Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮೂರನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ಏನು? ಇಲ್ಲಿದೆ ಉತ್ತರ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್‌ ಪಂದ್ಯ ಡಿಸೆಂಬರ್‌ 14 ರಿಂದ ಬ್ರಿಸ್ಬೇನ್‌ನಲ್ಲಿ ಆರಂಭವಾಗಲಿದೆ. ಈ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಗೆಲುವು ದಾಖಲಿಸುವ ಕನಸು ಹೊಂದಿದೆ. ಈ ಉದ್ದೇಶದಿಂದಲೇ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಆಡಿಲೇಡ್‌ನಲ್ಲಿ ಬೆವರು ಹರಿಸಿದ್ದಾರೆ. ಈ ವೇಳೆ ಅಭಿಮಾನಿಗಳ ಮನದಲ್ಲಿ ಮೂಡಿದ್ದ ಪ್ರಶ್ನೆಗೆ ಒಂದು ಉತ್ತರ ಸಿಕ್ಕಿದೆ. ಹಾಗಿದ್ದರೆ ಅಭಿಮಾನಿಗಳ ಮನದಲ್ಲಿ ಮೂಡಿದ್ದ ಪ್ರಶ್ನೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.

ಪರ್ತ್‌ನಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದ ಬಳಿಕ, ಭಾರತದ ಬ್ಯಾಟಿಂಗ್‌ ಕ್ರಮಾಂಕದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆಡಿಲೇಡ್‌ನಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದರು. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಸದ್ಯ ಉತ್ತರ ಸಿಕ್ಕಂತೆ ಕಾಣುತ್ತಿದೆ.

India vs Australia 3rd Test Rohit in Middle Order Rahul to Open

ರಾಹುಲ್‌ ಯಾವ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ?

ಅಸಲಿಗೆ ಆಡಿಲೇಡ್‌ನಲ್ಲಿ ಎರಡನೇ ಟೆಸ್ಟ್‌ ನಡೆಯಿತು. ಈ ವೇಳೆ ಪಂದ್ಯ ಎರಡು ದಿನ ಹಾಗೂ ಒಂದು ಸೆಷನ್‌ನಲ್ಲೇ ಮುಗಿಯಿತು. ಹೀಗಾಗಿ ಆಟಗಾರರು ಆಡಿಲೇಡ್‌ನಲ್ಲಿ ಅಭ್ಯಾಸ ನಡೆಸಿದರು. ಈ ವೇಳೆ ಟೀಮ್ ಇಂಡಿಯಾದ ಬ್ಯಾಟಿಂಗ್‌ ಕ್ರಮಾಂಕದ ಬಗ್ಗೆ ಮೇಲ್ನೋಟಕ್ಕೆ ಉತ್ತರ ಸಿಕ್ಕಂತೆ ಆಗಿದೆ. ಹಾಗಿದ್ದರೆ ಟೀಮ್ ಇಂಡಿಯಾ ಮೂರನೇ ಟೆಸ್ಟ್‌ನ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡುತ್ತದಾ ಎಂಬ ಪ್ರಶ್ನೆ ಉದ್ಭವಿಸಿದೆ.

ಮೂರನೇ ಟೆಸ್ಟ್‌ ಕಾಣುತ್ತಾ ಬದಲಾವಣೆ?

ಪರ್ತ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕರ್ನಾಟಕದ ಕೆಎಲ್ ರಾಹುಲ್‌ ಎರಡನೇ ಟೆಸ್ಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಮೂರನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ತಮ್ಮ ಎಂದಿನ ಆರಂಭಿಕ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಈ ಬಗ್ಗೆ ಈಗ ಅಭ್ಯಾಸದ ವೇಳೆ ಉತ್ತರ ಸಿಕ್ಕಿದೆ.

ಅಭ್ಯಾಸದ ವೇಳೆ ಕಂಡ ದೃಶ್ಯ ಏನು?

ಅಭ್ಯಾಸದ ವೇಳೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್‌ ಮೊದಲು ಬ್ಯಾಟಿಂಗ್ ನಡೆಸಿದರು. ಇದೇ ವೇಳೆ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರು. ಇದನ್ನು ನೋಡಿದರೆ ರೋಹಿತ್ ಶರ್ಮಾ ಮೂರನೇ ಟೆಸ್ಟ್‌ನಲ್ಲೂ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಟೀಮ್ ಮ್ಯಾನೇಜ್ಮೆಂಟ್‌ ಸಹ ಕೆಎಲ್ ರಾಹುಲ್‌ ಅವರನ್ನು ಆರಂಭಿಕರಾಗಿ ಕಣಕ್ಕೆ ಇಳಿಸುವ ಇಚ್ಛೆಯನ್ನು ವ್ಯಕ್ತ ಪಡಿಸಿದಂತೆ ಕಾಣುತ್ತದೆ. ಹೀಗಾಗಿ ರಾಹುಲ್‌ಗೆ ಮೂರನೇ ಟೆಸ್ಟ್‌ನಲ್ಲಿ ಮತ್ತೊಮ್ಮೆ ಇನಿಂಗ್ಸ್‌ ಆರಂಭಿಸುವ ಅವಕಾಶವು ಸಿಗುವ ಸಾಧ್ಯತೆ ಇದೆ.

ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಈ ವೇಳೆ ನೆಲಕಚ್ಚಿ ಬ್ಯಾಟ್ ಮಾಡುವ ಕ್ಷಮತೆ ತಮ್ಮಲ್ಲಿ ಇದೆ ಎಂಬುದನ್ನು ಸಾರಿದ್ದರು. ಇದನ್ನು ಗುರುತಿಸಿದ ಟೀಮ್ ಮ್ಯಾನೇಜ್ಮೆಂಟ್‌ ಇವರಿಗೆ ಇನಿಂಗ್ಸ್‌ ಆರಂಭಿಸುವ ಜವಾಬ್ದಾರಿಯನ್ನು ನೀಡಿತು.

Story first published: Tuesday, December 10, 2024, 20:35 [IST]
Other articles published on Dec 10, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+