿಯೂ ನೇರಪ್ರಸಾರವಾಗಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿ ಈ ಪಂದ್ಯ ಲೈವ್‌ಸ್ಟ್ರೀಮಿಂಗ್ ದೊರೆಯಲಿದ್ದು ಜಿಯೋ ಟಿವಿ ಚಂದಾದಾರರು ಕೂಡ ಪಂದ್ಯವನ್ನು ವೀಕ್ಷಿಸಲು ಅವಕಾಶವಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಯಾವಾಗಲೂ ಸ್ಪಿನ್ನರ್‌ಗಳ ಪಾಲಿಗೆ ಸ್ವರ್ಗ ಎನ್ನುವುದರಲ್ಲಿ ಅನುಮಾನವಿಲ್ಲ. ಬೌಲರ್‌ಗಳಿಗೆ ಇಲ್ಲಿ ಹೆಚ್ಚಿನ ನೆರವು ದೊರೆಯಲಿದೆ. ಆದರೆ ಮೊದಲು ಬ್ಯಾಟಿಂಗ್ ನಡೆಸುವ ತಂಡಕ್ಕೆ ಹೆಚ್ಚು ನೆರವು ದೊರೆಯುವ ಸಾಧ್ಯತೆಯಿದೆ. ಹೀಗಾಗಿ ದೆಹಲಿ ಟೆಸ್ಟ್‌ನಲ್ಲಿ ಟಾಸ್ ಬಹಳ ದೊಡ್ಡ ಪಾತ್ರವಹಿಸಲಿದೆ. ಈ ಹಿಂದಿನ ಪಂದ್ಯಗಳ ಅಂಕಿಅಂಶ ನೋಡಿದರೆ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 342. ಆದರೆ ನಾಲ್ಕನೇ ಇನ್ನಿಂಗ್ಸ್‌ನ ಸರಾಸರಿ ಕೇವಲ 165 ಮಾತ್ರ. ಈ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿದ್ದು ಮೂರು ಪಂದ್ಯಗಳಲ್ಲಿ ಗೆದ್ದಿರುವ ಭಾರತ ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಕೇವಲ ಒಂದು ಪಂದ್ಯದಲ್ಲಿ ಮಾತ್ರವೇ ಗೆದ್ದಿದ್ದರೆ ಉಳಿದ ಮೂರು ಪಂದ್ಯಗಳು ಡ್ರಾ ಕಂಡಿದೆ.
ಹವಾಮಾನ ವರದಿ: ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಮಳೆಯ ಆತಂಕ ಇಲ್ಲ. ಹೀಗಾಗಿ ಪಂದ್ಯ ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯುವುದು ಸ್ಪಷ್ಟ. 15-30 ಡಿಗ್ರಿ ಉಷ್ಣಾಂಶವಿರಲಿ

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪೀಟರ್ ಹ್ಯಾಂಡ್ಸ್ಕಾಂಬ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ ಮತ್ತು ನಾಥನ್ ಲಿಯಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications