ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾಕ್ಕೆ ಭಾರಿ ಆಘಾತ, ಮಿಚೆಲ್ ಸ್ಟಾರ್ಕ್ ಔಟ್!

ಪ್ರವಾಸಿ ಆಸ್ಟ್ರೇಲಿಯಾ ತಂಡ ಭಾರಿ ಆಘಾತ ಅನುಭವಿಸಿದೆ. ತಂಡದ ಪ್ರಮುಖ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಗಾಯಗೊಂಡಿದ್ದು, ಉಳಿದೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಸಿದ್ದಾರೆ.

By Mahesh

ಬೆಂಗಳೂರು, ಮಾರ್ಚ್ 10: ಪ್ರವಾಸಿ ಆಸ್ಟ್ರೇಲಿಯಾ ತಂಡ ಭಾರಿ ಆಘಾತ ಅನುಭವಿಸಿದೆ. ತಂಡದ ಪ್ರಮುಖ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಗಾಯಗೊಂಡಿದ್ದು, ಉಳಿದೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಸಿದ್ದಾರೆ. ಚಿಕಿತ್ಸೆಗಾಗಿ ಸ್ಟಾರ್ಕ್ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.

ಸ್ಟಾರ್ಕ್ ಅವರು ಪಾದಕ್ಕೆ ಗಾಯ ಮಾಡಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೆ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಶುಕ್ರವಾರದಂದು ಪ್ರಕಟಿಸಿದೆ.[ಕ್ರಿಕೆಟ್ ನಲ್ಲಿ ಅತ್ಯಂತ ವೇಗದ ಎಸೆತ ಹಾಕಿದ ಮಿಚೆಲ್ ಸ್ಟಾರ್ಕ್]

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸ್ಟಾರ್ಕ್ ಅವರು ಈಗಾಗಲೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 10) ರಿಂದ ಹೊರಗುಳಿದಿದ್ದಾರೆ. ಈ ಬಾರಿ ಆರ್ ಸಿಬಿ ತಂಡವನ್ನಷ್ಟೇ ಅಲ್ಲ ಐಪಿಎಲ್ ಟೂರ್ನಮೆಂಟ್ ತೊರೆದಿದ್ದಾರೆ. ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧರಾಗಬೇಕಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

India Vs Australia: Mitchell Starc ruled out of last 2 Tests


ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ 1-1ರಲ್ಲಿ ಸಮನಾಗಿದೆ. ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ಮಾರ್ಚ್ 16ರಂದು ಆರಂಭವಾಗಲಿದೆ.

ಮಿಚೆಲ್ ಸ್ಟಾರ್ಕ್ ಅವರು ಬೆಂಗಳೂರಿನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ವೇಳೆ ತಮ್ಮ ಬಲಪಾದಕ್ಕೆ ಗಾಯ ಮಾಡಿಕೊಂಡಿದ್ದು, ಗುಣಮುಖರಾಗದ ಕಾರಣ ಚಿಕಿತ್ಸೆಗಾಗಿ ಆಸ್ಟ್ರೇಲಿಯಾಕ್ಕೆ ತೆರಳುವುದು ಅನಿವಾರ್ಯವಾಗಿದೆ ಎಂದು ತಂಡದ ಫಿಜಿಯೋಥೆರಪಿಸ್ಟ್ ಡೇವಿಡ್ ಬೀಕ್ಲೆ ಹೇಳಿದ್ದಾರೆ. [ಐಪಿಎಲ್ 2017: ಆರ್ ಸಿಬಿ ಪಂದ್ಯಗಳ ಪೂರ್ಣ ವೇಳಾಪಟ್ಟಿ]

27 ವರ್ಷ ವಯಸ್ಸಿನ ಸ್ಟಾರ್ಕ್ ಅವರು ಪುಣೆಯಲ್ಲಿ 61 ರನ್ ಗಳಿಸಿದ್ದಲ್ಲದೆ ಕೊಹ್ಲಿಯನ್ನು ಡಕ್ ಔಟ್ ಮಾಡಿ ಪಂದ್ಯವನ್ನು ಗೆಲ್ಲಲು ನೆರವಾಗಿದ್ದರು.

ಆಲ್ ರೌಂಡರ್ ಮಿಚೆಲ್ ಮಾರ್ಷ್ ಅವರು ಭುಜದ ಸಮಸ್ಯೆಯಿಂದ ಹೊರಗುಳಿದಿದ್ದು, ಈಗ ಮಿಚೆಲ್ ಸ್ಟಾರ್ಕ್ ಕೂಡಾ ಅನಿವಾರ್ಯವಾಗಿ ತಂಡ ತೊರೆದಿದ್ದಾರೆ.

Story first published: Wednesday, January 3, 2018, 10:04 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X