ಭಾರತ vs ಆಸ್ಟ್ರೇಲಿಯಾ, 3ನೇ ಟಿ20: ಸಮಯ, ನೇರಪ್ರಸಾರ ಹಾಗೂ ಪಂದ್ಯದ ಸಂಪೂರ್ಣ ಮಾಹಿತಿ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಮಂಗಳವಾರ ನಡೆಯಲಿದೆ. ಭಾರತ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದು ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ವೈಟ್‌ವಾಶ್ ಮಾಡಿದ ಹಿರಿಮೆಯನ್ನು ಪಡೆದುಕೊಳ್ಳಲಿದೆ. ಆತಿಥೇಯ ಆಸ್ಟ್ರೇಲಿಯಾ ಈ ವೈಟ್ ವಾಸ್ ಅವಮಾನದಿಂದ ತಪ್ಪಿಸಿಕೊಳ್ಳಲು ಹರಸಾಹಸಪಡಲಿದೆ.
ಏಕದಿನ ಸರಣಿಯನ್ನು ಗೆದ್ದ ಆಸ್ಟ್ರೇಲಿಯಾ ಚುಟುಕು ಕ್ರಿಕೆಟ್‌ನಲ್ಲಿ ಸಂಪೂರ್ಣ ಹಿನ್ನೆಡೆಯನ್ನು ಕಂಡಿದೆ. ಅಂತಿಮ ಪಂದ್ಯದಲ್ಲಿ ಗೆದ್ದು ಡಿಸೆಂಬರ್ 17ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗೆ ಹೊಸ ಹುಮ್ಮಸ್ಸಿನೊಂದಿಗೆ ಕಣಕ್ಕಿಳಿಯಲಿದೆ. ಆದರೆ ಚುಟುಕು ಕ್ರಿಕೆಟ್‌ನಲ್ಲಿ ಭಾರತ ಅದ್ಭುತ ಲಯದಲ್ಲಿದೆ.
ಮಂಗಳವಾರ ನಡೆಯಲಿರುವ ಅಂತಿಮ ಟಿ20ಪಂದ್ಯದ ಆರಂಭ, ಸ್ಥಳ, ನೇರಪ್ರಸಾರದ ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂದೆ ಓದಿ..

ದಿನಾಂಕ ಹಾಗೂ ಸ್ಥಳ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯ ಡಿಸೆಂಬರ್ 8ರಂದು ಮಂಗಳವಾರ ನಡೆಯಲಿದೆ. ಸಿಡ್ನಿಯಲ್ಲಿರುವ ಸಿಡ್ನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗ್ರೌಂಡ್ ಈ ಅಂತಿಮ ಪಂದ್ಯಕ್ಕೆ ವೇದಿಕೆಯಾಗುತ್ತಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1:40ಕ್ಕೆ ಪಂದ್ಯ ಆರಂಭವಾಗಲಿದ್ದು 1:10ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ನೇರಪ್ರಸಾರ
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯ ನೇರಪ್ರಸಾರದ ಹಕ್ಕನ್ನು ಸೋನಿ ನೆಟ್‌ವರ್ಕ್ ಹೊಂದಿದೆ. ಸೋನಿ 6, ಸೋನಿ ಟೆನ್ 1, ಸೋನಿ ಟೆನ್ 3 ವಾಹಿನಿಗಳಲ್ಲಿ ವೀಕ್ಷಿಸಬಹುದಾಗಿದೆ. ಸೋನಿ ನೆಟ್‌ವರ್ಕ್‌ನ ಸೋನಿ ಲೈವ್ ಚಂದಾದಾರರಾಗಿದ್ದರೆ ನೇರಪ್ರಸಾರವನ್ನು ಈ ಮೂಲಕವೂ ವೀಕ್ಷಿಸಬಹುದಾಗಿದೆ.

ಸಂಭಾವ್ಯ ತಂಡ: ಟೀಮ್ ಇಂಡಿಯಾ
ಭಾರತ ಆಡುವ ಬಳಗ: ಕೆ.ಎಲ್. ರಾಹುಲ್(ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಸಂಜು ಸ್ಯಾಮ್ಸನ್ / ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಟಿ ನಟರಾಜನ್

ಸಂಭಾವ್ಯ ತಂಡ: ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ಆಡುವ ಬಳಗ: ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್/ನಾಯಕ), ಡಿ'ಆರ್ಸಿ ಶಾರ್ಟ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಮಾರ್ಕಸ್ ಸ್ಟೋಯಿನಿಸ್, ಡೇನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಮಿಚೆಲ್ ಸ್ವೆಪ್ಸನ್, ಆಡಮ್ ಜಂಪಾ, ಆಂಡ್ರ್ಯೂ ಟೈ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications