ಏಕದಿನ ವಿಶ್ವಕಪ್ ಟೂರ್ನಿ ಅಂತ್ಯವಾಗಿದ್ದು ಭಾರತ ತಂಡ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಆಘಾತದಲ್ಲಿದೆ. ಇದರ ಬೆನ್ನಲ್ಲೇ ಇದೀಗ ಭಾರತ ತಂಡಕ್ಕೆ ಮುಂದಿನ ಆರು ತಿಂಗಳಿನ ಅಂತರದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ತಯಾರಿ ಆರಂಭಿಸುವ ಸಂದರ್ಭವೂ ಇದೆ. ವಿಶ್ವಕಪ್ ಟೂರ್ನಿಯ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡದ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲು ಸಜ್ಜಾಗಿದ್ದು ಸೂರ್ಯಕುಮಾರ್ ನೇತೃತ್ವದ ಭಾರತ ತಂಡವನ್ನು ಈಗಾಗಲೇ ಹೆಸರಿಸಲಾಗಿದೆ.
ನವೆಂಬರ್ 23ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಆರಂಭವಾಗಲಿದೆ. ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಈ ಸರಣಿ ಆರಂಭವಾಗಲಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸರಣಿಯ ಕೊನೆಯ ಪಂದ್ಯ ಆಯೋಜನೆಯಾಗಲಿದೆ.

ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಈ ಟಿ20 ಸರಣಿಗೆ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವದ ನಂಬರ್ 1 ಟಿ20 ಬ್ಯಾಟರ್ ಸೂರ್ಯಕುನಾರ್ ಯಾದವ್ ಈ ತಂಡವನ್ನು ಮುನ್ನಡೆಸಲಿದ್ದು ಆಸ್ಟ್ರೇಲಿಯಾ ತಂಡದ ನಾಯಕನಾಗಿ ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ.
ಭಾರತ vs ಆಸ್ಟ್ರೇಲಿಯಾ ಟಿ20 ಸರಣಿಯ ಪಂದ್ಯಗಳು ನಡೆಯುವ ದಿನಾಂಕ ಹಾಗೂ ತಾಣಗಳು
ಮೊದಲ ಪಂದ್ಯ: ನವೆಂಬರ್ 23, ಸ್ಥಳ: ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ, ವಿಶಾಖಪಟ್ಟಣ
2ನೇ ಪಂದ್ಯ: ನವೆಂಬರ್ 26, ಸ್ಥಳ: ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
3ನೇ ಪಂದ್ಯ: ನವೆಂಬರ್ 28, ಸ್ಥಳ: ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
4ನೇ ಪಂದ್ಯ: ಡಿಸೆಂಬರ್ 1, ಸ್ಥಳ: ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣ, ರಾಯ್‌ಪುರ
5ನೇ ಪಂದ್ಯ: ಡಿಸೆಂಬರ್ 3, ಸ್ಥಳ: ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
ಇನ್ನು ಈ ಎಲ್ಲಾ ಪಂದ್ಯಗಳು ಕೂಡ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಸಂಜೆ 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಟಿ20 ಪಂದ್ಯಗಳಲ್ಲಿ ಭಾರತ vs ಆಸ್ಟ್ರೇಲಿಯಾ ಹೆಡ್ ಟು ಹೆಡ್
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಈವರೆಗೆ ಒಟ್ಟು 26 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದೆ. ಈ ಪೈಕಿ ಭಾರತ ತಂಡ 15 ಬಾಕಿ ಗೆಲುವು ಸಾಧಿಸಿ ಮೇಲುಗೈ ಪಡೆದುಕೊಂಡಿದೆ. ಇನ್ನು ಆಸ್ಟ್ರೇಲಿಯಾ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ 1 ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ.
ಭಾರತ ತಂಡ ಹೀಗಿದೆ: ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಾಕ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ), ಆರೋನ್ ಹಾರ್ಡಿ, ಜೇಸನ್ ಬೆಹ್ರೆಂಡಾರ್ಫ್, ಶಾನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಕೇನ್ ರಿಚರ್ಡ್‌ಸನ್, ಆಡಮ್ ಝಂಪಾ.