Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

India vs Australia: ಸರಣಿ ಗೆಲುವಿನ ಮೇಲೆ ಭಾರತದ ಕಣ್ಣು: 3ನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ XI

India vs Australia 3rd ODI: Team Indias probable playing XI for final ODI of the series

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಬುಧವಾರ ನಡೆಯಲಿದ್ದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಒಂದೊಂದು ಗೆಲುವು ಸಾಧಿಸಿದ್ದು ಸರಣಿ ಗೆಲುವಿಗೆ ಅಂತಿಮ ಪಂದ್ಯ ನಿರ್ಣಾಯಕವಾಗಿದೆ. ಹೀಗಾಗಿ ಈ ಪಂದ್ಯ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ವಿಶಾಖಪಟ್ಟಣಂನಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿರುವ ಪ್ರದರ್ಶನ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಭಾರತ ನೀರಸ ಪ್ರದರ್ಶನ ನೀಡಿತ್ತು. ಅದರಲ್ಲೂ ಬ್ಯಾಟಿಂಗ್‌ನಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಎಸೆತಕ್ಕೆ ಕಂಗಾಲಾದ ಭಾರತೀಯ ದಾಂಡಿಗರು ತಂಡ ಅಲ್ಪ ಮೊತ್ತಕ್ಕೆ ಕುಸಿಯಲು ಕಾರಣವಾದರು. ಹೀಗಾಗಿ ಅಂತಿಮ ಪಂದ್ಯದಲ್ಲಿ ಸರಣಿಯ ಎರಡನೇ ಪಂದ್ಯದಲ್ಲಿ ಮಾಡಿರುವ ತಪ್ಪನ್ನು ತಿದ್ದಿಕೊಳ್ಳುವುದು ಅನಿವಾರ್ಯವಾಗಿದೆ.

ಹಾಗಾದರೆ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗ ಹೇಗಿರಬೇಕು? ಯಾವುದೆಲ್ಲಾ ಬದಲಾವಣೆ ಮಾಡಿಕೊಂಡರೆ ತಂಡ ಗೆಲುವು ಸಾಧಿಸಿ ಸರಣಿ ವಶಕ್ಕೆ ಪಡೆಯಲು ಸಾಧ್ಯವಿದೆ. ಮುಂದೆ ಓದಿ..

ಆರಂಭಿಕರಾಗಿ ರೋಹಿತ್- ಶುಬ್ಮನ್ ಗಿಲ್
ಈ ಸರಣಿಯಲ್ಲಿ ಟೀಮ್ ಇಂಡಿಯಾದ ಆರಂಭಿಕರು ಮಿಂಚುವಲ್ಲಿ ವಿಫಲವಾಗಿದ್ದಾರೆ. ಮೊದಲ ಪಂದ್ಯಕ್ಕೆ ರೋಹಿತ್ ಅಲಭ್ಯವಾಗಿದ್ದರೂ ಎರಡನೇ ಪಂದ್ಯದಲ್ಲಿಯೂ ನಾಯಕ ರೋಹಿತ್ ಶರ್ಮಾ ಮಿಂಚಲು ವಿಫಲವಾದರು. ಜೊತೆಗೆ ಶುಬ್ಮನ್ ಗಿಲ್ ಕೂಡ ಈ ಸರಣಿಯಲ್ಲಿ ನಿರಾಸೆ ಮೂಡಿಸಿದ್ದಾರೆ. ಆದರೆ ಇಬ್ಬರು ಆಟಗಾರರು ಕೂಡ ಉತ್ತಮ ಲಯದಲ್ಲಿ ಇರುವ ಕಾರಣ ಅವರಿಂದ ಅಂತಿಮ ಪಂದ್ಯದಲ್ಲಿ ಉತ್ತಮ ಜೊತೆಯಾಟವನ್ನು ನಿತರೀಕ್ಷಿಸಬಹುದಾಗಿದೆ.

ಮಧ್ಯಮ ಕ್ರಮಾಂಕ; ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್
ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯಗೆಳು ಇಲ್ಲ. ವಿರಾಟ್ ಕೊಹ್ಲಿ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಈ ಪಂದ್ಯದಲ್ಲಿ ಕೊಹ್ಲಿ 31 ರನ್‌ಗಳಿಸಿದ್ದಾರೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್‌ನಿಂದ ರನ್ ಬರುವುದನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ಮೊದಲ ಎರಡು ಪಂದ್ಯಗಳಲ್ಲಿಯೂ ಗೋಲ್ಡನ್ ಡಕ್ ಆಗಿ ಔಟ್ ಆಗಿದ್ದಾರೆ. ಹೀಗಾಗಿ ಸೂರ್ಯ ಮೇಲೆ ಒತ್ತಡಗಳು ಹೆಚ್ಚಾಗಿರುವುದು ಸುಳ್ಳಲ್ಲ. ಇನ್ನು ಕೆಎಲ್ ರಾಹುಲ್ ಎರಡನೇ ಪಂದ್ಯದಲ್ಲಿ ವಿಫಲವಾಗಿದ್ದರು ಕೂಡ ಮೊದಲ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದಾರೆ.

ಆಲ್‌ರೌಡರ್‌ಗಳು ಹಾಗೂ ಬೌಲಿಂಗ್ ವಿಭಾಗ
ಇನ್ನು ಈ ಪಂದ್ಯ ಚೆನ್ನೈನಲ್ಲಿ ನಡೆಯಲಿರುವ ಕಾರಣ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿ. ಹೀಗಾಗಿ ಈ ಪಂದ್ಯದಲ್ಲಿ ವಾಶಿಂಗ್ಟನ್ ಸುಂದರ್‌ಗೆ ಅವಕಾಶ ದೊರೆಯಬಹುದು. ಸುಂದರ್ ಬ್ಯಾಟಿಂಗ್‌ನಲ್ಲಿಯೂ ತಂಡಕ್ಕೆ ನೆರವಾಗುವ ಸಾಮರ್ಥ್ಯಹೊಂದಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್‌ಗೆ ಕೂಡ ಅವಕಾಶ ದೊರೆಯುವ ಸಾಧ್ಯತೆಯಿದೆ. ಇನ್ನು ವೇಗಿಗಳಾಗಿ ಅನುಭವಿ ಬೌಲರ್ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಆಡುವ ಬಳಗದಲ್ಲಿ ಮುಂದುವರಿಯಲಿದ್ದಾರೆ.

ಸಂಭಾವ್ಯ ಟೀಮ್ ಇಂಡಿಯಾ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

Story first published: Tuesday, March 21, 2023, 20:10 [IST]
Other articles published on Mar 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+