Ind vs Aus 4th Test: ಕೂತೂಹಲಕಾರಿ ಘಟ್ಟದಲ್ಲಿ ಅಹ್ಮದಾಬಾದ್ ಟೆಸ್ಟ್; 5ನೇ ದಿನದಾಟದ Live ಸ್ಕೋರ್

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಅಂತಿಮ ದಿನದಾಟ ಸಾಕಷ್ಟು ಕುತೂಹಲ ಕೆರಳಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ತಂಡಗಳು ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಳಿಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 91 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು. ಇದೀಗ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ ವಿಕೆಟ್ ಕಳೆದುಕೊಳ್ಳದೆ 3 ರನ್‌ಗಳಿಸಿ ಕೊನೆಯ ದಿನದಾಟವನ್ನು ಮುಂದುವರಿಸಿದೆ.
ಇನ್ನು ನಾಲ್ಕನೇ ದಿನ ಬಹುತೇಕ ಸಂಪೂರ್ಣ ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರವಾಗಿ ವಿರಾಟ್ ಕೊಹ್ಲಿ ಸ್ಮರಣೀಯ ಇನ್ನಿಂಗ್ಸ್ ನೀಡಿದರು. ಈ ಸಂದರ್ಭದಲ್ಲಿ ಸುದೀರ್ಘ ಕಾಲದ ಬಳಿಕ ಟೆಸ್ಟ್ ಮಾದರಿಯಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ 28ನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ವೈಟ್‌ಬಾಲ್ ಕ್ರಿಕೆಟ್‌ನ ಬಳಿಕ ಟೆಸ್ಟ್‌ನಲ್ಲಿಯೂ ಲಯಕ್ಕೆ ಮರಳಿದ ಸೂಚನೆ ನೀಡಿದ್ದಾರೆ ವಿರಾಟ್ ಕೊಹ್ಲಿ.
Live ಸ್ಕೋರ್ ಹೀಗಿದೆ
ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ದ್ವಿಶತಕವನ್ನು ಸಿಡಿಸುವ ಅವಕಾಶವನ್ನು ಹೊಂದಿದ್ದರು. ಆದರೆ ಮತ್ತೊಂದು ತುದಿಯಲ್ಲಿ ಸಾಥ್ ದೊರೆಯದ ಕಾರಣ ಒತ್ತಡಕ್ಕೆ ಒಳಗಾಗಿ ಕೊಹ್ಲಿ ವಿಕೆಟ್ ಕಳೆದುಕೊಳ್ಳುವಂತಾಯಿತು. ಹೀಗಾಗಿ ಕೊಹ್ಲಿಯ ಮ್ಯಾರಥಾನ್ ಇನ್ನಿಂಗ್ಸ್ 186 ರನ್‌ಗೆ ಅಂತ್ಯವಾಗಿದೆ.
ಇನ್ನು ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡಕ್ಕೆ ಅನುಭವಿ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಹಾಗೂ ಯುವ ಆಟಗಾರ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಆಸರೆಯಾದರು. ಈ ಇಬ್ಬರು ಆಟಗಾರರ ಭರ್ಜರಿ ಪ್ರದರ್ಶನದಿಂದಾಗಿ ಆಸ್ಟ್ರೇಲಿಯಾ ದೊಡ್ಡ ಮೊತ್ತವನ್ನು ಗಳಿಸಿದ್ದು 480 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಇನ್ನು ಟೀಮ್ ಇಂಡಿಯಾ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ 6 ವಿಕೆಟ್ ಕಿತ್ತು ಗಮನ ಸೆಳೆದರು.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕುಹ್ನೆಮನ್, ಟಾಡ್ ಮರ್ಫಿ, ನಾಥನ್ ಲಿಯಾನ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಮಿಚೆಲ್ ಸ್ವೆಪ್ಸನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications