Ind vs Aus 3rd ODI: ಸ್ಟೀವ್ ಸ್ಮಿತ್ ವಿಕೆಟ್ ಪಡೆದು ಅಪರೂಪದ ಸಾಧನೆ ಮಾಡಿದ ಹಾರ್ದಿಕ್ ಪಾಂಡ್ಯ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲ ಮೊದಲಿಗೆ ಬ್ಯಾಟಿಂಗ್ ಮಾಡಿರುವ ಆಸ್ಟ್ರೇಲಿಯಾ ತಂಡ 269 ರನ್‌ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುತ್ತಿರುವ ಸ್ಟೀವ್ ಸ್ಮಿತ್ ಶೂನ್ಯಕ್ಕೆ ಔಟಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಆಸಿಸ್ ನಾಯಕನ ವಿಕೆಟ್ ಪಡೆಯುವ ಮೂಲಕ ಮೈಲುಗೈ ಸಾಧಿಸಿದರು.
ಇನ್ನು ಏಕದಿನ ಮಾದರಿಯಲ್ಲಿ ಸ್ಟೀವ್ ಸ್ಮಿತ್ ಅವರನ್ನು ಔಟ್ ಮಾಡುವ ಮೂಲಕ ಸುದೀರ್ಘ ಕಾಲದ ಬಳಿಕ ಸ್ಮಿತ್ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಹೀಗಾಗಿ 2017ರ ಬಳಿಕ ಏಕದಿನ ಮಾದರಿಯಲ್ಲಿ ಸ್ಟೀವ್ ಸ್ಮಿತ್ ಅವರನ್ನು ರನ್ ಗಳಿಸುವ ಮುನ್ನವೇ ಔಟ್ ಮಾಡಿದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ ಹಾರ್ದಿಕ್ ಪಾಂಡ್ಯ. ಇದಕ್ಕೂ ಮುನ್ನ ಮೊಹಮ್ಮದ್ ಆಮಿರ್ 2017ರಲ್ಲಿ ಸ್ಟೀವ್ ಸ್ಮಿತ್ ಅವರನ್ನು ಏಕದಿನ ಮಾದರಿಯಲ್ಲಿ ಶೂನ್ಯಕ್ಕೆ ಔಟ್ ಮಾಡಿದ್ದರು.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಹಾರ್ದಿಕ್ ಪಾಂಡ್ಯ ಹಾಗೂ ಕುಲ್‌ದೀಪ್ ಯಾದವ್ ತಲಾ ಮೂರು ವಿಕೆಟ್ ಕಿತ್ತು ಮಿಂಚಿದ್ದಾರೆ. ಇನ್ನು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದುಕೊಂಡರು.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಜಯದೇವ್ ಉನದ್ಕತ್, ಯುಜ್ವೇಂದ್ರ ಚಹಾಲ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
ಬೆಂಚ್: ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ನಾಥನ್ ಎಲ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications