ಭಾರತ vs ಆಸ್ಟ್ರೇಲಿಯಾ: ಅಂತಿಮ ಪಂದ್ಯ ಗೆದ್ದು ಸರಣಿ ವಶಕ್ಕೆ ಪಡೆಯಲಿದೆಯಾ ಟೀಮ್ ಇಂಡಿಯಾ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದ್ದು ನಿರ್ಣಾಯಕ ಪಂದ್ಯವಾಗಿರುವ ಕಾರಣ ಕುತೂಹಲ ಹೆಚ್ಚಾಗಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದ ಬಳಿಕ ಮಳೆಯಿಂದ ಅಡ್ಡಿಯುಂಟಾಗಿದ್ದ ಎರಡನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಪಂದ್ಯ ಗೆದ್ದು ಸರಣಿ ಸಮಬಲಗೊಳಿಸುವಲ್ಲಿ ಯಶಸ್ವುಯಾಗಿತ್ತು. ಇದೀಗ ಅಂತಿಮ ಪಂದ್ಯದಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ಆತ್ಮವಿಶ್ವಾಸದಲ್ಲಿದೆ.

ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಸರಣಿ ಮಹತ್ವದ ಟೂರ್ನಿಗೆ ಉತ್ತಮ ಪೂರ್ವ ತಯಾರಿಯಾಗಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ಪ್ರದರ್ಶನ ಕಳವಳಕಾರಿಯಾಗಿದೆ. ಆದರೂ ಕಳೆದ ಪಂದ್ಯದಲ್ಲಿ ಬೂಮ್ರಾ ಹಾಗೂ ಅಕ್ಷರ್ ಪಟೇಲ್ ಪ್ರದರ್ಶನ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ.

ಲಾರ್ಡ್ಸ್‌ ಮೈದಾನದಲ್ಲಿ ಕ್ರಿಕೆಟ್ ವೃತ್ತಿಜೀವನಕ್ಕೆ ಅಂತ್ಯ ಹಾಡಿದ ಜೂಲನ್ ಗೋಸ್ವಾಮಿಲಾರ್ಡ್ಸ್‌ ಮೈದಾನದಲ್ಲಿ ಕ್ರಿಕೆಟ್ ವೃತ್ತಿಜೀವನಕ್ಕೆ ಅಂತ್ಯ ಹಾಡಿದ ಜೂಲನ್ ಗೋಸ್ವಾಮಿ

ಹೈದರಾಬಾದ್‌ನಲ್ಲಿ ಸರಣಿಯ ಅಂತಿಮ ಪಂದ್ಯ

ಹೈದರಾಬಾದ್‌ನಲ್ಲಿ ಸರಣಿಯ ಅಂತಿಮ ಪಂದ್ಯ

ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಈ ಸರಣಿಯ ಮೊದಲ ಪಂದ್ಯವನ್ನು ಮೊಹಾಲಿಯಲ್ಲಿ ಆಡಿದ್ದವು. ಈ ಪಂದ್ಯದಲ್ಲಿ ಭಾರತ ಬ್ಯಾಟಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಬೃಹತ್ ಮೊತ್ತದ ಗುರಿ ನಿಗದಿಪಡಿಸಿತ್ತು. ಆದರೆ ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ಬಂದ ಕಾರಣ ಟೀಮ್ ಇಂಡಿಯಾ ಪಂದ್ಯವನ್ನು ಸೋತಿತ್ತು. ನಂತರ ಕಾನ್ಪುರದಲ್ಲಿ ನಡೆದ ಪಂದ್ಯ ಮಳೆಯಿಂದಾಗಿ ತಲಾ 8 ಓವರ್‌ಗಳಿಗೆ ಸೀಮಿತವಾಗಿದ್ದು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ಪ್ರದರ್ಶಿಸುವ ಮೂಲಕ ಭಾರತದ ಗೆಲುವಿನಲ್ಲಿ ಕೊಡುಗೆ ನೀಡಿರು. ಇದೀಗ ಹೈದರಾಬಾದ್‌ನಲ್ಲಿ ಸರಣಿಯ ಅಂತಿಮ ಪಂದ್ಯ ನಡೆಯುತ್ತಿರುವುದರಿಂದಾಗಿ ಇಲ್ಲಿ ಬೌಲಿಂಗ್ ವಿಭಾಗದ ಪಾತ್ರ ಮಹತ್ವದ್ದಾಗಿದೆ. ಈ ಪಿಚ್‌ನಲ್ಲಿ ಟೀಮ್ ಇಂಡಿಯಾದ ಬೌಲರ್‌ಗಳು ಎಷ್ಟು ಪರಿಣಾಮಕಾರಿಯಾಗಿ ಬೌಲಿಂಗ್ ದಾಳಿ ನಡೆಸಲಿದ್ದಾರೆ ಎಂಬುದು ಕುತೂಹಲದ ಪ್ರಶ್ನೆಯಾಗಿದೆ.

ಹೈದರಾಬಾದ್ ಕ್ರೀಡಾಂಗಣದಲ್ಲಿ ಭಾರತದ ಟಿ20I ದಾಖಲೆ

ಹೈದರಾಬಾದ್ ಕ್ರೀಡಾಂಗಣದಲ್ಲಿ ಭಾರತದ ಟಿ20I ದಾಖಲೆ

ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಈವರೆಗೆ ಕೇವಲ ಒಂದು ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಮಾತ್ರವೇ ಆಡಿದೆ. 2019ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದಿದ್ದ ಈ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಇದಕ್ಕೂ ಮುನ್ನ 2017ರಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಒಂದು ಚುಟುಕು ಸರಣಿಯನ್ನು ಆಯೋಜನೆ ಮಾಡಲಾಗಿತ್ತಾದರೂ ಈ ಪಂದ್ಯ ಮಳೆಯಿಂದಾಗಿ ರದ್ಧಾಗಿತ್ತು.

ಎರಡು ತಂಡಗಳ ಸ್ಕ್ವಾಡ್ ಹೀಗಿದೆ

ಎರಡು ತಂಡಗಳ ಸ್ಕ್ವಾಡ್ ಹೀಗಿದೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್ , ದೀಪಕ್ ಚಾಹರ್, ದೀಪಕ್ ಹೂಡಾ

ಆಸ್ಟ್ರೇಲಿಯಾ ತಂಡ: ಆರನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಸ್ಟೀವನ್ ಸ್ಮಿತ್, ಡೇನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಕೇನ್ ರಿಚರ್ಡ್ಸನ್, ಆಶ್ಟನ್ ಅಗರ್, ಜೋಶ್ ಇಂಗ್ಲಿಸ್ , ನಾಥನ್ ಎಲ್ಲಿಸ್

For Quick Alerts
ALLOW NOTIFICATIONS
For Daily Alerts
Story first published: Sunday, September 25, 2022, 8:53 [IST]
Other articles published on Sep 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X