India vs Australia: ಇಂದೋರ್ ಪಿಚ್ ಬಗ್ಗೆ ಟೀಕಿಸಿದ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ

ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್‌ನಲ್ಲಿ ನಡೆಯುತ್ತಿದ್ದು ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ ಸಂಪೂರ್ಣ ಹಿಡಿತ ಸಾಧಿಸಿದೆ. ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ಕಳಪೆ ಪ್ರದರ್ಶನ ನೀಡಿದ್ದು ಕೇವಲ 109 ರನ್‌ಗಳಿಗೆ ಆಲೌಟ್ ಆಗಿದೆ. ಈ ಪ್ರದರ್ಶನದ ಬಳಿಕ ಮಾತನಾಡಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್ ವಾ ಇಂದೋರ್ ಪಿಚ್ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.
ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದ ಪಿಚ್ ಟೆಸ್ಟ್ ಕ್ರಿಕೆಟ್‌ನ ಗುಣಮಟ್ಟಕ್ಕೆ ಇಲ್ಲ ಎಂದಿದ್ದಾರೆ ಮಾರ್ಕ್ ವಾ. ಮೊದಲ ದಿನದಾಟದಲ್ಲಿಯೇ ಪಿಚ್ ಸಾಕಷ್ಟು ತಿರುವು ಪಡೆದಿದ್ದು ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗ ಕ್ರೀಸ್‌ನಲ್ಲಿ ನೆಲೆಯೂರಲು ಸಂಪೂರ್ಣವಾಗಿ ವಿಫಲವಾಗಿತ್ತು. ಹೀಗಾಗಿ ಭಾರತ ತಂಡ ಮೊದಲ ದಿನದಾಟದಲ್ಲಿ ಹಿನ್ನಡೆ ಕಂಡಿದೆ. ಆದರೆ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭವನ್ನು ಪಡೆದಿದ್ದು ಈಗಾಗಲೇ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ನಾಗ್ಪುರ ಹಾಗೂ ದೆಹಲಿಯಲ್ಲಿ ನಡೆದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮೂರನೇ ದಿನದಾಟದ ಒಳಗೆ ಸೋಲು ಕಂಡು ಹೀನಾಯವಾಗಿ ಶರಣಾಗಿತ್ತು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಟೀಮ್ ಇಂಡಿಯಾ ನಾಯಕನ ನಿರ್ಧಾರ ಸಮರ್ಥನೆ ಮಾಡಿಕೊಳ್ಳುವಂಥಾ ಪ್ರದರ್ಶನ ಭಾರತ ತಂಡದಿಂದ ಬಾರಲಿಲ್ಲ. ಭಾರತದ ಬ್ಯಾಟಿಂಗ್ ವಿಭಾಗ ಆಸ್ಟ್ರೇಲಿಯಾದ ಸ್ಪಿನ್ನರ್‌ಗಳ ವಿರುದ್ಧ ಮಂಡಿಯೂರಿದರು. 10 ವಿಕೆಟ್‌ಗಳ ಪೈಕಿ 9 ವಿಕೆಟ್‌ಗಳನ್ನು ಆಸ್ಟ್ರೇಲಿಯಾದ ಸ್ಪಿನ್ನರ್‌ಗಳೃಏ ಹಂಚಿಕೊಂಡಿದ್ದಾರೆ.
"ಫಾಕ್ಸ್ ಸ್ಪೋರ್ಟ್ಸ್ ಜೊತೆಗೆ ಮಾತನಾಡಿರುವ ಸಂದರ್ಭದಲ್ಲಿ ಮಾರ್ಕ್ ವಾ ಇಂದೋರ್ ಪಂದ್ಯದ ಪಿಚ್ ಟೆಸ್ಟ್‌ಗೆ ಸೂಕ್ತವಾದ ಪಿಚ್ ಆಗಿಲ್ಲ ಎಂದಿದ್ದಾರೆ. ಇನ್ನು ಈ ಪಂದ್ಯದಲ್ಲಿ ಭಾರತದ ಪರ ಅತಿ ಹೆಚ್ಚು ರನ್‌ಗಳಿಸಿದ್ದು ವಿರಾಟ್ ಕೊಹ್ಲಿ. ಅವರು ಟಾಡ್ ಮರ್ಫಿಗೆ ಎಲ್‌ಬಿಡಬ್ಲ್ಯು ಆಗಿ ವಿಕೆಟ್ ಕಳೆದುಕೊಳ್ಳುವ ಮುನ್ನ 22 ರನ್ ಗಳಿಸಿದರು. ಕನ್ನೇಮನ್ ಮತ್ತು ಲಿಯಾನ್ ಭಾರತದ ವಿರುದ್ಧ ಅಬ್ಬರಿಸಿದ್ದು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಕೇವಲ 109 ರನ್‌ಗಳಿಗೆ ಆಲೌಟ್ ಆಗಲು ಕಾರಣವಾದರು.
ಮತ್ತೊಂದೆಡೆ ಮೊದಲ ದಿನ ಉತ್ತಮ ಪ್ರದರ್ಶನ ನೀಡಿದೆ. ಮೊದಲ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿದ್ದು ಉಸ್ಮಾನ್ ಖವಾಜಾ 60 ರನ್ ಸಿಡಿಸಿ ಮಿಂಚಿದರು. ಈ ಮೂಲಕ ಪ್ರವಾಸಿ ತಂಡ 47 ರನ್‌ಗಳ ಮುನ್ನಡೆ ಸಾಧಿಸಿ ಮುನ್ನುಗ್ಗುತ್ತಿದೆ. ಮೊದಲ ದಿನದಾಟದಲ್ಲಿಯೇ ಒಟ್ಟು 14 ವಿಕೆಟ್ ಉರುಳಿದ್ದು ಆಸ್ಟ್ರೇಲಿಯಾ ತಂಡ ಸಮರ್ಥವಾಗಿ ಸ್ಪಿನ್ ದಾಳಿಯನ್ನು ಮೊದಲ ದಿನದಾಟದಲ್ಲಿ ಎದುರಿಸುವಲ್ಲಿ ಯಶಸ್ವಿಯಾಗಿದೆ.
"ಆಸ್ಟ್ರೇಲಿಯಾ ಆಟಗಾರರು ಹೆಚ್ಚು ನೇರವಾಗಿಯೇ ಆಡಿದ್ದಾರೆ. ಸ್ವೀಪ್ ಶಾಟ್‌ಗಳನ್ನು ಬಹಳ ಕಡಿಮೆ ಬಳಸಿದ್ದಾರೆ. ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ಬಹುಶಃ ಕೆಲ ಪಾಠಗಳನ್ನು ಆಸ್ಟ್ರೆಲಿಯಾ ತಂಡ ಕಲಿತಿದೆ" ಎಂದಿದ್ದಾರೆ ಆಸ್ಟ್ರಲಿಯಾದ ಮಾಜಿ ನಾಯಕ ಹಾಗೂ ಹಾಲಿ ಕಾಮೆಂಟೇಟರ್ ಆಗಿರುವ ಮಾರ್ಕ್ ವಾ.
ಇತ್ತಂಡಗಳ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (WK), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಕುಲದೀಪ್ ಯಾದವ್, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (WK), ಮಿಚೆಲ್ ಸ್ಟಾರ್ಕ್, ಅಥಾನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕನ್ನೇಮನ್
ಬೆಂಚ್: ಮಿಚೆಲ್ ಸ್ವೆಪ್ಸನ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications