For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: 5 ವಿಕೆಟ್ ಪಡೆದು ಮಿಂಚಿದ ಸಿರಾಜ್: 328 ರನ್‌ಗಳ ಗುರಿ ಪಡೆದ ಭಾರತ

India vs Australia, Mohammed siraj 5, India need 328 runs to win

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತೀಯ ಬೌಲರ್‌ಗಳು ಅದ್ಭುತ ದಾಳಿಯನ್ನು ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾವನ್ನು 294 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಹೀಗಾಗಿ ಅಂತಿಮ ಇನ್ನಿಂಗ್ಸ್‌ನಲ್ಲಿ ಭಾರತ ಗೆಲುವಿಗೆ 328 ರನ್‌ಗಳ ಗುರಿಯನ್ನು ಪಡೆದಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತೀಯ ಬೌಲರ್‌ಗಳ ಪೈಕಿ ಮೊಹಮ್ಮದ್ ಸಿರಾಜ್ ಶ್ರೇಷ್ಠವಾದ ಪ್ರದರ್ಶನ ನೀಡಿ ಮಿಂಚಿದ್ದಾರೆ. ಮಧ್ಯಮ ಕ್ರಮಾಂಕದ ಪ್ರಮುಖ ಮೂರು ವಿಕೆಟ್‌ಗಳು ಸೇರಿದಂತೆ ಒಟ್ಟು ಐದು ವಿಕೆಟ್‌ಗಳನ್ನು ಮೊಹಮ್ಮದ್ ಸಿರಾಜ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಥಮ ಬಾರಿಗೆ ಐದು ವಿಕೆಟ್‌ಗಳ ಗೊಂಚಲು ಪಡೆದಿದ್ದಾರೆ.

ಆಸ್ಟ್ರೇಲಿಯಾದ ಪ್ರತಿಭಾನ್ವಿತ ಯುವ ಆಟಗಾರ ಮಾರ್ನಾಸ್ ಲಾಬುಶೇನ್ ಅವರನ್ನು ಮೊದಲಿಗೆ ಬಲಿ ಪಡೆದ ಸಿರಾಜ್ ಬಳಿಕ ಮತ್ತೊಂದು ದೊಡ್ಡ ಇನ್ನಿಂಗ್ಸ್ ಕಟ್ಟುವ ನಿರೀಕ್ಷೆಯಲ್ಲಿದ್ದ 55 ರನ್ ಗಳಿಸಿದ್ದ ವೇಳೆ ಔಟ್ ಮಾಡುವಲ್ಲಿ ಯಶಸ್ವಿಯಾದರು. ಅದಾದ ಬಳಿಕ ಮ್ಯಾಥ್ಯೂ ವೇಡ್ ಕೂಡ ಕೀಪರ್ ಪಂತ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದ್ದರು.

ಬಳಿಕ ಕೆಳ ಕ್ರಮಾಂಕದಲ್ಲಿ ಸ್ಟಾರ್ಕ್ ಸಿರಾಜ್‌ಗೆ ವಿಕೆಟ್ ಒಪ್ಪಿಸಿದ ಬಳಿಕ ಕೊನೆಯದಾಗಿ ಹ್ಯಾಜಲ್‌ವುಡ್ ಕೂಡ ಸಿರಾಜ್‌ಗೆ ವಿಕೆಟ್ ಒಪ್ಪಸಿ ನಿರ್ಗಮಿಸಿದ್ದಾರೆ. ಈ ಮೂಲಕ ಮೊಹಮ್ಮದ್ ಸಿರಾಜ್ ತಮ್ಮ ಮೂರನೇ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಐದು ವಿಕೆಟ್‌ಗಳ ಗೊಂಚಲನ್ನು ಪಡೆಯುವಲ್ಲಿ ಯಶ್ವಸ್ವಿಯಾಗಿದ್ದಾರೆ.

ಮತ್ತೊಂದೆಡೆ ಇನ್ನೋರ್ವ ಆಟಗಾರ ಶಾರ್ದೂಲ್ ಠಾಕೂರ್ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ನಲ್ಲಿಯೂ ಮಿಂಚಿದ್ದಾರೆ. ಶಾರ್ದೂಲ್ ಆಸ್ಟ್ರೇಲಿಯಾದ ನಾಲ್ಕು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬ್ರಿಸ್ಬೇನ್ ಟೆಸ್ಟ್‌ಅನ್ನು ತಮ್ಮ ಪಾಲಿಗೆ ಸ್ಮರಣೀಯವಾಗಿಸಿದ್ದಾರೆ.

Story first published: Monday, January 18, 2021, 12:29 [IST]
Other articles published on Jan 18, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+