Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Aus 3rd ODI: ನಿರ್ಣಾಯಕ ಪಂದ್ಯದಲ್ಲಿ ಆಸಿಸ್‌ಗೆ ತಿರುಗೇಟು ನೀಡುತ್ತಾ ಭಾರತ: ಪಂದ್ಯದ ಸಮಯ, ಸಂಭಾವ್ಯ XI

India vs Australia 3rd ODI, match timings, Pitch report, playing XI ind Live telecast details

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ಸೋಲು ಗೆಲುವಿನ ರುಚಿ ಕಂಡಿರುವ ಕಾರಣ ಕುತೂಹಲ ಕೆರಳಿಸಿದೆ.

ಮುಂಬೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ ಬಳಿಕ ಅದ್ಭುತ ಕಮ್‌ಬ್ಯಾಕ್ ಮಾಡಿದ ಆಸ್ಟ್ರೇಲಿಯಾ ಭಾರತಕ್ಕೆ ಎರಡನೇ ಪಂದ್ಯದಲ್ಲಿ ಸೋಲಿನ ರುಚಿ ತೋರಿಸಿದೆ. ಅದರಲ್ಲೂ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿರುವ ಕಾರಣದಿಂದಾಗಿ ನಿರ್ಣಾಯಕ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇತ್ತ ಭಾರತ ತಂಡದ ಮೇಲಿನ ಒತ್ತಡ ಹೆಚ್ಚಾಗಿದೆ.

ಪ್ರಮುಖ ಆಟಗಾರರು ವಿಫಲವಾಗುತ್ತಿರುವುದು ಮತ್ತೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ನ ನಿದ್ದೆಗೆಡಿಸಿದೆ. ಅದರಲ್ಲೂ ಕೆಲ ಆಟಗಾರರು ಒಂದೇ ರೀತಿಯಾಗಿ ವಿಕೆಟ್ ಕಳೆದುಕೊಳ್ಳುತ್ತಿರುವುದು ಕೂಡ ಕಳವಳ ಮೂಡಿಸಿದೆ. ಚೆನ್ನೈನ ಪಂದ್ಯದಲ್ಲಿ ಈ ಎಲ್ಲಾ ಪ್ರಶ್ನೆಗಳಿಗೆ ಟೀಮ್ ಇಂಡಿಯಾ ಯಾವ ರೀತಿಯ ಉತ್ತರಗಳನ್ನು ಕಂಡುಕೊಳ್ಳಲಿದೆ ಎಂಬುದು ಮಹತ್ವ ಪಡೆದುಕೊಂಡಿದೆ.

ಪಂದ್ಯದ ಸಮಯ ನೇರಪ್ರಸಾರದ ಮಾಹಿತಿ

ಪಂದ್ಯದ ಸಮಯ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಈ ಪಂದ್ಯ ಅಹರ್ನಿಶಿಯಾಗಿ ನಡೆಯಲಿದ್ದು ಭಾರತೀಯ ಕಾಲಮಾನ ಮಧ್ಯಾಹ್ನ 1:30 ಗಂಟೆಗೆ ಪಂದ್ಯ ಆರಂಭವಾಗಲಿದೆ. 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ಈ ಪಂದ್ಯ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯದ ವೀಕ್ಷಣೆಗೆ ಅವಕಾಶವಿದೆ.

ಪಿಚ್ ರಿಪೋರ್ಟ್

ಪಿಚ್ ರಿಪೋರ್ಟ್

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಣನಲ್ಲಿ ಈವರೆಗೆ ನಡೆದಿರುವ 21 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳ ಅಂಕಿಅಂಶಗಳನ್ನು ನೋಡಿದಾಗ ಬ್ಯಾಟಿಂಗ್ ಹಾಗೂ ಬೌಲಿಂಗ್‌ಗೆ ಉತ್ತಮ ಸ್ಪರ್ಧೆಯಿರುವ ಪಿಚ್ ಎಂಬುದು ಸ್ಪಷ್ಟವಾಗುತ್ತದೆ. 1987ರ ಬಳಿಕ ಇಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುತ್ತಿದ್ದು ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಸರಾಸರಿ ಸ್ಕೋರ್ 259 ರನ್ ಆಗಿದೆ. ಕಳೆದ ಕೆಲ ವರ್ಷಗಳಿಂದ ಇಲ್ಲಿನ ಪಿಚ್ ಸಾಮಾನ್ಯವಾಗಿ ನಿಧಾನಗತಿಯಾಗಿದ್ದು ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ದೊರೆಯುತ್ತದೆ. ಅಲ್ಲದೆ ಪಂದ್ಯ ಮುಂದುವರಿಯುತ್ತಿದ್ದಂತೆಯೇ ಮತ್ತಷ್ಟು ನಿಧಾನವಾಗಲಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಸವಾಲು ಎನಿಸಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ಸಂಭಾವ್ಯ ಆಡುವ ಬಳಗ

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೈನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಶಾನ್ ಅಬಾಟ್, ನಾಥನ್ ಎಲ್ಲಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ

ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ

Story first published: Tuesday, March 21, 2023, 13:10 [IST]
Other articles published on Mar 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+