India vs Australia 4th Test: ಅಂತಿಮ ಪಂದ್ಯದ ಸಂಭಾವ್ಯ XI, ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯ ಗುರುವಾರದಿಂದ ಅಹ್ಮದಾಬಾದ್‌ನಲ್ಲಿ ಆರಂಭವಾಗಲಿದೆ. ಮೊದಲ ಎರಡು ಪಂದ್ಯಗಳಲ್ಲಿ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಟೀಮ್ ಇಂಡಿಯಾ ಮೂರನೇ ಪಂದ್ಯದಲ್ಲಿ ಸೋಲು ಕಂಡು ಮುಗ್ಗರಿಸಿತ್ತು. ಹೀಗಾಗಿ ಅಹ್ಮದಾಬಾದ್ ಟೆಸ್ಟ್ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದ್ದು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿದೆ.
ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ಎಡವಿತ್ತು. ಆಸ್ಟ್ರೇಲಿಯಾದ ಸ್ಪಿನ್ನರ್‌ಗಳ ದಾಳಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರೆಲ್ಲರು ಕೂಡ ಭಾರೀ ವೈಫಲ್ಯ ಕಂಡಿದ್ದಾರೆ. ಅಲ್ಲದೆ ಭಾರತದ ಸ್ಪಿನ್ನರ್‌ಗಳು ಕೂಡ ಆಸ್ಟ್ರೇಲಿಯಾದ ಸ್ಪಿನ್ನರ್‌ಗಲ ರೀತಿ ಇಂದೋರ್ ಪಿಚ್‌ನಲ್ಲಿ ಪರಿಣಾಮಕಾರಿ ಎನಿಸಲಿಲ್ಲ. ಹೀಗಾಗಿ ಅಹ್ಮದಾಬಾದ್‌ನಲ್ಲಿ ಭಾರತ ತಂಡದ ಪ್ರದರ್ಶನ ಕುತೂಹಲ ಮೂಡಿಸಿದೆ.

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಈ ಪಂದ್ಯ ಮಾರ್ಚ್ 9ರಂದು ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ ಹಾಗೂ ಲೈವ್ ಸ್ಟ್ರೀಮಿಂಗ್: ಇನ್ನು ಈ ಪಂದ್ಯ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದ್ದು ಸ್ಟಾರ್ ಸ್ಪೋರ್ಟ್ಸ್ ಕನ್ನಡವಾಹಿನಿಯಲ್ಲಿಯೂ ನೇರಪ್ರಸಾರವಾಗಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿ ಈ ಪಂದ್ಯ ಲೈವ್‌ಸ್ಟ್ರೀಮಿಂಗ್ ದೊರೆಯಲಿದ್ದು ಜಿಯೋ ಟಿವಿ ಚಂದಾದಾರರು ಕೂಡ ಪಂದ್ಯವನ್ನು ವೀಕ್ಷಿಸಲು ಅವಕಾಶವಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಅಹ್ಮದಾಬಾದ್‌ನಲ್ಲಿ ನಡೆದ ಈ ಹಿಂದಿನ ಎರಡು ಟೆಸ್ಟ್ ಪಂದ್ಯಗಳಲ್ಲಿಯೂ ಸ್ಪಿನ್ನರ್‌ಗಳು ಮೇಲುಗೈ ಸಾಧಿಸಿದ್ದು ಉರುಳಿದ ವಿಕೆಟ್‌ಗಳ ಪೈಕಿ 80 ಶೇಕಡಾ ವಿಕೆಟ್‌ಗಳು ಸ್ಪಿನ್ನರ್‌ಗಳ ಪಾಲಾಗಿದೆ. ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ಮೊದಲ ಹಾಗೂ ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ ಕ್ರಮವಾಗಿ 159 ಹಾಗೂ 255 ಆಗಿದೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ಗೆ ಎರಡು ರೀತಿಯ ಪಿಚ್‌ಗಳನ್ನು ಸಿದ್ಧಪಡಿಸಲಾಗಿದ್ದಯ ಯಾವ ಪಿಚ್‌ನಲ್ಲಿ ಆಡಿಸಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಸಿದ್ಧತೆಯ ದೃಷ್ಟಿಯಿಂದ ಇಲ್ಲಿ ಸಾಂಪ್ರದಾಯಿಕ ಸ್ಪಿನ್ ಪಿಚ್‌ನ ಜೊತೆಗೆ ಹಸಿರು ಪಿಚ್ಚನ್ನು ಕೂಡ ಸಿದ್ಧಪಡಿಸಲಾಗಿದೆ.

ಸಂಭಾವ್ಯ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್.
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್ (ನಾಯಕ), ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪೀಟರ್ ಹ್ಯಾಂಡ್ಸ್ಕಾಂಬ್, ಮಿಚೆಲ್ ಸ್ಟಾರ್ಕ್, ಮ್ಯಾಟ್ ಕುನ್ನೇಮನ್, ನಾಥನ್ ಲಿಯಾನ್ ಮತ್ತು ಟಾಡ್ ಮರ್ಫಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications