ಭಾರತ vs ಆಸ್ಟ್ರೇಲಿಯಾ: ಆಸ್ಟ್ರೇಲಿಯಾ ಟೆಸ್ಟ್ ತಂಡಕ್ಕೆ ಹ್ಯಾರಿಸ್ ಸೇರ್ಪಡೆ

ಸಿಡ್ನಿ: ಭಾರತದ ವಿರುದ್ಧದ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡದಲ್ಲಿ ಬದಲಾವಣೆಯಾಗಿದೆ. ವಿಕ್ಟೋರಿಯಾದ ಆರಂಭಿಕ ಬ್ಯಾಟ್ಸ್‌ಮನ್ ಮಾರ್ಕಸ್ ಹ್ಯಾರಿಸ್ ಅವರು ಟೆಸ್ಟ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅಡಿಲೇಡ್ ಓವಲ್ ಸ್ಟೇಡಿಯಂನಲ್ಲಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿರುವ ಮೊದಲ ಟೆಸ್ಟ್‌ನಲ್ಲಿ ಹ್ಯಾರಿಸ್ ಆಡಲಿದ್ದಾರೆ.
ಗಾಯಕ್ಕೀಡಾಗಿರುವ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಡೇವಿಡ್ ವಾರ್ನರ್ ಮತ್ತು ವಿಲ್ ಪುಕೊವ್ಸ್ಕಿ ಆರಂಭಿಕ ಟೆಸ್ಟ್ ತಂಡದಿಂದ ಹೊರ ಬಿದ್ದಿದ್ದಾರೆ. ಅವರ ಜಾಗಕ್ಕೆ ಹ್ಯಾರಿಸ್ ಬಂದಿದ್ದಾರೆ. ಭಾರತ ವಿರುದ್ಧದ ದ್ವಿತೀಯ ಏಕದಿನ ಪಂದ್ಯದ ವೇಳೆ ವಾರ್ನರ್ ಗಾಯಕ್ಕೀಡಾಗಿದ್ದರು. ಆಸ್ಟ್ರೇಲಿಯಾ 'ಎ' ಪರ ಭಾರತ 'ಎ' ವಿರುದ್ಧ ಅಭ್ಯಾಸ ಪಂದ್ಯದ ವೇಳೆ ಪುಕೊವ್ಸ್ಕಿ ತಲೆಗೆ ಚೆಂಡು ಬಡಿದು ಗಾಯವಾಗಿತ್ತು.
ಹ್ಯಾರಿಸ್ ಅವರು ಆಸ್ಟ್ರೇಲಿಯಾ ಪರ 9 ಟೆಸ್ಟ್ ಪಂದ್ಯಗಳನ್ನಾಡಿ 385 ರನ್ ಗಳಿಸಿದ್ದಾರೆ. 79 ಅತ್ಯಧಿಕ ರನ್ ದಾಖಲೆ ಹೊಂದಿದ್ದಾರೆ. ಇತ್ತೀಚೆಗೆ ಶೆಫೀಲ್ಡ್ ಶೀಲ್ಡ್ ಪ್ರಥಮದರ್ಜೆ ಟೂರ್ನಿಯಲ್ಲಿ ದಕ್ಷಿಣ ಆಸ್ಟ್ರೇಲಿಯಾ ವಿರುದ್ಧ 239 ರನ್ ಬಾರಿಸಿದ್ದರಿಂದ ಅವರಿಗೆ ಮತ್ತೆ ರಾಷ್ಟ್ರೀಯ ತಂಡಕ್ಕೆ ಕರೆ ನೀಡಲಾಗಿದೆ.
ಭಾರತ vs ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ನಾಲ್ಕು ಪಂದ್ಯಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಆರಂಭಿಕ ಟೆಸ್ಟ್ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಆಗಿರಲಿದೆ. ಮೊದಲ ಟೆಸ್ಟ್ ಮುಕ್ತಾಯದ ಬಳಿಕ ನಾಯಕ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ದ್ವಿತೀಯ ಟೆಸ್ಟ್ ವೇಳೆ ರೋಹಿತ್ ಶರ್ಮಾ ಭಾರತ ತಂಡ ಸೇರಿಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications