Ind vs Aus 2nd Test: ಮತ್ತೆ ಮಿಂಚಿದ ಭಾರತದ ಬೌಲರ್‌ಗಳು: ಮೊದಲ ದಿನದಾಟದಲ್ಲಿಯೇ ಆಸಿಸ್ ಆಲೌಟ್

ದೆಹಲಿಯಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಮತ್ತೊಮ್ಮೆ ಮಿಂಚಿನ ಪ್ರದರ್ಶನ ನೀಡಿದೆ. ಟಾಸ್ ಗೆದ್ದರೂ ಆಸ್ಟ್ರೇಲಿಯಾ ತಂಡಕ್ಕೆ ಹೆಚ್ಚಿನ ಯಶಸ್ಸು ದೊರೆಯದಂತೆ ಮಾಡುವಲ್ಲಿ ಭಾರತೀಯ ಬೌಲಿಂಗ್ ಪಡೆ ಯಶಸ್ವಿಯಾಗಿದೆ. ಟೀಮ್ ಇಂಡಿಯಾ ಪರವಾಗಿ ಮೊಹಮ್ಮದ್ ಶಮಿ ನಾಲ್ಕು ವಿಕೆಟ್ ಕಿತ್ತು ಮಿಂಚಿದರೆ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಕಬಳಿಸಿದ್ದಾರೆ.
ಆಸ್ಟ್ರೇಲಿಯಾ ತಂಡದ ಪರವಾಗಿ ಅಗ್ರ ಕ್ರಮಾಂಕದಲ್ಲಿ ಉಸ್ಮಾನ್ ಖವಾಜ ಮಾತ್ರವೇ ಭಾರತೀಯ ಬೌಲರ್‌ಗಳಿಗೆ ಸವಾಲೊಡ್ಡಿದರು. ಉಳಿದಂತೆ ವಾರ್ನರ್ ಮತ್ತೊಮ್ಮೆ ನಿರಾಸೆ ಅನುಭವಿಸಿದರೆ ಲ್ಯಾಬುಶೈನ್ ಆಟ 18 ರನ್‌ಗಳಿಗೆ ಅಂತ್ಯವಾಯಿತು. ಇನ್ನು ಸ್ಟೀವ್ ಸ್ಮಿತ್ ತಾವೆದುರಿಸಿದ ಎರಡನೇ ಎಸೆತದಲ್ಲಿಯೇ ಅಶ್ವಿನ್‌ಗೆ ಬಲಿಯಾದರು. ಬಳಿಕ ಹೆಡ್ ಕೂಡ 12 ರನ್‌ಗಳನ್ನು ಗಳಿಸಿ ಔಟಾದರು.

ಮಿಂಚಿದ ಖವಾಜ, ಹ್ಯಾಂಡ್ಸ್‌ಕಾಂಬ್
ಮೊದಲ ಪಂದ್ಯದಲ್ಲಿ ವಿಫಲವಾಗಿದ್ದ ಉಸ್ಮಾನ್ ಖವಾಜ ಈ ಪಂದ್ಯದಲ್ಲಿ 81 ರನ್‌ಗಳಿಸಿ ತಂಡಕ್ಕೆ ನೆರವಾದರು. ಇನ್ನು ಕೆಳ ಕ್ರಮಾಂಕದಲ್ಲಿ ಹ್ಯಾಂಡ್ಸ್‌ಕಾಂಬ್ ಅಜೇಯ 72 ರನ್‌ಗಳ ಕೊಡುಗೆ ನೀಡುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ನೆರವಾಗಿದ್ದಾರೆ. ಇನ್ನು ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ ಈ ಪಂದ್ಯದಲ್ಲಿ 33 ರನ್‌ಗಳ ಕೊಡುಗೆ ನೀಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಂಡ 78.4 ಓವರ್‌ಗಳಲ್ಲಿ 263 ರನ್‌ಗಳನ್ನು ಗಳಿಸಿ ಆಲೌಟ್ ಆಗಿದೆ.

ಭಾರತದ ಪರ ಶಮಿ ಅಬ್ಬರ
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ್ದು ವೇಗಿ ಮೊಹಮ್ಮದ್ ಶಮಿ. ಸ್ಪಿನ್ನರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿಯೂ ಶಮಿ ನೀಡಿದ ಪ್ರದರ್ಶನ ಅದ್ಭುತವಾಗಿತ್ತು. ಒಟ್ಟು ನಾಲ್ಕು ವಿಕೆಟ್ ಕಿತ್ತ ಶಮಿ ತಂಡದ ಯಶಸ್ವಿ ಬೌಲರ್ ಎನಿಸಿದ್ದಾರೆ. ಇನ್ನು ಭಾರತದ ಸ್ಪಿನ್ ಜೋಡಿಯಾದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದುಕೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡ ಮೊದಲ ದಿನದಲ್ಲಿಯೇ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಸೂರ್ಯಕುಮಾರ್ ಯಾದವ್, ಶುಬ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಉಮೇಶ್ ಯಾದವ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್
ಬೆಂಚ್: ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್, ಆಷ್ಟನ್ ಅಗರ್, ಲ್ಯಾನ್ಸ್ ಮೋರಿಸ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications