Ind vs Aus 2nd Test: ಟೆಸ್ಟ್ ಇತಿಹಾಸದಲ್ಲಿ ಭಾರತದ ಪರ ಅಪರೂಪದ ದಾಖಲೆ ಬರೆದ ರವೀಂದ್ರ ಜಡೇಜಾ

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ್ದರು ಕೂಡ ಅದರ ಸಂಪೂರ್ಣ ಲಾಭವನ್ನು ಪಡೆಯಲು ವಿಫಲವಾಗಿದೆ. ನಿರೀಕ್ಷೆಯಂತೆಯೇ ಭಾರತದ ಬೌಲರ್‌ಗಳು ಮೇಲುಗೈ ಸಾಧಿಸಿದ್ದು ಆಸಿಸ್ ಪರವಾಗಿ ಉಸ್ಮಾನ್ ಖವಾಜಾ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ ಮಿಂಚಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ವಿಶೇಷ ದಾಖಲೆಯೊಂದನ್ನು ಬರೆದುಕೊಂಡಿದ್ದಾರೆ. ಆರಂಬಿಕ ಆಟಗಾರ ಉಸ್ಮಾನ್ ಖವಾಜಾ ವಿಕೆಟ್ ಪಡೆದುಕೊಂಡ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಹಾಗೂ 2500 ರನ್‌ಗಳನ್ನು ಅತ್ಯಂತ ವೇಗವಾಗಿ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.
ಇನ್ನು ಈ ಸಾಧನೆಯನ್ನು ಅತ್ಯಂತ ವೇಗವಾಗಿ ಮಾಡಿದ ಆಟಗಾರರ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಮೊದಲ ಸ್ಥಾನದಲ್ಲಿದ್ದು ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಕಪಿಲ್‌ದೇವ್, ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್ ಮತ್ತು ಆರ್ ಅಶ್ವಿನ್ ಬಳಿಕ ಈ ಸಾಧನೆ ಆಡಿದ ಭಾರತದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ.
ಉಸ್ಮಾನ್ ಖವಾಜ ವಿಕೆಟ್ ಕಬಳಿಸುವುದರೊಂದಿಗೆ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ರನ್‌ಗಳ ಮೈಲಿಗಲ್ಲು ಪೂರ್ಣಗೊಳಿಸಿದರು. ಆಸ್ಟ್ರೇಲಿಯಾದ ಆರಂಬಿಕ ಆಟಗಾರ ಉಸ್ಮಾನ್ ಖವಾಜ ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುತ್ತಾ ಭಾರತಕ್ಕೆ ಸವಾಲಾಗಿ ಪರಿಣಮಿಸಿದ್ದರು. 81 ರನ್‌ಗಳಿಸಿದ್ದ ಅವರು ಶತಕದ ಮೇಲೆ ಕಣ್ಣಿಟ್ಟಿದ್ದರು. ಆದರೆ ಈ ಸಂದರ್ಭದಲ್ಲಿ ರವೀಂದ್ರ ಜಡೇಜಾ ಖವಾಜ ಅವರನ್ನು ಫೆವಿಲಿಯನ್‌ಗೆ ಅಟ್ಟುವ ಮೂಲಕ ಭಾರತಕ್ಕೆ ಮೇಲುಗೈ ಒದಗಿಸಿದ್ದಾರೆ. ಕೆಎಲ್ ರಾಹುಲ್ ಪಡೆದ ಉತ್ತಮ ಕ್ಯಾಚ್‌ಗೆ ಖವಾಜ ಔಟಾದರು.
ನಾಗ್ಪುರದಲ್ಲಿ ನಡೆದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದಿದ್ದ ಜಡೇಜಾ ಬೌಲಿಂಗ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದರು. ಐಸಿಸಿ ಶ್ರೇಯಾಂಕಪಟ್ಟಿಯಲ್ಲಿ ನಾಲ್ಕು ಸ್ಥಾನಗಳ ಏರಿಕೆ ಕಂಡಿದ್ದ ಜಡ್ಡು 16ನೇ ಸ್ಥಾನಕ್ಕೆ ಏರಿದ್ದಾರೆ. ಇನ್ನು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡ್ಡು ನಂಬರ್ 1 ಸ್ಥಾನ ಉಳಿಸಿಕೊಂಡಿದ್ದು ಆರ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲ ಮೂರು ಸೆಶನ್‌ಗಳಲ್ಲಿಯೂ ಭಾರತ ಅದ್ಭುತವಾಗಿ ಪ್ರದರ್ಶನ ನೀಡಿದೆ. ಆಸ್ಟ್ರೇಲಿಯಾ ತಂಡ ಮೂರನೇ ಸೆಶನ್‌ನ ಅಂತ್ಯಕ್ಕೆ 56 ಓವರ್‌ಗಳಲ್ಲಿ 199 ರನ್‌ಗಳನ್ನು ಗಳಿಸಿದ್ದು 6 ವಿಕೆಟ್ ಕಳೆದುಕೊಂಡಿದೆ. ಪೀಟರ್ ಹ್ಯಾಂಡ್ಸ್‌ಕಾಂಬ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ಕ್ರಮವಾಗಿ ಅಜೇಯ 36 ಹಾಗೂ 23ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಸೂರ್ಯಕುಮಾರ್ ಯಾದವ್, ಶುಬ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಉಮೇಶ್ ಯಾದವ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್
ಬೆಂಚ್: ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್, ಆಷ್ಟನ್ ಅಗರ್, ಲ್ಯಾನ್ಸ್ ಮೋರಿಸ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications