ಎರಡನೇ ಟೆಸ್ಟ್‌ಗೂ ಕೆಎಲ್ ರಾಹುಲ್ ಸ್ಥಾನ ಪಡೆಯದ್ದಕ್ಕೆ ಕ್ರಿಸ್ ಶ್ರೀಕಾಂತ್ ಅಚ್ಚರಿ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಕೆಎಲ್ ರಾಹುಲ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕೆಎಲ್ ರಾಹುಲ್ ಮೆಲ್ಬರ್ನ್ ಪಂದ್ಯದಲ್ಲಿ ಖಂಡಿತಾ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ತಂಡದ ಮ್ಯಾನೇಜ್‌ಮೆಂಟ್ ನಿರ್ಧಾರ ಹೀಗೆ ನಿರೀಕ್ಷಿಸಿದ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಮಾಜಿ ಕ್ರಿಕೆಟಿಗ ಶ್ರೀಕಾಂತ್ ಕೂಡ ಕೆಎಲ್ ರಾಹುಲ್ ಅಲಭ್ಯತೆಯ ಬಗ್ಗೆ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ.
ಕ್ರಿಸ್ ಶ್ರೀಕಾಂತ್ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ತೆಗೆದುಕೊಂಡ ಈ ನಿರ್ಧಾರದ ಬಗ್ಗೆ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಕ್ರಿಸ್ ಶ್ರೀಕಾಂತ್ ಕೆಎಲ್ ರಾಹುಲ್‌ಗೆ ಅವಕಾಶ ನೀಡದಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ಡ್ರಾಪ್ ಯಾಕೆ ಅರ್ಥವಾಗುತ್ತಿಲ್ಲ!
"ಬಾಕ್ಸಿಂಗ್ ಡೇ ಟೆಸ್ಟ್‌ಗೆ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡದಿರಲು ಕಾರಣ ಏನೆಂಬುದು ನನಗೆ ಅರ್ಥವಾಗುತ್ತಿಲ್ಲ" ಎಂದು ಕ್ರಿಸ್ ಶ್ರೀಕಾಂತ್ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ. ಇದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದು ರಾಹುಲ್ ಆಯ್ಕೆ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಎರಡನೇ ಟೆಸ್ಟ್‌ನಲ್ಲಿ ನಾಲ್ಕು ಬದಲಾವಣೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಘೋಷಿಸಿದೆ. ಇದರಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದ್ದು ಇಬ್ಬರು ಹೊಸ ಆಟಗಾರರಿಗೆ ಅವಕಾಶವನ್ನು ನೀಡಲಾಗಿದೆ. ಆದರೆ ಕೆಎಲ್ ರಾಹುಲ್ ಮಾತ್ರ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.

ಸೀಮಿತ ಓವರ್‌ಗಳಲ್ಲಿ ರಾಹುಲ್ ಅದ್ಭುತ ಫಾರ್ಮ್
ಕೆಎಲ್ ರಾಹುಲ್ ಸೀಮಿತ ಓವರ್‌ಗಳ ಸರಣಿಯಲ್ಲಿ ಅದ್ಭುತವಾದ ಫಾರ್ಮ್‌ನಲ್ಲಿದ್ದರು. ಆದರೆ ಟೆಸ್ಟ್‌ನಲ್ಲಿ ಸುದೀರ್ಘ ಕಾಲದಿಮದ ತಂಡದಲ್ಲಿ ಸ್ಥಾನವನ್ನು ಪಡೆಯುವಲ್ಲಿ ವಿಫಲರಾಗುದ್ದಾರೆ. ಈ ವರ್ಷಾರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ರಾಹುಲ್ ಆಯ್ಕೆಯಾಗಿರಲಿಲ್ಲ. ಆದರೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದಾರಾದರೂ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications