ಭಾರತ vs ಆಸ್ಟ್ರೇಲಿಯಾ: 3ನೇ ಏಕದಿನ ಪಂದ್ಯ, Live ಸ್ಕೋರ್

ಭಾರತ ಹಾಗ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಇಂದು ನಡೆಯುತ್ತಿದೆ. ಕ್ಯಾನ್‌ಬೆರಾದಲ್ಲಿ ನಡೆಯುವ ಈ ಪಂದ್ಯದಲ್ಲಿ ಗೆದ್ದು ವೈಟ್ ವಾಶ್ ತಪ್ಪಿಸುಕೊಳ್ಳುವ ಅನಿವಾರ್ಯತೆಯಲ್ಲಿ ಟೀಮ್ ಇಂಡಿಯಾ ಇದ್ದರೆ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡುವ ಉತ್ಸಾಹದಲ್ಲಿ ಆಸ್ಟ್ರೇಲಿಯಾ ತಂಡವಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ಸಿಡ್ನಿಯಲ್ಲಿ ನಡೆದಿದ್ದು ಈ ಎರಡು ಪಂದ್ಯಗಳನ್ನು ಕೂಡ ಭಾರತ ಸೋತಿತ್ತು. ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿಹಾಕುವಲ್ಲಿ ಭಾರತದ ಬೌಲಿಂಗ್ ಪಡೆ ಸಂಪೂರ್ಣವಾಗಿ ವಿಫಲವಾಗಿತ್ತು. ಇಂದು ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ಪಂದ್ಯ ನಡೆಯುತ್ತಿದ್ದು ಭಾರತ ಮೊನಚಿತ ದಾಳಿ ಸಂಘಟಿಸುವ ನಿರೀಕ್ಷೆಯಲ್ಲಿದೆ.
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ನಾಲ್ಕು ಬದಲಾವಣೆ ಮಾಡಿಕೊಳ್ಳಲಾಗಿದೆ. ವೇಗಿ ಟಿ ನಟರಾಜನ್ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆಯನ್ನು ಮಾಡುತ್ತಿದ್ದಾರೆ. ಶುಬ್ಮನ್ ಗಿಲ್, ಶಾರ್ದೂಲ್ ಠಾಕೂರ್ ಹಾಗೂ ಸ್ಪಿನ್ನರ್ ಕುಲ್‌ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮಯಾಂಕ್ ಅಗರ್ವಾವ್, ಮೊಹಮ್ಮದ್ ಶಮಿ, ನವ್‌ದೀಪ್ ಸೈನಿ ಹಾಗೂ ಚಾಹಲ್ ಅವರನ್ನು ಆಡುವ ಬಳಗದಿಂದ ಹೊರಗಿಡಲಾಗಿದೆ.
ಆಸ್ಟ್ರೇಲಿಯಾ ತಂಡದಲ್ಲಿ ಕ್ಯಾಮರೂನ್ ಗ್ರೀನ್ ಪದಾರ್ಪಣೆಯನ್ನು ಮಾಡಿದ್ದು ಸೀನ್ ಅಬಾಟ್ ಹಾಗೂ ಆಷ್ಟನ್ ಅಗರ್ ಕೂಡ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಾರ್ನರ್ ಅಲಭ್ಯತೆಯಲ್ಲಿ ಮಾರ್ನಸ್‌ಲ್ಯಾಬುಶೈನ್ ಆಸಿಸ್ ಪರವಾಗಿ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.
live ಸ್ಕೋರ್‌ಪಟ್ಟಿ ಇಲ್ಲಿದೆ:
ಆಸ್ಟ್ರೇಲಿಯಾ ಆಡುವ ಬಳಗ: ಆರೋನ್ ಫಿಂಚ್ (ನಾಯಕ), ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಅಲೆಕ್ಸ್ ಕ್ಯಾರಿ (ಪ), ಕ್ಯಾಮೆರಾನ್ ಗ್ರೀನ್, ಆಷ್ಟನ್ ಅಗರ್, ಸೀನ್ ಅಬಾಟ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್
ಭಾರತ ಆಡುವ ಬಳಗ: ಶಿಖರ್ ಧವನ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಟಿ ನಟರಾಜನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications