ಭಾರತ vs ಆಸ್ಟ್ರೇಲಿಯಾ: ಮೊದಲ ಏಕದಿನ ಪಂದ್ಯಕ್ಕೆ ಇದೆಯಾ ಮಳೆಯ ಆತಂಕ
ಶುಕ್ರವಾರದಿಂದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಎರಡು ತಮಡಗಳು ಕೂಡ ವಿರ್ಶವಕಪ್ ಗೆಲ್ಲುವ ನೆಚ್ಚಿನ ತಂಡಗಳಾಗಿರುವ ಕಾರಣ ಅದಕ್ಕೂ ಮುನ್ನ ನಡೆಯುವ ಈ ಸರಣಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಮೊದಲ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್‌ನಲ್ಲಿ ಆಯೋಜನೆಯಾಗಲಿದ್ದು ಎರಡು ತಂಡಗಳು ಕೂಡ ಪೈಪೋಟಿಯ ಪ್ರದರ್ಶನ ನೀಡುವ ನಿರೀಕ್ಷೆಯಿದೆ.
ಎರಡು ಬಲಿಷ್ಠ ತಂಡಗಳ ನಡುವಿನ ಈ ಸೆಣೆಸಾಟ ಸಹಜವಾಗಿಯೇ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯಾವ ತಂಡ ಈ ಮುಖಾಮುಖಿಯಲ್ಲಿ ಮೇಲುಗೈ ಸಾಧಿಸಲಿದೆ. ಈ ಮೂಲಕ ವಿಶ್ವಕಪ್ ಟೂರ್ನಿಗೆ ಆತ್ಮವಿಶ್ವಾಸದಿಂದ ಯಾರು ಹೆಜ್ಜೆಯಿಡಬಹುದು ಎನ್ನುವುದು ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆ.

ಆದರೆ ಶುಕ್ರವಾರ ನಡೆಯಲಿರುವ ಈ ಕುತೂಹಲಕಾರಿ ಮುಖಾಮುಖಿಗೆ ಹವಮಾನದ ಬೆಂಬಲ ಹೇಗಿದೆ ಎನ್ನುವುದು ಕೂಡ ಪ್ರಶ್ನೆಯಾಗಿದೆ. ಈ ಪಂದ್ಯಕ್ಕೆ ಮಳೆಯ ಆತಂಕವಿದೆಯಾ? ಹಾಗಾದರೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂದೆ ಓದಿ..
ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಮಳೆ
ಇನ್ನು ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಯಾವುದೇ ಆತಂಕವಿಲ್ಲ. ಹೀಗಾಗಿ ಸಂಪೂರ್ಣ ಪಂದ್ಯವನ್ನು ಅಭಿಮಾನಿಗಳು ಆಸ್ವಾದಿಸುವ ಅವಕಾಶ ದೊರೆಯಲಿದೆ. ದಿನವಿಡೀ ಪಂದ್ಯಕ್ಕೆ ಪೂರಕವಾದ ವಾತಾವರಣವೇ ಇರಲಿದೆ. ಪಂದ್ಯದ ಅವಧಿಯುದ್ದಕ್ಕೂ ಸುಮಾರು 30 ಡಿಗ್ರಿ ಸೆಲ್ಸಿಯಸ್‌ನಷ್ಟು ಆಸುಪಾಸಿನಲ್ಲಿಯೇ ಇರುವ ಸಾಧ್ಯತೆಯಿದೆ. ಹೀಗಾಗಿ ಪಂದ್ಯ ಮಳೆಯ ಆತಂಕವಿಲ್ಲದೆ ನಿರಾತಂಕವಾಗಿ ನಡಯುವ ನಿರೀಕ್ಷೆಯಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 21 ಶುಕ್ರವಾರದಂದು ಆಯೋಜನೆಯಾಗಲಿದೆ. ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಗೊಳ್ಳುತ್ತಿದೆ. ಸ್ಪೋರ್ಟ್ಸ್ 18 ವಾಹಿನಿಯಲ್ಲಿ ಈ ಪಂದ್ಯವನ್ನು ನೇರವಾಗಿ ವೀಕ್ಷಿಸುವ ಅವಕಾಶವಿದ್ದು ಜಿಯೋ ಸಿನಿಮಾದಲ್ಲಿಯೂ ಪಂದ್ಯವನ್ನು ಲೈವ್ ಸ್ಟ್ರೀಮಿಂಗ್ ಮೂಲಕ ಆನಂದಿಸಬಹುದಾಗಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಈ ಪಂದ್ಯ ಮೊಹಾಲಿಯಲ್ಲಿ ಆಯೋಜನೆಯಾಗುತ್ತಿದೆ. ಈ ಕ್ರೀಡಾಂಗಣ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಬ್ಯಾಟರ್‌ಗಳಿಗೆ ನೆರವು ನೀಡುವ ಸಾಧ್ಯತೆ ಹೆಚ್ಚಿದೆ. ಕಳೆದ ಐದು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 253 ಆಗಿದೆ. ಇಲ್ಲಿ ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ನಡೆಸುವ ಸಾಧ್ಯತೆಯಿದೆ. ಕಳೆದ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ರನ್ ಬೆನ್ನಟ್ಟಿದ ತಂಡಗಳು ಇಲ್ಲಿ ಗೆಲುವು ಸಾಧಿಸಿದೆ.
ಸಂಭಾವ್ಯ ಆಡುವ ಬಳಗ
ಭಾರತ: ಶುಬ್ಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ನಾಯಕ), ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications