ಭಾರತ vs ಆಸ್ಟ್ರೇಲಿಯಾ: ನಾಲ್ಕನೇ ಟೆಸ್ಟ್ ಬ್ರಿಸ್ಬೇನ್‌ನಲ್ಲಿ ನಡೆಯುವುದು ಖಚಿತ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಆತಿಥ್ಯದ ಬಗ್ಗೆ ಇದ್ದ ಅನುಮಾನಗಳಿಗೆ ಸೋಮವಾರ ತೆರೆಬಿದ್ದಿದೆ. ಆತಿಥೆಯರು ಈ ಬಗ್ಗೆ ಖಚಿತವಾಗಿ ಮಾಹಿತಿಯನ್ನು ನೀಡಿದ್ದು ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ನಿಗದಿಯಂತೆಯೇ ಪಂದ್ಯ ನಡೆಯಲಿದೆ ಎಂದಿದೆ.
ಕ್ವೀನ್ಸ್‌ಲ್ಯಾಂಡ್‌ನಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ವಾರಂಟೈನ್ ನಿಯಮ ಇರುವ ಕಾರಣ ಭಾರತೀಯ ಕ್ರಿಕೆಟಿಗರು ಬ್ರಿಸ್ಬೇನ್‌ಗೆ ಪ್ರಯಾಣಿಸಲು ಹಿಣದೇಟು ಹಾಕುತ್ತಿದ್ದಾರೆ ಎಂಬ ಬಗ್ಗೆ ವರದಿಯಾಗಿತ್ತು. ಇದೇ ವಿಚಾರದ ಬಗ್ಗೆ ಸಾಕಷ್ಟು ಮಾತುಕತೆಗಳಾಗಿದ್ದು ಭಾರತೀಯ ಕ್ರಿಕೆಟ್ ಮಂಡಳಿ ಬ್ರಸ್ಬೇನ್ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ನಿಗದಿಯಂತೆಯೇ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಬ್ರಿಸ್ಬೇನ್‌ಗೆ ಪ್ರಯಾಣವನ್ನು ಬೆಳೆಸಲಿದೆ.
"ಕಳೆದ ರಾತ್ರಿ ನಾನು ಬಿಸಿಸಿಐನ ಕಾರ್ಯದರ್ಶಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದೇನೆ. ಮಂಗಳವಾರ ನಾವು ಬ್ರಿಸ್ಬೇನ್‌ಗೆ ಪ್ರಯಾಣ ನಡೆಸಲಿದ್ದೇವೆ ಎಂಬುದನ್ನು ಅವರು ಖಚಿತವಾಗಿ ಹೇಳಿದ್ದಾರೆ" ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಹಂಗಾಮಿ ಮುಖ್ಯ ಕಾರ್ಯನಿರ್ವಾಹಕ ನಿಕ್ ಹಾಕ್ಲೆ ವಿವರಿಸಿದ್ದಾರೆ.
ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದ ಸಾಮರ್ಥ್ಯದ ಅರ್ಧದಷ್ಟು ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದೆ. ಪಂದ್ಯಕ್ಕೆ ಆಗಮಿಸುವಾಗ, ವಾಪಾಸಾಗುವಾಗ ಹಾಗೂ ಸ್ಟೇಡಿಯಂ ಒಳಗೆ ಓಡಾಡುವಾಗ ಮಾಸ್ಕ್ ಕಡ್ಡಾಯವಾಗಿರುತ್ತದೆ ಆದರೆ ಆಸನದಲ್ಲಿ ಕುಳಿತು ಪಂದ್ಯ ವೀಕ್ಷಿಸುವಾಗ ತೆರೆದ ಪ್ರದೇಶದಲ್ಲಿ ಇರುವ ಕಾರಣ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ.
ಬ್ರಿಸ್ಬೇನ್ ಟೆಸ್ಟ್ ಬಾರ್ಡರ್-ಗವಾಸ್ಕರ್ ಸರಣಿಯ ಅಂತಿಮ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯವಾಗಿದೆ. ಜನವರಿ 15ರಂದು ಶುಕ್ರವಾರದಿಂದ ಈ ಪಂದ್ಯ ಆರಂಭವಾಗಲಿದೆ. ಈ ಮೈದಾನದಲ್ಲಿ 1988ರ ಬಳಿಕ ಆಸ್ಟ್ರೇಲಿಯಾ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಸತತ 31 ಟೆಸ್ಟ್ ಪಂದ್ಯಗಳಲ್ಲಿ ಈ ಅಜೇಯ ದಾಖಲೆ ಯಾವುದೇ ಕ್ರೀಡಾಂಗಣದಲ್ಲಿ ತಂಡವೊಂದರ ವಿಶ್ವ ದಾಖಲೆಯಾಗಿದೆ. ಹೀಗಾಗಿ ಭಾರತಕ್ಕೆ ಈ ಪಂದ್ಯ ದೊಡ್ಡ ಸವಾಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications