ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಅದುವೇ ನನ್ನ ಜೀವನದ ಅತ್ಯಂತ ಶ್ರೇಷ್ಠ ಸರಣಿ ಎಂದ ಚೇತೇಶ್ವರ್ ಪೂಜಾರ

India vs Australia: Cheteshwar Pujara said 2018-19 BGT is best series of his career

ಟೀಮ್ ಇಂಡಿಯಾದ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಕುತೂಹಲಕಾರಿ ಸಂಗತಿಯನ್ನು ಹಂಚಿಕೊಂಡಿದ್ದಾರೆ. 2018-19ನೇ ಸಾಲಿನ ಬಾರ್ಡರ್-ಗವಾಸ್ಕರ್ ಸರಣಿ ತನ್ನ ಪಾಲಿಗೆ ಅತ್ಯಂತ ಸವಾಲಿನ ಟೆಸ್ಟ್ ಸರಣಿಯಾಗಿತ್ತು ಎಂದಿದ್ದಾರೆ ಚೇತೇಶ್ವರ್ ಪೂಜಾರ.

ಆಸ್ಟ್ರೇಲಿಯಾ ನೆಲದಲ್ಲಿ ಟೀಮ್ ಇಂಡಿಯಾ ಸತತ ಎರಡು ಸರಣಿಗಳಲ್ಲಿ ಗೆಲುವು ಸಾಧಿಸಿದ್ದು ಈ ಸಂದರ್ಭದಲ್ಲಿ ಚೇತೇಶ್ವರ್ ಪೂಜಾರ ಭಾರತದ ಮಧ್ಯಮ ಕ್ರಮಾಂಕದ ಆಧಾರಸ್ಥಂಭವಾಗಿದ್ದರು. ಈ ಬಾರಿ ಭಾರತದಲ್ಲಿ ನಡೆಯಲಿರುವ ಸರಣಿಯಲ್ಲಿಯೂ ಅನುಭವಿ ಆಟಗಾರನಾಗಿರುವ ಪೂಜಾರ ಮೇಲೆ ಸಾಕಷ್ಟು ನಿರೀಕ್ಷೆಗಳು ಇದೆ.

Ind Vs Aus Test: ಟೆಸ್ಟ್ ಸರಣಿಗೆ ಈ ರೀತಿ ಪಿಚ್ ಬೇಕು ಎಂದು ಕ್ಯುರೇಟರ್‌ಗಳಿಗೆ ಮನವಿ ಮಾಡಿದ ದ್ರಾವಿಡ್ ಮತ್ತು ರೋಹಿತ್ ಶರ್ಮಾInd Vs Aus Test: ಟೆಸ್ಟ್ ಸರಣಿಗೆ ಈ ರೀತಿ ಪಿಚ್ ಬೇಕು ಎಂದು ಕ್ಯುರೇಟರ್‌ಗಳಿಗೆ ಮನವಿ ಮಾಡಿದ ದ್ರಾವಿಡ್ ಮತ್ತು ರೋಹಿತ್ ಶರ್ಮಾ

ಚೇತೇಶ್ವರ್ ಪೂಜಾರ 2018-18ರಲ್ಲಿ ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಐತಿಹಾಸಿಕ ಪ್ರವಾಸದ ಬಗ್ಗೆ ಮಾತನಾಡಿದ್ದಾರೆ. ಆ ಪ್ರವಾಸದಲ್ಲಿ ಚೇತೇಶ್ವರ್ ಪೂಜಾರ 521 ರನ್‌ಗಳಿಸಿ ಎರಡನೇ ಅತೀ ಹೆಚ್ಚಿನ ರನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಆ ಸರಣಿ ತನ್ನ ವೃತ್ತಿ ಜೀವನದ ಅತ್ಯುತ್ತಮ ಸರಣಿ ಎಂದಿದ್ದಾರೆ ಚೇತೇಶ್ವರ್ ಪೂಜಾರ.

"ಆವು ಕೆಲ ಅದ್ಭುತ ಸರಣಿಗಳನ್ನು ಆನಂದಿಸಿದ್ದೇವೆ. ಆದರೆ ಅದು ಮಾತ್ರ ನನ್ನ ಕ್ರಿಕೆಟ್ ವೇತ್ತಿಜೀವನದ ಅತ್ಯುತ್ತಮವಾದ ಸರಣಿಯಾಗಿದೆ. ನಾನು ಬ್ಯಾಟಿಂಗ್ ಮಾಡಿದ ರೀತಿ, ಏಕಾಗ್ರತೆ ವಹಿಸಿದ ರೀತಿ, ಆ ಸರಣಿಯಲ್ಲಿ ಸಾಕಷ್ಟು ದೈಹಿಕ ಹಾಗೂ ಮಾನಸಿಕ ಒತ್ತಡಗಳು ಇದ್ದವು. ಪ್ರತಿ ಪಂದ್ಯಗ ಕೂಡ ಬಹಳ ದೊಡ್ಡ ಸವಾಲಾಗಿತ್ತು" ಎಂದಿದ್ದಾರೆ ಹಿರಿಯ ಕ್ರಿಕೆಟಿಗ ಚೇತೇಶ್ವರ್ ಪೂಜಾರ.

ಪ್ರಸಕ್ತ ಕ್ರಿಕೆಟ್ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿರುವ ಆಸ್ಟ್ರೇಲಿಯಾ ಎಲ್ಲಾ ಪರಿಸ್ಥಿತಿಗಳಲ್ಲಿ ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ವಿಶ್ವದ ಅತ್ಯುತ್ತಮ ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ಆಸ್ಟ್ರೇಲಿಯಾ ಬಲಿಷ್ಠವಾಗಿರುವ ತಂಡವಾಗಿದ್ದ ಇಂಥಾ ಹಣಾಹಣಿಯನ್ನು ಇಷ್ಟಪಡುವುದಾಗಿ ಹೇಳಿಕೊಂಡಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಈಗ ಈ ಸರಣಿಗಾಗಿ ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದು ಆಸ್ಟ್ರೇಲಿಯಾ ತಂಡ ಬೆಂಗಳೂರಿನ ಹೊರವಲಯದ ಆಲೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದರೆ ಭಾರತ ತಂಡ ನಾಗ್ಪುರದಲ್ಲಿ ಸಿದ್ಧತೆ ನಡೆಸುತ್ತಿದೆ. ಫೆಬ್ರವರಿ 9ರಿಂದ ಈ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ.

ಗೆದ್ದ ಜಯ್ ಶಾ ಹಠ, ಪಾಕ್‌ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರಗೆದ್ದ ಜಯ್ ಶಾ ಹಠ, ಪಾಕ್‌ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರ

ಇತ್ತಂಡಗಳ ಸ್ಕ್ವಾಡ್
ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Sunday, February 5, 2023, 16:38 [IST]
Other articles published on Feb 5, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X