For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಬಾಕ್ಸಿಂಗ್ ಡೇ ಟೆಸ್ಟ್, 195 ರನ್‌ಗೆ ಆಸಿಸ್ ಆಲೌಟ್: Live ಸ್ಕೋರ್

India vs Australia, Boxing day test, 1st day Live score

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಅದ್ಭುತ ಬೌಲಿಂಗ್ ದಾಳಿಯನ್ನು ಸಂಘಟಿಸಿದ್ದು ಆಸಿಸ್‌ಗೆ ಆಘಾತ ನೀಡಿದೆ. ಭಾರತದ ಬೌಲಿಂಗ್ ದಾಳಿಗೆ ಆಸ್ಟ್ರೇಲಿಯಾ ಬ್ಯಾಟಿಂಗ್ ಪಡೆ ನೀರಸ ಉತ್ತರವನ್ನು ನೀಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 195 ರನ್‌ಗೆ ಆಲೌಟ್ ಆಗಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ದ್ವಿತಿಯ ಪಂದ್ಯ ಮೆಲ್ಬರ್ನ್‌ನಲ್ಲಿ ಇಂದಿನಿಂದ ಆರಂಭವಾಗಿದೆ. ಮೊದಲಿಗೆ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಅಯ್ಕೆ ಮಾಡಿಕೊಂಡಿತು. ಸರಣಿಯಲ್ಲಿ ಆಸ್ಟ್ರೇಲಿಯಾ ಮೊದಲ ಪಂದ್ಯವನ್ನು ಗೆಲುವು ಕಂಡಿದ್ದು 1-0 ಮುನ್ನಡೆಯಲ್ಲಿದೆ.

ಟಾಸ್ ಗೆದ್ದುಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಆಸ್ಟ್ರೇಲಿಯಾಗೆ ಆರಂಭಿಕ ಆಘಾತ ಉಂಟಾಗಿದೆ. ಓಪನರ್ ಜೋ ಬರ್ನ್ಸ್ ಶೂನ್ಯಕ್ಕೆ ಜಸ್ಪ್ರಿತ್ ಬೂಮ್ರಾ ಎಸೆತದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್‌ಗಾಗಿ ಟೀಮ್ ಇಂಡಿಯಾದಲ್ಲಿ ನಾಲ್ಕು ಬದಲಾವಣೆಗಳು ಆಗಿದೆ. ನಾಯಕ ವಿರಾಟ್ ಕೊಹ್ಲಿ ಸರಣಿಯ ಮುಂದಿನ ಪಂದ್ಯಗಳಿಗೆ ಅಲಭ್ಯರಾಗುತ್ತಿರುವ ಹಿನ್ನೆಲೆಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಶುಭ್ಮನ್ ಗಿಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.

Live ಸ್ಕೋರ್ ಪಟ್ಟಿ ಈ ಕೆಳಗಿನಂತಿದೆ:

1
48441

ಟೀಮ್ ಇಂಡಿಯಾ ಆಡುವ ಬಳಗ: ಅಜಿಂಕ್ಯ ರಹಾನೆ(ನಾಯಕ), ಮಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ ಪ್ಲೇಯಿಂಗ್‌ XI: ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲ್ಯಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಡ್ ಹೆಡ್, ಕ್ಯಾಮರಾನ್ ಗ್ರೀನ್, ಟಿಮ್ ಪೈನ್ (ನಾಯಕ, ವಿಕೆ), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್

Story first published: Saturday, December 26, 2020, 11:33 [IST]
Other articles published on Dec 26, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+