
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ನಡೆಯುತ್ತಿದೆ. ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 338 ರನ್‌ಗಳಿಸಿದ್ದ ರನ್‌ಗಳಿಗೆ ಪ್ರತಿಯಾಗಿ ಟೀಮ್ ಇಂಡಿಯಾ 244 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಮೂಲಕ ಟೀಮ್ ಇಂಡಿಯಾ 94 ರನ್‌ಗಳ ಹಿನ್ನೆಡೆಯನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕಂಡಿತ್ತು.
ಟೀಮ್ ಇಂಡಿಯಾ ಪರವಾಗಿ ಶುಭ್ಮನ್ ಗಿಲ್ ಹಾಗೂ ಚೇತೇಶ್ವರ್ ಪೂಜಾರ ತಲಾ 50 ರನ್ ಗಳಿಸಿ ಮಿಂಚಿದರು. ವಿಕೆಟ್ ಕೀಪರ್ ರಿಷಭ್ ಪಂತ್ 36 ರನ್‌ಗಳ ಕೊಡುಗೆಯನ್ನು ನೀಡಿದರು. ಉಳಿದಂತೆ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳಿಂದ ಹೇಳಿಕೊಳ್ಳುವ ಪ್ರದರ್ಶನ ಬರಲಿಲ್ಲ.
ಬಳಿಕ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ಆರಂಭಿಕರನ್ನು ಶೀಘ್ರವಾಗಿ ಕಳೆದುಕೊಂಡಿತು. ವಿಲ್ ಪುಕೋವ್ಸ್ಕಿ ಹಾಗೂ ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ತಂಡ 35 ರನ್ ಗಳಿಸುವ ವೇಳೆಗೆ ವಿಕೆಟ್ ಒಪ್ಪಿಸಿದ್ದರು. ಆದರೆ ಬಳಿಕ ಬಂದ ಲೆಬುಶೇನ್ ಹಾಗೂ ಸ್ಮಿತ್ ಅದ್ಭುತ ಜೊತೆಯಾಟವನ್ನು ನೀಡಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು. ಲ್ಯಾಬುಶೇನ್ 73 ರನ್ ಗಳಿಸಿದ್ದರೆ ಸ್ಟೀವ್ ಸ್ಮಿತ್ 81 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಸದ್ಯ ಆಸ್ಟ್ರೇಲಿಯಾ 300ಕ್ಕೂ ಅಧಿಕ ಮುನ್ನಡೆ ಪಡೆದುಕೊಂಡು ಮುನ್ನುಗ್ಗುತ್ತಿದೆ.
ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್ ಸಿಡ್ನಿ, ದಿನ 4, Live ಸ್ಕೋರ್
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ವಿಲ್ ಪುಕೊವ್ಸ್ಕಿ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಸಿ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ.