Ind vs Aus 4th Test: ರೋಚಕ ಘಟ್ಟದತ್ತ ಅಹ್ಮದಾಬಾದ್ ಟೆಸ್ಟ್; 4ನೇ ದಿನದಾಟದ Live ಸ್ಕೋರ್

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ರೋಚಕ ಘಟ್ಟವನ್ನು ತಲುಪಿದೆ. ಆಸ್ಟ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್‌ನ ಬಳಿಕ ಬ್ಯಾಟಿಂಗ್ ಆರಂಭಿಸಿರುವ ಟೀಮ್ ಇಂಡಿಯಾ ಕೂಡ ಬ್ಯಾಟಿಂಗ್‌ನಲ್ಲಿ ಅದ್ಭುತ ತಿರುಗೇಟು ನೀಡಿದ್ದು ದೊಡ್ಡ ಮೊತ್ತದತ್ತ ಹೆಜ್ಜೆಯಿಟ್ಟಿದೆ. ಮೂರನೇ ದಿನದಾಟದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ಸಂಪೂರ್ಣ ಮೇಲುಗೈ ಸಾಧಿಸಿದ್ದು ಯುವ ಆಟಗಾರ ಶುಬ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
ಮೂರನೇ ದಿನದಾಟದ ಅಂತ್ಯದಲ್ಲಿ ಟೀಮ್ ಇಂಡಿಯಾ 289 ರನ್‌ಗಳನ್ನು ಗಳಿಸಿದ್ದು 3 ವಿಕೆಟ್ ಕಳೆದುಕೊಂಡಿದೆ. ಇನ್ನು ಕೂಡ ಆಸ್ಟ್ರೇಲಿಯಾ ತಂಡಕ್ಕಿಂತ 191 ರನ್‌ಗಳಷ್ಟು ಟೀಮ್ ಇಂಡಿಯಾ ಹಿಂದುಳಿದಿದ್ದು ನಾಲ್ಕನೇ ದಿನದಾಟದಲ್ಲಿ ಎಷ್ಟು ರನ್‌ಗಳಿಸಲಿದೆ ಎಂಬುದು ಪ್ರಶ್ನೆಯಾಗಿದೆ. ಅಲ್ಲದೆ ಎರಡು ದಿನಗಳು ಮಾತ್ರವೇ ಬಾಕಿಯಿರುವ ಕಾರಣ ಫಲಿತಾಂಶ ಕಾಣಬೇಕಾದರೆ ಭಾರತ ವೇಗವಾಗಿ ರನ್‌ಗಳಿಸುವತ್ತಲೂ ಚಿತ್ತ ನೆಡಬೇಕಾದ ಸವಾಲಿದೆ.
Live ಸ್ಕೋರ್ ಹೀಗಿದೆ
ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ಶುಬ್ಮನ್ ಗಿಲ್ 128 ರನ್‌ಗಳಿಸಿ ತಮ್ಮ ಅದ್ಭುತ ಇನ್ನಿಂಗ್ಸ್ ಅಂತ್ಯಗೊಳಿಸಿದರು. ಉಳಿದಂತೆ ನಾಯಕ ರೋಹಿತ್ ಶರ್ಮಾ 35 ರನ್‌ಗಳಿಸಿ ಔಟಾಗಿದ್ದರೆ ಚೇತೇಶ್ವರ್ ಪೂಜಾರ 42 ರನ್‌ಗೆ ವಿಕೆಟ್ ಕಳೆದುಕೊಂಡಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿದ್ದು 59 ರನ್‌ಗಳಿಸಿದಲ್ಲಿಂದ ನಾಲ್ಕನೇ ದಿನದಾಟ ಆರಂಭಿಸಿದ್ದಾರೆ. ಮತ್ತೊಂದು ತುದಿಯಲ್ಲಿ ರವೀಂದ್ರ ಜಡೇಜಾ ಕ್ರೀಸ್ ಕಾಯ್ದುಕೊಂಡಿದ್ದರು.
ಇನ್ನು ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡಕ್ಕೆ ಅನುಭವಿ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಹಾಗೂ ಯುವ ಆಟಗಾರ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಆಸರೆಯಾದರು. ಈ ಇಬ್ಬರು ಆಟಗಾರರ ಭರ್ಜರಿ ಪ್ರದರ್ಶನದಿಂದಾಗಿ ಆಸ್ಟ್ರೇಲಿಯಾ ದೊಡ್ಡ ಮೊತ್ತವನ್ನು ಗಳಿಸಿದ್ದು 480 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಇನ್ನು ಟೀಮ್ ಇಂಡಿಯಾ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ 6 ವಿಕೆಟ್ ಕಿತ್ತು ಗಮನ ಸೆಳೆದರು.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕುಹ್ನೆಮನ್, ಟಾಡ್ ಮರ್ಫಿ, ನಾಥನ್ ಲಿಯಾನ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಮಿಚೆಲ್ ಸ್ವೆಪ್ಸನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications