India vs Australia: ಗಾಯಗೊಂಡು ಏಕದಿನ ಸರಣಿಯಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ಆಟಗಾರ

ಭಾರತ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ತಂಡ ಟೆಸ್ಟ್ ಸರಣಿಯಲ್ಲಿ ಸೆಣೆಸಾಟ ನಡೆಸುತ್ತಿದ್ದು ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದೆ. ಈ ಪ್ರತಿಷ್ಠಿತ ಬಾರ್ಡರ್ -ಗವಾಸ್ಕರ್ ಸರಣಿಯ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲಿದ್ದು ಈ ಸರಣಿಗೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯೊಂದು ಉಂಟಾಗಿದೆ. ಈ ಸರಣಿಗೆ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗದ ಬೌಲರ್ ಹೊರಗುಳಿಯುವುದು ದೃಢಪಟ್ಟಿದೆ.
ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇ ರಿಚರ್ಡ್ಸನ್ ಗಾಯಗೊಂಡು ಏಕದಿನ ಸರಣಿಯಿಂದ ಹೊರಬಿದ್ದಿರುವ ಆಟಗಾರ. ಜೇ ರಿಚರ್ಡ್ಸನ್ ಹ್ಯಾಮ್‌ಸ್ಟ್ರಿಂಜ್ ಗಾಯಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ಜೇ ರಿಚರ್ಡ್ಸನ್ ಗಾಯಗೊಂಡಿರುವ ಕಾರಣ ಐಪಿಎಲ್‌ನಲ್ಲಿಯೂ ಅವರು ಆಡುವ ಬಗ್ಗೆ ಅನುಮಾನಗಳು ಎದ್ದಿವೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಜೇ ಜೊತೆಗೆ ಒಪ್ಪಂದವನ್ನು ಮಾಡಿಕೊಂಡಿದೆ.
ಭಾರತದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಘೋಷಣೆ ಮಾಡಿರುವ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಜೇ ರಿಚರ್ಡ್ಸನ್ ಸ್ಥಾನಕ್ಕೆ ಈವರೆಗೆ ಬದಲಿ ಆಟಗಾರನನ್ನು ಘೋಷಣೆ ಮಾಡಿಲ್ಲ. 2022ರ ಜೂಬ್ ಬಳಿಕ ಆಸ್ಟ್ರೇಲಿಯಾದ ಈ ವೇಗದ ಬೌಲರ್ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾಗವಹಿಸಿಲ್ಲ.
2022ರ ಜೂನ್‌ನಲ್ಲಿ ರಿಚರ್ಡ್ಸನ್ ಶ್ರೀಲಂಕಾದಲ್ಲಿ ನಡೆದ ಏಕದಿನ ಮತ್ತು ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದರಯ. ಅಕ್ಟೋಬರ್‌ನಲ್ಲಿ ದೇಶೀಯ ಋತುವಿನಲ್ಲಿ ಗಾಯದ ಸಮಸ್ಸಯೆಗೆ ತುತ್ತಾ ಕಾರಣ ಹೆಚ್ಚಿನ ಭಾಗವನ್ನು ಆಡದೆಯೇ ಕಳೆಯುವಂತಾಯಿತು. ಹೀಗಾಗಿ ಬಿಬಿಎಲ್‌ಗೆ ಮುನ್ನ ಅವರು ಕೇವಲ ಎರಡು ಶೆಫೀಲ್ಡ್ ಶೀಲ್ಡ್ ಪಂದ್ಯಗಳಲ್ಲಿ ಮತ್ತು ಒಂದು ಮಾರ್ಷ್ ಕಪ್ ಪಂದ್ಯದಲ್ಲಿ ಮಾತ್ರವೇ ಆಡಿದ್ದರು.
ಇನ್ನು ಕಳೆದ ವರ್ಷಾಂತ್ಯದಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಜೇ ರಿಚರ್ಡ್ಸನ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಆದರೆ ಈಗ ಐ ಪ್ರತಿಷ್ಠಿತ ಟೂರ್ನಿಯಲ್ಲಿ ಆಡುವುದು ಅನುಮಾನವಾಗಿದೆ. 1.5 ಕೊಟಿ ನೀಡಿ ರಿಚರ್ಡ್ಸನ್ ಅವರನ್ನು ಮುಂಬೈ ಇಂಡಿಯನ್ಸ್ ತನ್ನ ತಂಡಕ್ಕೆ ಸೇರ್ಪಡೆಗೊಳಿಸಿತ್ತು.
ಇನ್ನು ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್‌ನ ಆರಂಭಕ್ಕೂ ಮುನ್ನವೇ ಮತ್ತೊಂದು ಹಿನ್ನಡೆ ಅನುಭವಿಸಿದಂತಾಗಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬೂಮ್ರಾ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿಯುವುದು ಖಚಿತವಾಗಿದೆ. ಇದೇ ಸಂದರ್ಭದಲ್ಲಿ ಮತ್ತೋರ್ವ ಪ್ರಮುಖ ಆಟಗಾರ ಕೂಡ ಅಲಭ್ತವಾಹುತ್ತಿರುವುದು ತಂಡಕ್ಕೆ ಚಿಂತೆ ಹೆಚ್ಚಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications