ಭಾರತ vs ಆಸ್ಟ್ರೇಲಿಯಾ ಟೆಸ್ಟ್: 4-0 ಅಂತರದಿಂದ ಆಸಿಸ್ ಸರಣಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಮಾರ್ಕ್ ವಾ

ಭಾರತ ಹಾಗೂ ಆಸ್ಟ್ರೇಲಿಯಾ ಕಾಂಗರೂಗಳ ನಾಡಿನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಪಂದ್ಯದ ಬಳಿಕ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್ ವಾ ಪ್ರತಿಕ್ರಿಯಿಸಿದ್ದು ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ಕ್ಲೀನ್ ಸ್ವೀಪ್ ಮಾಡಲಿದೆ ಎಂದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್‌ನಲ್ಲಿ ನಡೆದ ಡೇ ನೈಟ್ ಪಂದ್ಯ ಟೀಮ್ ಇಂಡಿಯಾಗೆ ಗೆಲ್ಲಲು ಇದ್ದ ಅತ್ಯುತ್ತಮ ಅವಕಾಶವಾಗಿತ್ತು. ಆದರೆ ಭಾರತ ತಂಡ ಆ ಅವಕಾಶವನ್ನು ಕೈಚೆಲ್ಲಿಕೊಂಡಿದೆ. ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಈಗ ತವರಿಗೆ ಮರಳುತ್ತಿದ್ದು ಇನ್ನು ಹಾದಿ ಮತ್ತಷ್ಟು ಕಠಿಣವಾಗಲಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಮಾರ್ಕ್ ವಾ ಹೇಳಿದ್ದಾರೆ.
"ಯಾವುದೇ ಭರವಸೆಯಿಲ್ಲ. ಲೆಕ್ಕಾಚಾರದಲ್ಲಿ ನೋಡುವಾಗ ವಿರಾಟ್ ಕೊಹ್ಲಿ ಭಾಗಿಯಾಗಿದ್ದ ಏಕೈಕ ಟೆಸ್ಟ್ ಅಡಿಲೇಡ್ ಪಂದ್ಯ ಭಾರತ ಗೆಲ್ಲಲು ಇದ್ದ ಉತ್ತಮ ಅವಕಾಶ ಎಂದು ನಾನು ಭಾವಿಸಿದ್ದೆ. ಭಾರತಕ್ಕೆ ಆ ಕಂಡೀಶನ್ ಸೂಕ್ತವಾಗಲಿದೆ ಎಂದು ಭಾವಿಸಿದ್ದೆ. ಆದರೆ ಈ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ ಬಳಿಕ ಬಾರತ ತಿರುಗೇಟು ನೀಡಲಿದೆ ಎಂದು ಹೇಗೆ ಹೇಳಲು ಸಾಧ್ಯ? ಹಾಗಾಗಿ ತಿರುಗೇಟು ನೀಡಲಿದೆಯಾ ಎಂಬುದಕ್ಕೆ 'ಇಲ್ಲ" ಎಂಬುದು ನನ್ನ ಉತ್ತರ. ಆಸ್ಟ್ರೇಲಿಯಾ 4-0 ಅಂತರದಿಂದ ಸರಣಿಯನ್ನು ಗೆಲ್ಲಲಿದೆ" ಎಂದು ಮಾರ್ಕ್ ವಾ ವಿಶ್ವಾಸದಿಂದ ಹೇಳಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಬ್ರಾಡ್ ಹ್ಯಾಡಿನ್ ಕೂಡ ಪ್ರತಿಕ್ರಿಯಿಸಿದ್ದು ವಿರಾಟ್ ಕೊಹ್ಲಿ ಅಲಭ್ಯತೆಯಲ್ಲಿ ಭಾರತೀಯ ತಂಡ ತನ್ನ ಸ್ಪೂರ್ತಿಯ ಮೂಲವನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಅವರು ಆಟವನ್ನು ವಾಪಾಸ್ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂಬುದಾದರೆ ಅದಕ್ಕೆ ಬೇಕಾದ ಶಕ್ತಿಯನ್ನು ಅವರು ಎಲ್ಲಿಂದ ಪಡೆಯಲಿದ್ದಾರೆ ಎಂಬುದನ್ನು ನಾನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಹ್ಯಾಡಿನ್ ಹೇಳಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಂಗಳವಾರ ಆಸ್ಟ್ರೇಲಿಯಾವನ್ನು ತೊರೆದಿದ್ದು ಸರಣಿಯಲ್ಲಿ ಉಳಿದಿರುವ ಮುಂದಿನ ಮೂರು ಪಂದ್ಯಗಳಿಗೆ ಅಜಿಂಕ್ಯ ರಹಾನೆ ನಾಯಕರಾಗಲಿದ್ದಾರೆ. ಸದ್ಯ ರೋಹಿತ್ ಶರ್ಮಾ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾಗೆ ತೆರಳಿದ್ದಾರಾದರೂ ಎರಡನೇ ಪಂದ್ಯಕ್ಕೆ ರೋಹಿತ್ ಸೇವೆ ಲಭ್ಯವಾಗುವುದಿಲ್ಲ. ಆದರೆ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications