
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸೆನ್ಸೇಶನಲ್ ಆಟಗಾರ ಸೂರ್ಯಕುಮಾರ್ ಯಾದವ್ ಟೆಸ್ಟ್ ಮಾದರಿಗೆ ಪದಾರ್ಪಣೆ ಮಾಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಸೂರ್ಯಕುಮಾರ್ ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಬಾರದಿದ್ದರೂ ಆಟದ ಶೈಲಿಯಲ್ಲಿ ಸಾಕಷ್ಟು ಸಕಾರಾತ್ಮಕವಾಗಿ ಕಂಡಿದ್ದಾರೆ. ಈ ವಿಚಾರವಾಗಿ ಎರಡನೇ ದಿನದಾಟದ ಮುಕ್ತಾಯದ ಬಳಿಕ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಪ್ರತಿಕ್ರಿಯೆ ನೀಡಿದ್ದಾರೆ.
ಸೂರ್ಯಕುಮಾರ್ ಯಾದವ್‌ಗ ತಮ್ಮ ಸಹಜಶೈಲಿಯಲ್ಲಿಯೇ ಬ್ಯಾಟಿಂಗ್ ನಡೆಸುವಂತೆ ಹೇಳಲಾಗಿತ್ತು ಎಂದು ವಿಕ್ರಮ್ ರಾಥೋರ್ ಹೇಳಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 8 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರಿಂದ ಹೆಚ್ಚಿನ ರನ್ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.
"ಈ ಹಂತದಲ್ಲಿ ಪರಿಸ್ಥಿತಿಗೆ ಒಗ್ಗಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಆತನಿಗೆ ಆತನ ಆಟವನ್ನು ಆಡುವಂತೆ ಹೇಳಲಾಗಿತ್ತು. ರನ್‌ಗಳಿಸಲು ಆತನಲ್ಲಿ ತನ್ನದೇ ಆದ ಮಾರ್ಗಗಳಿವೆ. ಬ್ಯಾಟಿಂಗ್ ಎಂದರೆ ರನ್‌ಗಳಿಸುವುದು, ಅದನ್ನು ಗಳಿಸಲು ಬೇಕಾದ ದಾರಿಯನ್ನು ಕಂಡುಕೊಳ್ಳಬೇಕು. ಅದನ್ನೇ ಆತನಿಗೆ ಹೇಳಲಾಗಿತ್ತು. ಇಂದು ಆತ ದುರದೃಷ್ಟವಶಾತ್ ಉತ್ತಮ ಎಸೆತಕ್ಕೆ ವಿಕೆಟ್ ಕಳೆದುಕೊಳ್ಳಬೇಕಾಯಿತು. ಅದು ಪರವಾಗಿಲ್ಲ. ಮುಂದಿನ ಇನ್ನಿಂಗ್ಸ್‌ನಲ್ಲಿ ಆತ ರನ್‌ಗಳಿಸುವ ನಿರೀಕ್ಷೆಯಿದೆ" ಎಂದಿದ್ದಾರೆ ವಿಕ್ರಮ್ ರಾಥೋರ್.
ಭಾರತದ ನಾಯಕ ರೋಹಿತ್ ಶರ್ಮಾ ತಮ್ಮ ಒಂಬತ್ತನೇ ಟೆಸ್ಟ್ ಶತಕವನ್ನು ಬಾರಿಸಿದ್ದು ಬಳಿಕ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಭಾರತವನ್ನು ಉತ್ತಮ ಮೊತ್ತದತ್ತ ಹೆಜ್ಜೆಯಿಡುವಂತೆ ಮಾಡಿದ್ದಾರೆ. ರವೀಂದ್ರ ಜಡೇಜಾ (66*) ಮತ್ತು ಅಕ್ಷರ್ ಪಟೇಲ್ (52*) ಮೂರನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದು ಭಾರತ 321/7 ರನ್‌ಗಳಿಸಿ ಮೂರನೇ ದಿನ ಆಟವನ್ನು ಮುಂದುವರಿಸಲಿದೆ
ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಶುಬ್ಮನ್ ಗಿಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಕ್ಯಾಮರೂನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಲ್ಯಾನ್ಸ್ ಮೋರಿ