ಭಾರತ vs ಆಸ್ಟ್ರೇಲಿಯಾ: ಭಾರತಕ್ಕೆ 407 ರನ್‌ಗಳ ಗುರಿ ನೀಡಿದ ಆಸಿಸ್ ಪಡೆ

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಭಾರತಕ್ಕೆ ಬೃಹತ್ ಗುರಿಯನ್ನು ಮುಂದಿಟ್ಟಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡು 312 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 407 ರನ್ ಗಳಿಸುವ ಗುರಿಯನ್ನು ಭಾರತಕ್ಕೆ ಆಸ್ಟ್ರೇಲಿಯಾ ನೀಡಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಆಸಿಸ್ ಆರಂಭಿಕರು ವಿಫಲರಾದರು. ಆದರೆ ಮಧ್ಯಮ ಕ್ರಮಾಂಕದ ಆಟಗಾರರು ಆಸಿಸ್‌ಗೆ ಹಿನ್ನಡೆಯಾಗದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು. ಲಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ಅದ್ಭುತ ಆಟ ತಂಡಕ್ಕೆ ದೊಡ್ಡ ಬಲ ನೀಡಿತು.
ಲ್ಯಾಬುಶೇನ್ 73 ರನ್ ಗಳಿಸಿ ಸೈನಿಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮೊದಲ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕದ ಸಾಧನೆ ಮಾಡಿದ್ದಾರೆ. ಮತ್ತೊಂದೆಡೆ ಮೊದಲ ಇನ್ನಿಂಗ್ಸ್‌ನಲ್ಲಿ ಭರದ್ಜರಿ ಶತಕವನ್ನು ಸಿಡಿಸಿದ್ದ ಸ್ಮಿತ್ ಕೂಡ 81 ರನ್‌ಗಳ ನಿರ್ಣಾಯಕ ಕೊಡುಗೆಯನ್ನು ನೀಡಿ ಮಿಂಚಿದ್ದಾರೆ.
ಮತ್ತೊಂದೆಡೆ ಕ್ಯಾಮರೂನ್ ಗ್ರೀನ್ ಕೂಡ ತಮ್ಮ ಚೊಚ್ಚಕ ಅರ್ಧ ಶತಕವನ್ನು ಸಿಡಿಸಿ ಮಿಂಚಿದ್ದಾರೆ. ಆಲ್‌ರೌಂಡರ್ ಕ್ಯಾಮರೂನ್ 84 ರನ್‌ಗಳ ಕೊಡುಗೆಯನ್ನು ನೀಡಿದ್ದಾರೆ. ನಾಯಕ ಟಿಮ್ ಪೈನ್ 39ರನ್ ಗಳಿಸಿ ಅಜೇಯವಾಗುಳಿದರು. ಆಸಿಸ್ 312 ರನ್ ಗಳಿಸುತ್ತಿದ್ದಂತೆಯೇ ಕ್ಯಾಮರೂನ್ ಗ್ರೀನ್ ವಿಕೆಟ್ ಒಪ್ಪಿಸಿದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡುವ ನಿರ್ಧಾರವನ್ನು ನಾಯಕ ಪೈನ್ ಕೈಗೊಂಡರು.
ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ನವ್‌ದೀಪ್ ಸೈನಿ ಹಾಗೂ ಆರ್ ಅಶ್ವಿನ್ 2 ವಿಕೆಟ್ ಪಡೆದರು. ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದರು. ಭಾರತ ಆಸಿಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications