ಭಾರತ vs ಆಸ್ಟ್ರೇಲಿಯಾ 3ನೇ ಟಿ20 ಪಂದ್ಯದ ಮಾಹಿತಿ, ಸಂಭಾವ್ಯ ಆಡುವ 11ರ ಬಳಗ; ಪಿಚ್ ಹವಾಮಾನ ವರದಿ
ಮಂಗಳವಾರ, ನವೆಂಬರ್ 28ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯವು ಭಾರತೀಯತ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ.
ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಪ್ರಸ್ತುತ ಅದ್ಭುತ ಫಾರ್ಮ್‌ನಲ್ಲಿದೆ ಮತ್ತು ಸರಣಿಯ ಆರಂಭಿಕ ಎರಡು ಪಂದ್ಯಗಳನ್ನು ಗೆದ್ದು, ಸರಣಿ ಗೆಲುವಿನ ಕಣ್ಣಿಟ್ಟಿದೆ.

ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನೀಡಿದ್ದ 208 ರನ್‌ಗಳ ಬೃಹತ್ ಮೊತ್ತವನ್ನು ಟೀಮ್ ಇಂಡಿಯಾ ಬೆನ್ನಟ್ಟಿತು. ನಾಯಕ ಸೂರ್ಯಕುಮಾರ್ ಯಾದವ್ 42 ಎಸೆತಗಳಲ್ಲಿ 80 ರನ್ ಮತ್ತು ಇಶಾನ್ ಕಿಶನ್ ಅವರ ಸ್ಫೋಟಕ ಬ್ಯಾಟಿಂಗ್ ಗೆಲುವಿಗೆ ನೆರವಾಯಿತು.
ಎರಡನೇ ಟಿ20 ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು ತನ್ನ 20 ಓವರ್‌ಗಳಲ್ಲಿ 235 ರನ್‌ಗಳ ದೊಡ್ಡ ಟಾರ್ಗೆಟ್ ನೀಡಿದ ಬಳಿಕ, ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು 44 ರನ್‌ಗಳಿಂದ ಸೋಲಿಸಿತು.

ಭಾರತದ ಅಗ್ರ ಮೂವರು ಬ್ಯಾಟರ್‌ಗಳಾದ ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಅವರ ಅಮೋಘ ತಲಾ ಅರ್ಧಶತಕ ಹಾಗೂ ಕೊನೆಯಲ್ಲಿ ರಿಂಕು ಸಿಂಗ್ ಅವರ ಬಿರುಸಿನ 9 ಎಸೆತಗಳಲ್ಲಿ ಅಜೇಯ 31 ರನ್‌ಗಳ ನೆರವಿನಿಂದ ಬೃಹತ್ ಮೊತ್ತಕ್ಕೆ ಕಾರಣವಾದರು.
ಬೌಲರ್‌ಗಳ ಪೈಕಿ ರವಿ ಬಿಷ್ಣೋಯ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಆಸ್ಟ್ರೇಲಿಯಾ ಸೋಲಿಗೆ ಕೊನೆಯ ಮೊಳೆ ಹೊಡೆದರು.
ಇದೀಗ ಭಾರತ ತಂಡವು ತಮ್ಮ ಅತ್ಯುತ್ತಮ ಫಾರ್ಮ್‌ನೊಂದಿಗೆ, ಇನ್ನೂ ಎರಡು ಪಂದ್ಯಗಳು ಬಾಕಿ ಉಳಿದಿರುವಂತೆಯೇ ಗುವಾಹಟಿಯಲ್ಲಿ ಸರಣಿಯನ್ನು ವಶಪಡಿಸಿಕೊಳ್ಳಲು ಮತ್ತು ಸರಣಿಯಲ್ಲಿ 3-0 ಅಂತರದ ಮುನ್ನಡೆ ಸಾಧಿಸಲು ಎದುರು ನೋಡುತ್ತಿದೆ.
ಹವಾಮಾನ ವರದಿ
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ಸುತ್ತಮುತ್ತ ತಾಪಮಾನವು ಸುಮಾರು 21 ಡಿಗ್ರಿ ಸೆಲ್ಸಿಯಸ್ ಮತ್ತು ಆರ್ದ್ರತೆಯು ಶೇ.69ರಷ್ಟು ಹಾಗೂ ಮಳೆಯಾಗುವ ಸಾಧ್ಯತೆಯಿಲ್ಲ ಎಂದು ನಿರೀಕ್ಷಿಸಲಾಗಿದೆ.
ಪಿಚ್ ವರದಿ
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನ ಪಿಚ್ ಉತ್ತಮ ಬ್ಯಾಟಿಂಗ್ ಮೇಲ್ಮೈ ಎಂದು ನಿರೀಕ್ಷಿಸಲಾಗಿದೆ. ಈ ಸ್ಥಳದಲ್ಲಿ ಆಡಿದ ಕೊನೆಯ ಟಿ20 ಪಂದ್ಯದಲ್ಲಿ 400ಕ್ಕೂ ಅಧಿಕ ರನ್‌ಗಳು ಹರಿದುಬಂದಿವೆ. ಇಬ್ಬನಿ ಪ್ರಮುಖ ಅಂಶವಾಗಿರುವುದರಿಂದ, ಟಾಸ್ ಗೆದ್ದ ತಂಡದ ನಾಯಕ ಈ ಮೈದಾನದಲ್ಲಿ ಚೇಸಿಂಗ್ ಮಾಡಲು ಆದ್ಯತೆ ನೀಡುವ ಸಾಧ್ಯತೆಯಿದೆ.
ಭಾರತ vs ಆಸ್ಟ್ರೇಲಿಯಾ 3ನೇ ಟಿ20 ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ/ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್‌ವೆಲ್, ಜೇಸನ್ ಬೆಹ್ರೆಂಡಾರ್ಫ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications