ಭಾರತ vs ಆಸ್ಟ್ರೇಲಿಯಾ: ಮೊದಲ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ ಅಲ್ಪ ಹಿನ್ನೆಡೆ: ಹೈಲೈಟ್ಸ್

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 336 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 33 ನ್‌ಗಳ ಅಲ್ಪ ಹಿನ್ನಡೆಯನ್ನು ಅನುಭವಿಸಿದೆ. ಈ ಮೂಲಕ ಅಂತಿಮ ಪಂದ್ಯದಲ್ಲಿ ಭಾರತ ಆತಿಥೇಯ ಆಸಿಸ್‌ಗೆ ತಿರುಗೇಟು ನೀಡುವಲ್ಲಿ ಯಶಸ್ವಿಯಾಯಿತು.
ಎರಡನೇ ದಿನದ ಆಟದಲ್ಲಿ ಆರಂಭಿಕರಿಬ್ಬರನ್ನು ಕಳೆದುಕೊಂಡಿದ್ದ ಭಾರತ ಮೂರನೇ ದಿನದಾಟ ಆರಂಭಿಸಿ ಕೆಲವೇ ಕ್ಷಣಗಳಲ್ಲಿ ಅನುಭವಿ ಚೇತೇಶ್ವರ್ ಪೂಜಾರ ವಿಕೆಟ್ ಕಳೆದುಕೊಂಡಿತು. ಬಳಿಕ ಮಯಾಂಕ್ ಅಗರ್ವಾಲ್ ಜೊತೆಗೆ ಉತ್ತಮ ಒತೆಯಾಟವನ್ನು ನೀಡುವ ಭರವಸೆ ಮೂಡಿಸಿದ ನಾಯಕ ಅಜಿಂಕ್ಯ ರಹಾನೆ 37 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅದಾದ ನಂತರ ಮಯಾಂಕ್ ಅಗರ್ವಾಲ್ ಕೂಡ 38 ರನ್‌ಗೆ ಆಟವನ್ನು ಮುಗಿಸಿದರು. ಬಳೀಕ ರಿಷಭ್ ಪಂತ್ 23 ರನ್ ಗಳಿಸಿ ಔಟ್ ಆಗಿ ಹೊರ ನಡದರು.
ಈ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ಜೊತೆಯಾದರು. ಈ ಇಬ್ಬರು ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾದರು. ಇಬ್ಬರೂ ಅರ್ಧ ಶತಕವನ್ನು ಸಿಡಿಸಿದ್ದಲ್ಲದೆ ಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಸರೆಯಾದರು. ಶಾರ್ದೂಲ್ ಠಾಕೂರ್ 67 ರನ್ ಗಳಿಸಿ ಔಟ್ ಆದರೆ ವಾಶಿಂಗ್ಟನ್ ಸುಂದರ್ 62 ರನ್ ಗಳಿಸಿ ಫೆವಿಲಿಯನ್ ಸೇರಿದರು. ಈ ಜೋಡಿಯ ಆಟದ ನೆರವಿನಿಂದ ಭಾರತ ಮುನ್ನೂರು ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.
ಶಾರ್ದೂಲ್ ಠಾಕೂರ್ ಹಾಗೂ ವಾಶಿಂಗ್ಟನ್ ಸುಂದರ್ ಜೋಡಿ 123 ರನ್‌ಗಳ ಅದ್ಭುತ ಜೊತೆಯಾಟವನ್ನು ನೀಡಿ ಬೇರ್ಪಟ್ಟಿತು. ಅಂತಿಮವಾಗಿ ಭಾರತ 336 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 33 ರನ್‌ಗಳ ಅಲ್ಪ ಮುನ್ನಡೆಯನ್ನು ಪಡೆದುಕೊಂಡಿತು. ಆಸ್ಟ್ರೇಲಿಯಾ ಪರವಾಗಿ ಜೋಶ್ ಹ್ಯಾಜಲ್‌ವುಡ್ 5 ವಿಕೆಟ್ ಪಡೆದರೆ ಸ್ಟಾರ್ಕ್ ಹಾಗೂ ಪ್ಯಾಟ್ ಕಮ್ಮಿನ್ಸ್ ತಲಾ 2 ವಿಕೆಟ್ ಪಡೆದಿದ್ದಾರೆ. ಕ್ರಿಸ್ ಲಿಯಾನ್ 1 ವಿಕೆಟ್ ಪಡೆದುಕೊಂಡಿದ್ದಾರೆ.
ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು ವಿಕೆಟ್ ಕಳೆದುಕೊಳ್ಳದೆ 21 ರನ್ ಗಳಿಸಿದೆ. ಡೇವಿಡ್ ವಾರ್ನರ್ ಸ್ಪೋಟಕ ಆಟಕ್ಕೆ ಒತ್ತು ಕ್ರೀಸ್ ನೀಡಿದ್ದು 22 ಎಸೆತಗಳಲ್ಲಿ 20 ರನ್ ಗಳಿಸಿ ಆಡುತ್ತಿದ್ದಾರೆ. ಮಾರ್ಕಸ್ ಹ್ಯಾರಿಸ್ 1 ರನ್ ಗಳಿಸಿ ಕಾಯ್ದುಕೊಂಡಿದ್ದಾರೆ. ಸದ್ಯ ಆಸ್ಟ್ರೇಲಿಯಾ 54 ರನ್‌ಗಳ ಮುನ್ನಡೆಯಲ್ಲಿದೆ ಇನ್ನು ಎರಡು ದಿನಗಳ ಆಟ ಬಾಕಿಯಿದ್ದು ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications