India vs Australia: 6ನೇ ಕ್ರಮಾಂಕದಲ್ಲೂ ಕಣಕ್ಕಿಳಿಯಲಿಲ್ಲ ಶ್ರೇಯಸ್ ಐಯ್ಯರ್; ಕಾರಣ ನೀಡಿದ ಬಿಸಿಸಿಐ

ಅಹ್ಮದಾಬಾದ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಡೆ ಒಂದೆರಡು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮೂರನೇ ದಿನದಾಟದಲ್ಲಿ ರವೀಂದ್ರ ಜಡೇಜಾ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆರಂಭದಲ್ಲಿ ಇದು ಎಡಗೈ-ವಲಗೈ ಆಟಗಾರರ ಸಂಯೋಜನೆಯ ಕಾರಣದಿಂದಾಗಿ ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿತ್ತು.
ಆದರೆ ನಾಲ್ಕನೇ ದಿನದಾಟದ ಆರಂಭಿಕ ಹಂತದಲ್ಲಿ ರವೀಂದ್ರ ಜಡೇಜಾ ವಿಕೆಟ್ ಕಳೆದುಕೊಂಡ ಬಳಿಕವೂ ಶ್ರೇಯಸ್ ಐಯ್ಯರ್ ಬ್ಯಾಟಿಂಗ್‌ಗೆ ಉಳಿಯಲಿಲ್ಲ. ಬದಲಾಗಿ ವಿಕೆಟ್ ಕೀಪರ್ ಬ್ಯಾಟರ್ ಶ್ರೀಕರ್ ಭರತ್ ಕಣಕ್ಕಿಳಿದು ಅಚ್ಚರಿ ಮೂಡಿಸಿದರು. ಈ ವಿಚಾರವಾಗಿ ಈಗ ಬಿಸಿಸಿಐ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಶ್ರೇಯಸ್ ಐಯ್ಯರ್ 6ನೇ ಕ್ರಮಾಂಖದಲ್ಲೂ ಕಣಕ್ಕಿಳಿಯದ ಬಗ್ಗೆ ಮಾಹಿತಿ ನೀಡಿದೆ.
ಟೀಮ್ ಇಂಡಿಯಾದ ಆಟಗಾರ ಶ್ರೇಯಸ್ ಐಯ್ಯರ್ ಬೆನ್ನು ನೋವಿಗೆ ಒಳಗಾಗಿದ್ದು ಹಾಗಾಗಿ ಬಿಸಿಸಿಐನ ವೈದ್ಯಕೀಯ ತಂಡ ಐಯ್ಯರ್ ಮೆಲೆ ನಿಗಾವಹಿಸಿದೆ ಎಂದಿದೆ. ಅಲ್ಲದೆ ಐಯ್ಯರ್ ಅವರನ್ನು ಸ್ಕ್ಯಾನಿಂಗ್‌ಗೆ ಕೂಡ ಒಳಪಡಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ. "ಮೂರನೇ ದಿನದಾಟದ ಬಳಿಕ ಶ್ರೇಯಸ್ ಐಯ್ಯರ್ ಬೆನ್ನು ನೋವಿನ ಬಗ್ಗೆ ಹೇಳಿಕೊಂಡಿದ್ದರು. ಅವರು ಸ್ಕ್ಯಾನಿಂಗ್‌ಗೆ ಒಳಗಾಗಿದ್ದು ಬಿಸಿಸಿಐ ವೈದ್ಯಕೀಯ ತಂಡ ಅವರ ಮೇಲೆ ನಿಗಾ ವಹಿಸಿದೆ" ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಶ್ರೇಯಸ್ ಐಯ್ಯರ್ ಕಳೆದ ಎರಡು ತಿಂಗಳಿನಲ್ಲಿ ಎರಡನೇ ಬಾರಿಗೆ ಬೆನ್ನು ನೋವಿಗೆ ಒಳಗಾಗಿದ್ದಾರೆ. ಕಳೆದ ಬಾಂಗ್ಲಾದೇಶ ಪ್ರವಾಸದಲ್ಲಿಯೂ ಅವರು ಇದೇ ಸಮಸ್ಯೆಗೆ ಒಳಗಾಗಿದ್ದರು. ಅದಾದ ಬಳಿಕ ತವರಿನಲ್ಲಿ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದರು. ಬಳಿಕ ಎನ್‌ಸಿಎನಲ್ಲಿ ರಿಹ್ಯಾಬ್‌ನಲ್ಲಿ ಭಾಗಿಯಾಗಿ ಆಸ್ಟ್ರೇಲಿಯಾ ಸರಣಿಯ ಮೂಲಕ ಕಮ್‌ಬ್ಯಾಕ್ ಮಾಡಿದ್ದಾರೆ.
ಇನ್ನು ಅಹ್ಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡುತ್ತಿದೆ. ಆಸ್ಟ್ರೇಲಿಯಾ ತಂಡ 480 ರನ್‌ಗಳ ಬೃಹತ್ ಮೊತ್ತ ಗಳಿಸಿದ ಬಳಿಕ ಬ್ಯಾಟಿಂಗ್ ಅರಂಭಿಸಿರುವ ಭಾರತ ತಂಡಕ್ಕೆ ಯುವ ಆಟಗಾರ ಶುಬ್ಮನ್ ಗಿಲ್ ಶತಕದ ಪ್ರದರ್ಶನ ನೀಡಿದರೆ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಕೂಡ ಅರ್ಧ ಶತಕ ಗಳಿಸಿ ಮುನ್ನುಗ್ಗುತ್ತಿದ್ದಾರೆ. ಕೊನೆಯ ಎರಡಯ ದಿನಗಳ ಆಟ ಸಾಕಷ್ಟು ಕುತೂಹಲ ಮೂಡಿಸಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕುಹ್ನೆಮನ್, ಟಾಡ್ ಮರ್ಫಿ, ನಾಥನ್ ಲಿಯಾನ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಮಿಚೆಲ್ ಸ್ವೆಪ್ಸನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications