ಭಾರತ vs ಆಸ್ಟ್ರೇಲಿಯಾ ರೋಚಕ ಮುಖಾಮುಖಿ: ಮೊದಲ ಪಂದ್ಯಕ್ಕೆ ಕ್ಷಣಗಣನೆ, ಪಂದ್ಯದ ಸಂಪೂರ್ಣ ಮಾಹಿತಿ
ವಿಶ್ವಕಪ್ ಸನಿಹದಲ್ಲಿರುವಾಗ ಸಿದ್ಧತೆಯ ಭಾಗವಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಟೂರ್ನಿಗಾಗಿ ತಂಡದ ಸಂಯೋಜನೆಯನ್ನು ಸರಿಪಡಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಿದೆ. ಹೀಗಾಗಿ ಈ ಸರಣಿಯ ಮೇಲೆ ಈಗ ಎಲ್ಲರ ಕುತೂಹಲ ನೆಟ್ಟಿದೆ.
ಈ ಸರಣಿಯ ಮೂಲಕ ಆಸ್ಟ್ರೇಲಿಯಾ ತಂಡ ಭಾರತದಲ್ಲಿ ಈ ವರ್ಷ ಎರಡನೇ ಬಾರಿಗೆ ಏಕದಿನ ಸರಣಿಯಲ್ಲಿ ಮುಖಾಮುಖಿಯಾದಂತಾಗಿದೆ. ಇದಕ್ಕೂ ಮುನ್ನ ನಡೆದ ಸರಣಿಯಲ್ಲಿ ಆಸ್ಟ್ರೇಲಿಯಾ ಭಾರತವನ್ನು 2-1 ಅಂತರದಿಂದ ಮಣಿಸಿತ್ತು. ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಭಾರತವನ್ನು ಮಣಿಸಿರುವುದು ಗಮನಾರ್ಹ ಅಂಶ. ಆದರೆ ಈ ಸರಣಿಗೆ ಆಸ್ಟ್ರೇಲಿಯಾ ತಂಡ ಸಾಕಷ್ಟು ಏರಿಳಿತಗಳೊಂದಿಗೆ ಕಣಕ್ಕಿಳಿಯುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2-3 ಅಂತರದಿಂದ ಸರಣಿಯನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿತ್ತು.

ಪಂದ್ಯದ ಸಮಯ, ನೇರ ಪ್ರಸಾರದ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 21 ಶುಕ್ರವಾರದಂದು ಆಯೋಜನೆಯಾಗಲಿದೆ. ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಗೊಳ್ಳುತ್ತಿದೆ. ಸ್ಪೋರ್ಟ್ಸ್ 18 ವಾಹಿನಿಯಲ್ಲಿ ಈ ಪಂದ್ಯವನ್ನು ನೇರವಾಗಿ ವೀಕ್ಷಿಸುವ ಅವಕಾಶವಿದ್ದು ಜಿಯೋ ಸಿನಿಮಾದಲ್ಲಿಯೂ ಪಂದ್ಯವನ್ನು ಲೈವ್ ಸ್ಟ್ರೀಮಿಂಗ್ ಮೂಲಕ ಆನಂದಿಸಬಹುದಾಗಿದೆ.
ಭಾರತ vs ಆಸ್ಟ್ರೇಲಿಯಾ ಪಿಚ್ ರಿಪೋರ್ಟ್
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಈ ಪಂದ್ಯ ಮೊಹಾಲಿಯಲ್ಲಿ ಆಯೋಜನೆಯಾಗುತ್ತಿದೆ. ಈ ಕ್ರೀಡಾಂಗಣ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಬ್ಯಾಟರ್‌ಗಳಿಗೆ ನೆರವು ನೀಡುವ ಸಾಧ್ಯತೆ ಹೆಚ್ಚಿದೆ. ಕಳೆದ ಐದು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 253 ಆಗಿದೆ. ಇಲ್ಲಿ ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ನಡೆಸುವ ಸಾಧ್ಯತೆಯಿದೆ. ಕಳೆದ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ರನ್ ಬೆನ್ನಟ್ಟಿದ ತಂಡಗಳು ಇಲ್ಲಿ ಗೆಲುವು ಸಾಧಿಸಿದೆ.
ಸಂಭಾವ್ಯ ಆಡುವ ಬಳಗ
ಭಾರತ: ಶುಬ್ಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ಸಿ), ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ (ವಿಸಿ), ಶಾರ್ದೂಲ್ ಠಾಕೂರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (WK), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ (ಸಿ), ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications