ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಸುಂದರ್ ಸೇರಿ ನಾಲ್ವರು ಸ್ಪಿನ್ನರ್‌ಗಳು ನೆಟ್ ಬೌಲರ್‌ಗಳಾಗಿ ತಂಡಕ್ಕೆ ಸೇರ್ಪಡೆ

India vs Australia: including Washington Sundar four spinners added to Indian squad as net bowlers

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದ ಸಿದ್ಧತೆ ಭರ್ಕರಿಯಾಗಿ ಆರಂಭವಾಗಿದೆ. ಈಗಾಗಲೇ ಭಾರತ ತಂಡದ ಆಟಗಾರರು ನಾಗ್ಪುರಕ್ಕೆ ತಲುಪಿದ್ದು ಟೆಸ್ಟ್ ಸರಣಿಗೆ ಸಿದ್ಧತೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಭಾರತದ ಸ್ಕ್ವಾಡ್‌ಗೆ ನಾಲ್ವರು ಸ್ಪಿನ್ನರ್‌ಗಳನ್ನು ನೆಟ್ ಬೌಲರ್‌ಗಳಾಗಿ ಸೇರ್ಪಡೆಗೊಳಿಸಲಾಗಿದ್ದು ಅದರಲ್ಲಿ ಭಾರತದ ವೈಟ್‌ಬಾಲ್ ಸ್ಪೆಶಲಿಸ್ಟ್ ವಾಶಿಂಗ್ಟನ್ ಸುಂದರ್ ಕೂಡ ಸೇರಿಕೊಂಡಿದ್ದಾರೆ.

ನೆಟ್ ಬೌಲರ್‌ಗಳಾಗಿ ಭಾರತ ತಂಡಕ್ಕೆ ಸೇರ್ಪಡೆಗೊಂಡಿರುವ ಬೌಲರ್‌ಗಳ ಪೈಕಿ ವಾಶಿಂಗ್ಟನ್ ಸುಂದರ್ ಹೊರತುಪಡಿಸಿ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್, ರಿಸ್ಟ್ ಸ್ಪಿನ್ನರ್ ರಾಹುಲ್ ಚಹರ್ ಹಾಗೂ ಮತ್ತೋರ್ವ ಎಡಗೈ ಸ್ಪಿನ್ನರ್ ಆರ್ ಸಾಯಿಕಿಶೋರ್ ಕೂಡ ಸೇರಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಪಿ ಆರಂಭಕ್ಕೆ ದಿನಗಣನೆ: ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದಲ್ಲಿ ನಡೆಯಲಿದ್ದು ಅದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಮೂರನೇ ಪಂದ್ಯ ಧರ್ಮಶಾಲಾದಲ್ಲಿ ಆಯೋಜನೆಯಾದರೆ ಅಂತಿಮ ಟೆಸ್ಟ್ ಪಂದ್ ಅಹ್ಮದಾಬಾದ್‌ನಲ್ಲಿ ನಡೆಯಲಿದೆ

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

Story first published: Saturday, February 4, 2023, 5:30 [IST]
Other articles published on Feb 4, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X