ಭಾರತ vs ಆಸ್ಟ್ರೇಲಿಯಾ: ವೃತ್ತಿ ಜೀವನದಲ್ಲಿ ಅತ್ಯಂತ ನಿಧಾನದ ಅರ್ಧ ಶತಕ ಸಿಡಿಸಿದ ಪೂಜಾರ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಅಂತಿಮ ದಿನದಾಟದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಅರ್ಧ ಶತಕವನ್ನು ಬಾರಿಸಿದ್ದಾರೆ. ಈ ಅರ್ಧ ಶತಕ ಪೂಜಾರ ವೃತ್ತಿ ಜೀವನದ ಅತ್ಯಂತ ನಿಧಾನಗತಿಯ ಅರ್ಧ ಶತಕ ಎನಿಸಿಕೊಂಡಿದೆ.

ಭಾರತ ಆಸ್ಟ್ರೇಲಿಯಾ ಸರಣಿಯ ಅಂತಿಮ ದಿನದಾಟದಲ್ಲಿ ಪೂಜಾರ ಬ್ಯಾಟಿಂಗ್ ನಡೆಸಿ 211 ಎಸೆತಗಳಲ್ಲಿ 56 ರನ್ ಗಳಿಸಿದರು. ಅರ್ಧ ಶತಕವನ್ನು ಗಳಿಸಲು ಪೂಜಾರ 196 ಎಸೆತಗಳನ್ನು ಬಳಸಿಕೊಂಡಿದ್ದರು. ಈ ಎಚ್ಚರಿಕೆಯ ಆಟದ ಮೂಲಕ ಟೀಮ್ ಇಂಡಿಯಾಗೆ ದೊಡ್ಡ ಆಘಾತ ಎದುರಾಗದಂತೆ ನೋಡಿಕೊಂಡರು.

ಭಾರತ vs ಆಸ್ಟ್ರೇಲಿಯಾ: 91 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಶುಬ್ಮನ್ ಗಿಲ್

ಸಿಡ್ನಿ ಟೆಸ್ಟ್ ಪಂದ್ಯದಲ್ಲೂ ಪೂಜಾರ ಎರಡು ಇನ್ನಿಂಗ್ಸ್‌ಗಳಲ್ಲಿ ಸತತ ಎರಡು ಅರ್ಧ ಶತಕವನ್ನು ಸಿಡಿಸಿದ್ದರು. ಇದು ಕ್ರಮವಾಗಿ 174 ಹಾಗೂ 170 ಎಸೆತಗಳಲ್ಲಿ ಬಂದಿತ್ತು. ಪೂಜಾರ ಅವರ ಈ ಸಾಹಸದಿಂದ ಸಿಡ್ನಿ ಟೆಸ್ಟ್ ಪಂದ್ಯವನ್ನು ಟೀಮ್ ಇಮಡಿಯಾ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಂತಿಮ ದಿನ 324 ರನ್ ಗಳಿಸುವ ಗುರಿಯನ್ನು ಹೊಂದಿತ್ತು. ರೋಹಿತ್ ಶರ್ಮಾ ವಿಕೆಟ್‌ಅನ್ನು ಶೀಘ್ರವಾಗಿ ಕಳೆದುಕೊಂಡ ನಂತರ ಪೂಜಾರ ಶುಬ್ಮನ್ ಗಿಲ್ ಜೊತೆಗೂಡಿ ತಂಡವನ್ನು ಕುಸಿತದಿಂದ ಪಾರು ಮಾಡಿದರು.

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಬ್ರಿಸ್ಬೇನ್, ಅಂತಿಮ ದಿನದಾಟ Live ಸ್ಕೋರ್

ಎರಡನೇ ವಿಕೆಟ್‌ಗೆ ಯುವ ಆಟಗಾರ ಶುಬ್ಮನ್ ಗಿಲ್ ಜೊತೆಗೆ 114 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ಬಳಿಕ ನಾಯಕ ಅಜಿಂಕ್ಯ ರಹಾನೆ ಜೊತೆಗೂಡಿ 35 ರನ್‌ಗಳ ಜೊತೆಯಾಟವನ್ನು ಆಡಿದರು. ಬಳಿಕ ರಿಷಭ್ ಪಂತ್ ಜೊತೆಗೆ 61 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿ ನಿರ್ಣಾಯಕ ಪಾತ್ರವಹಿಸಿದರು.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Tuesday, January 19, 2021, 12:41 [IST]
Other articles published on Jan 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X