IND vs AUS 5TH T20: ಸರಣಿ ಗೆಲುವಿನ ಕನಸಿನಲ್ಲಿ ಭಾರತ, ಸಮಬಲದ ಆಸೆಯಲ್ಲಿ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಟಿ20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದೆ. ಈ ವೇಳೆ ಆಡಿದ 4 ಟಿ20 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು ಬೀಗಿದೆ. ಇನ್ನು ಆಸೀಸ್ 1 ಪಂದ್ಯದಲ್ಲಿ ಜಯ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಐದನೇ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ಗೆಲುವಿನ ಕನಸಿನಲ್ಲಿದ್ದರೆ, ಆಸೀಸ್ ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಆಸೆಯನ್ನು ಹೊಂದಿದೆ.
ಬ್ರಿಸ್ಬೇನ್‌ನ ಗಬ್ಬಾ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೇವಲ ಒಂದು ಟಿ20 ಪಂದ್ಯವನ್ನು ಆಡಿದೆ. 2018ರಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಡಕ್‌ವರ್ತ್-ಲೂಯಿಸ್ ವಿಧಾನದಡಿಯಲ್ಲಿ 4 ರನ್‌ಗಳಿಂದ ಸೋಲು ಕಂಡಿತ್ತು. ಈ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಬ್ರಿಸ್ಬೇನ್ ಮೈದಾನದಲ್ಲಿ ಆಸ್ಟ್ರೇಲಿಯಾ 8 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 7ರಲ್ಲಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಕಳೆದ 12 ವರ್ಷಗಳಲ್ಲಿ ಈ ಮೈದಾನದಲ್ಲಿ ಒಂದೇ ಒಂದು ಪಂದ್ಯ ಸೋತಿಲ್ಲ. ಹೀಗಾಗಿ ರೋಚಕತೆ ಹೆಚ್ಚಿಸಿದೆ.

ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರರಾದ ಶುಭಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡಬೇಕಿದೆ. ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಈ ನಾಲ್ಕು ಆಟಗಾರರಲ್ಲಿ ಒಬ್ಬರು ಕೊನೆಯ ವರೆಗೂ ನಿಂತು ಇನಿಂಗ್ಸ್ ಕಟ್ಟಬೇಕಿದೆ. ಇನ್ನು ಜಿತೇಶ್ ಶರ್ಮಾ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಬೇಕಿದೆ. ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ಆಧಾರವಾಗಬೇಕು.
ವರುಣ್ ಆಕರ್ಷಣೆ
ಸ್ಪಿನ್ ಬೌಲಿಂಗ್ ವಿಭಾಗದ ನೊಗವನ್ನು ಹೊರವ ವಿಶ್ವದ ಅಗ್ರಗಣ್ಯ ಬೌಲರ್ ವರುಣ್ ಚಕ್ರವರ್ತಿ ಕೊಂಚ ರನ್‌ಗಳಿಗೆ ಕಡಿವಾಣ ಹಾಕಿ ವಿಕೆಟ್ ಬೇಟೆ ನಡೆಸಬೇಕಿದೆ. ಇನ್ನು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ರನ್‌ಗಳಿಗೆ ಕಡಿವಾಣ ಹಾಕಿದರೆ ಉತ್ತಮ.
ಭಾರತ ಸಂಭಾವ್ಯ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ, ಶಿವಂ ದುಬೆ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ನಾಲ್ಕನೇ ಪಂದ್ಯದಲ್ಲಿ ಮಾಡಿದ ತಪ್ಪಿನಿಂದ ಪಾಠ ಕಲಿತು ಪುಟಿದೇಳುವ ಕನಸಿನಲ್ಲಿ ಆಸ್ಟ್ರೇಲಿಯಾ ಇದೆ. ಸ್ಟಾರ್ ಆಟಗಾರರು ತಮ್ಮ ಜವಾಬ್ದಾರಿಯನ್ನು ಅರಿತು ಆಡಬೇಕಿದೆ. ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು ಈ ಆಟಗಾರರು ತಮ್ಮ ತಮ್ಮ ಹೊಣೆಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ. ಅಂದಾಗ ಸರಣಿಯಲ್ಲಿ ಸಮಬಲ ಸಾಧಿಸುವ ಕನಸು ನನಸಾಗುತ್ತದೆ.

ಆಸ್ಟ್ರೇಲಿಯಾ ಸಂಭಾವ್ಯ ತಂಡ: ಮ್ಯಾಟ್ ಶಾರ್ಟ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆ), ಟಿಮ್ ಡೇವಿಡ್, ಮಿಚ್ ಓವನ್/ಜೋಶ್ ಫಿಲಿಪ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಸೇವಿಯರ್ ಬಾರ್ಟ್ಲೆಟ್, ಬೆನ್ ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ.
ದಾಖಲೆಯ ಮೇಲೆ ಆಟಗಾರರ ಕಣ್ಣು
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ 5ನೇ ಪಂದ್ಯದಲ್ಲಿ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಕಬಳಿಸುವ ಸಾಧನೆ ಮಾಡಲಿದ್ದಾರೆ.
2021ರಲ್ಲಿ ಆಸ್ಟ್ರೇಲಿಯಾ ಸತತ ಮೂರು ಟಿ20 ಪಂದ್ಯಗಳನ್ನು ಸೋತಿತ್ತು. ಇನ್ನು ಭಾರತ 2016ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಬಳಿಕ ಒಮ್ಮೆಯೂ ಸತತ ಮೂರು ಜಯ ದಾಖಲಿಸಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications