ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನಿರ್ಣಾಯಕ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದ ಪ್ರಮುಖ ಆಟಗಾರ ಜಸ್ಪ್ರೀತ್ ಬೂಮ್ರಾ ಗಾಯಗೊಂಡಿರುವುದು ತಂಡಕ್ಕೆ ದೊಡ್ಡ ಹಿನ್ನೆಡೆಯಾಗಿದೆ. ನಾಲ್ಕನೇ ಟೆಸ್ಟ್‌ನ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಬೂಮ್ರಾ ಲಭ್ಯತೆಯ ಬಗ್ಗೆ ಅಪ್‌ಡೇಟ್ ನೀಡಿದ್ದಾರೆ.
ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರು ನಾಲ್ಕನೇ ಪಂದ್ಯದಲ್ಲಿ ಆಡುವ ಹಿನ್ನೆಲೆಯಲ್ಲಿ ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ ಶ್ರಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ ಪಂದ್ಯವನ್ನಾಡಲು ಕಣಕ್ಕಿಳಿಯುವ ಮುನ್ನ ಆವರ ಲಭ್ಯತೆಯ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ವಿಕ್ರಮ್ ರಾಥೋರ್ ವಿವರಿಸಿದ್ದಾರೆ.
ಮೆಗಾ ಮಿಲಿಯನ್ ಜಾಕ್‌ಪಾಟ್ ಮೌಲ್ಯ ಈಗ 640 ಮಿಲಿಯನ್ ಡಾಲರ್
"ಬೂಮ್ರಾ ಅವರ ಜೊತೆಗೆ ತಂಡದ ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರತರಾಗಿದ್ದಾರೆ. ಶುಕ್ರವಾರ ಮುಂಜಾನೆಯವರೆಗೆ ಕಾದು ಬಳಿಕ ನಾವು ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಅವರು ಆಡಲು ಸಾಧ್ಯವಾದರೆ ಅವರು ಕಣಕ್ಕಿಳಿಯಲಿದ್ದಾರೆ. ಅವರಿಂದ ಸಾಧ್ಯವಾಗದಿದ್ದರೆ ಅವರು ಆಡಲಾರರು" ಎಂದಿದ್ದಾರೆ ವಿಕ್ರಮ್ ರಾಥೋರ್.
"ಗಾಯದ ಬಗ್ಗೆ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆಯನ್ನು ನಡೆಸುತ್ತಿದ್ದಾರೆ. ಆ ವಿಚಾರವಾಗಿ ಹೇಳುವ ಸ್ಥಿತಿಯಲ್ಲಿ ನಾನಿಲ್ಲ. ಆದರೆ ನಾವು ಅವರಿಗೆ ಸಾಧ್ಯವಾಗುವಷ್ಟು ಸಮಯಾವಕಾಶವನ್ನು ನೀಡಲು ಬಯಸುತ್ತೇವೆ. ನಾಳೆ(ಶುಕ್ರವಾರ) ಬೆಳಗ್ಗೆ ಆಡುವ 11ರ ಬಳಗವನ್ನು ನೀವು ತಿಳಿದುಕೊಳ್ಳಲಿದ್ದೀರಿ" ಎಂದಿದ್ದಾರೆ ವಿಕ್ರಮ್ ರಾಥೋರ್.
ಗಾಬಾ ಟೆಸ್ಟ್: ಆಸ್ಟ್ರೇಲಿಯಾದ 32 ವರ್ಷಗಳ ಸೋಲಿಲ್ಲದ ದಾಖಲೆಗೆ ಅಡ್ಡಿಯಾಗುತ್ತಾ ರಹಾನೆ ಪಡೆ
ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಸರಣಿಯನ್ನು ವಶಪಡಿಸಿಕೊಳ್ಳುವ ದೃಷ್ಟಿಯಲ್ಲಿ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಕಳೆದ ಮೂರು ದಶಕಗಳಿಂದ ಅದೃಷ್ಠದ ಅಂಗಳವಾಗಿರುವ ಕಾರಣ ಟೀಮ್ ಇಂಡಿಯಾ ಇಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕೂಡ ಬಹಳ ಮುಖ್ಯವಾಗಿದೆ.
ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ