ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಬ್ರಿಸ್ಬೇನ್, ದಿನ 1, Live ಸ್ಕೋರ್

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಬ್ರಿಸ್ಬೇನ್‌ನಲ್ಲಿ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೆಸ್ಟ್ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಗೆಲುವನ್ನು ಸಾಧಿಸಿರುವ ಕಾರಣ ಸರಣಿ 1-1 ಅಂತರದಿಂದ ಸಮಬಲಗೊಂಡಿದೆ. ಹೀಗಾಗಿ ಬ್ರಿಸ್ಬೇನ್‌ನಲ್ಲಿ ಆರಂಭವಾಗಿರುವ ಈ ಪಂದ್ಯ ಸರಣಿಯ ನಿರ್ಣಾಯಕ ಪಂದ್ಯವೆನಿಸಿದೆ.
ಬ್ರಿಸ್ಬೇನ್‌ನ ಗಾಲೆ ಕ್ರೀಡಾಂಗಣ ಆತಿಥೇಯ ಆಸ್ಟ್ರೇಲಿಯಾ ಪಾಲಿಗೆ ಅದೃಷ್ಟದ ಅಂಗಳವಾಗಿದೆ. ಈ ಅಂಗಳದಲ್ಲಿ ಕಳೆದ 31 ವರ್ಷಗಳಿಂದ ಸೋಲನ್ನು ಕಾಣದಿರುವ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧವೂ ಈ ಗೆಲುವಿನ ದಾಖಲೆ ಮುಂದಿವರಿಸುವ ಹುಮ್ಮಸ್ಸಿನಲ್ಲಿದೆ. ಮತ್ತೊಂದೆಡೆ ಭಾರತ ತಂಡ ಆಸ್ಟ್ರೇಲಿಯಾದ ಈ ಗೆಲುವಿನ ದಾಖಲೆಗೆ ತಡೆಯೊಡ್ಡುವ ನಿರೀಕ್ಷೆಯಲ್ಲಿದೆ. ಅಜಿಂಕ್ಯ ರಹಾನೆ ನೇತೃತ್ವದ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದರೂ ತಂಡದ ಉತ್ಸಾಹ ಕಡಿಮೆಯಾಗಿಲ್ಲ.
ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ನಾಲ್ಕು ಬದಲಾವಣೆಯಾಗಿದೆ. ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್ ಟಿ ನಟರಾಜನ್ ಜೊತೆಗೆ ಆಲ್‌ರೌಂಡರ್ ಆಗಿ ವಾಶಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
Live ಸ್ಕೋರ್ ಪಟ್ಟಿ ಹೀಗಿದೆ:
ಆಸ್ಟ್ರೇಲಿಯಾ ಆಡುವ ಬಳಗ: ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮ್ಯಾಥ್ಯೂ ವೇಡ್, ಕ್ಯಾಮರೂನ್ ಗ್ರೀನ್, ಟಿಮ್ ಪೈನ್(ನಾಯಕ/ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಾಯಾಂಕ್ ಅಗರ್ವಾಲ್, ರಿಷಭ್ ಪಂತ್ (ವಿಕೆಟದ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ ನಟರಾಜನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications