Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ ವಿರುದ್ಧದ ಡೇ-ನೈಟ್ ಟೆಸ್ಟ್ ಆಯೋಜನೆಗೆ ಬದ್ಧ: ಕ್ರಿಕೆಟ್ ಅಸ್ಟ್ರೇಲಿಯಾ

India vs Australia: CA committed to host day-night Test in Adelaide

ದಕ್ಷಿಣ ಆಸ್ಟ್ರೇಲಿಯಾದಲ್ಲಿ ಕೊರೊನಾ ವೈರಸ್ ಪ್ರಕರಣ ಹಠಾತ್ ಆಗಿ ಏರಿಕೆ ಕಂಡಿದೆ. ಇದು ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಯಾವುದೇ ರೀತಿಯಲ್ಲೂ ಪರಿಣಾಮ ಬಿರಲಾರದು ಎಂಬುದನ್ನು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟಪಡಿಸಿದೆ. ಜೊತೆಗೆ ಅಡಿಲೇಡ್‌ನಲ್ಲಿ ನಡೆಯಲಿರುವ ಅಹರ್ನಿಶಿ ಟೆಸ್ಟ್ ಪಂದ್ಯಕ್ಕೂ ಸಮಸ್ಯೆಯಾಗಲಾರದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟವಾಗಿ ತಿಳಿಸಿದೆ.

"ಕ್ರಿಕೆಟ್ ಆಸ್ಟ್ರೇಲಿಯಾ ದಕ್ಷಿಣ ಆಸ್ಟ್ರೇಲಿಯಾದಲ್ಲಿನ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಅವಲೋಕಿಸುತ್ತಿದೆ. ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯವನ್ನು ಆಯೋಜಿಸಲಲು ಕ್ರಿಕೆಟ್ ಆಸ್ಟ್ರೇಲಿಯಾ ಬದ್ಧವಾಗಿದೆ" ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳು 3 ಏಕದಿನ 3 ಟಿ20 ಹಾಗೂ 4 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಟೆಸ್ಟ್ ಸರಣಿ ಡಿಸೆಂಬರ್ 17 ರಿಮದ ಆರಂಭವಾಗಲಿದೆ. ಅಡಿಲೇಡ್‌ನಲ್ಲಿ ಮೊದಲ ಟೆಸ್ಟ್ ನಡೆಯಲಿದ್ದು ಇದು ಅಹರ್ನಿಶಿ ಪಂದ್ಯವಾಗಿರಲಿದೆ.

ಕೊರೊನಾ ವೈರಸ್ ಬಳಿಕ ಭಾರತ ಕ್ರಿಕೆಟ್ ತಂಡ ಪಾಲ್ಗೊಳ್ಳುತ್ತಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾಗಿರಲಿದೆ. ಸುದೀರ್ಘ ವಿರಾಮದ ಬಳಿಕ ಟೀಮ್ ಇಂಡಿಯಾ ಅಂತಾರಾಷ್ಟ್ರಿಯ ಕ್ರಿಕೆಟ್‌ಗೆ ಮರಳುತ್ತಿದೆ. 2018/19ರಲ್ಲಿ ನಡೆದ ಟೆಸ್ಟ್ ಸರಣಿಯನ್ನು ಭಾರತ ಐತಿಹಾಸಿಕವಾಗಿ ಗೆದ್ದು ಬೀಗಿತ್ತು. ಹೀಗಾಗಿ ಈ ಸರಣಿಯ ಮೇಲೆ ಸಾಕಷ್ಟು ಕುತೂಹಲ ಮೂಡಿದೆ.

Story first published: Friday, November 20, 2020, 14:53 [IST]
Other articles published on Nov 20, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+