ಭಾರತ vs ಆಸ್ಟ್ರೇಲಿಯಾ: ಕೊನೆಯ ಪಂದ್ಯದಲ್ಲಿ ಭಾರೀ ಬದಲಾವಣೆ?: ಪಂದ್ಯದ ಸಂಪೂರ್ಣ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯ ಬುಧವಾರ ನಡೆಯಲಿದೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಹಾಗೂ ಮೊಹಾಲಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಗೆಲುವು ಸಾಧಿಸಿದ್ದು ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಗೆದ್ದು ವೈಟ್‌ವಾಶ್ ಮಾಡುವ ಲೆಕ್ಕಾಚಾರದಲ್ಲಿ ಭಾರತ ತಂಡವಿದ್ದರೆ ವಿಶ್ವಕಪ್‌ಗೂ ಮುನ್ನ ಈ ಅಚಮಾನದಿಂದ ತಪ್ಪಿಸಿಕೊಳ್ಳುವ ಸರ್ವ ಪ್ರಯತ್ನವನ್ನು ಆಸಿಸ್ ಪಡೆ ನಡೆಸಲಿದೆ.
ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಟೀಮ್ ಇಂಡಿಯಾದ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಅಮೋಘ ಪ್ರದರ್ಶನ ನೀಡಿದೆ. ತಂಡದ ಎಲ್ಲಾ ಆಟಗಾರರು ಕೂಡ ಅದ್ಭುತ ಲಯದಲ್ಲಿರುವುದು ಸ್ಪಷ್ಟವಾಗಿದೆ. ಇನ್ನು ಸರಣಿಯ ಮೊದಲ ಎರಡು ಪಂದ್ಯಗಳಿಗೆ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಹಾಗೂ ಕುಲ್‌ದೀಪ್ ಯಾದವ್ ತಂಡಕ್ಕೆ ಮರಳಿದ್ದು ಕೊನೆಯ ಪಂದ್ಯದ ಆಡುವ ಬಳಗದಲ್ಲಿ ಭಾರೀ ಬದಲಾವಣೆಗಳಾಗುವ ಸಾಧ್ಯತೆಯಿದೆ.

ಸತತ 5ನೇ ಸೋಲು ಅನುಭವಿಸಿದ ಆಸ್ಟ್ರೇಲಿಯಾ
ಇನ್ನು ಈ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧದ ಎರಡನೇ ಪಂದ್ಯದಲ್ಲಿಯೂ ಸೋಲು ಅನುಭವಿಸುವ ಮೂಲಕ ಏಕದಿನ ಮಾದರಿಯಲ್ಲಿ ಸತತ ಐದನೇ ಸೋಲು ಅನುಭವಿಸಿದಂತಾಗಿದೆ. ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಪ್ರವಾಸ ಕೈಗೊಂಡಿದ್ದ ಆಸಿಸ್ ಪಡೆ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಿತ್ತು. ಆ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಗೆದ್ದು ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯಾ ಅಂತಿಮ ಮೂರು ಪಂದ್ಯಗಳಲ್ಲಿ ಆಘಾತಕಾರಿಯಾಗಿ ಸೋತು ಸರಣಿಯನ್ನು ಕಳೆದುಕೊಂಡಿತು. ಇದೀಗ ಭಾರತದ ವಿರುದ್ಧದ ಸರಣಿಯಲ್ಲಿಯೂ ಮೊದಲ ಎರಡು ಪಂದ್ಯಗಳಲ್ಲಿ ಆಸಿಸ್ ಸೋಲು ಅನುಭವಿಸಿ ಸಂಕಷ್ಟದಲ್ಲಿದೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಪಂದ್ಯದ ಸಮಯ, ನೇರ ಪ್ರಸಾರದ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯ ಸೆಪ್ಟೆಂಬರ್ 27 ಬುಧವಾರದಂದು ಆಯೋಜನೆಯಾಗಲಿದೆ. ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಗೊಳ್ಳುತ್ತಿದೆ. ಸ್ಪೋರ್ಟ್ಸ್ 18 ವಾಹಿನಿಯಲ್ಲಿ ಈ ಪಂದ್ಯವನ್ನು ನೇರವಾಗಿ ವೀಕ್ಷಿಸುವ ಅವಕಾಶವಿದ್ದು ಜಿಯೋ ಸಿನಿಮಾದಲ್ಲಿಯೂ ಪಂದ್ಯವನ್ನು ಲೈವ್ ಸ್ಟ್ರೀಮಿಂಗ್ ಮೂಲಕ ಆನಂದಿಸಬಹುದಾಗಿದೆ
ಪಿಚ್ ರಿಪೋರ್ಟ್ ಹೀಗಿದೆ
ಇನ್ನು ಈ ಮೈದಾನದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸುವ ತಂಡಕ್ಕೆ ಹೆಚ್ಚಿನ ಅನುಕೂಲತೆಗಳಿದೆ. ಈವರೆಗೆ ಇಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿಯೂ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಗೆಲುವು ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡದ ಸರಾಸರಿ ಸ್ಕೋರ್ 311 ರನ್. ಆಸ್ಟ್ರೇಲಿಯಾ ವಿರುದ್ಧವೇ ಇಲ್ಲಿ ಭಾರತ 340 ರನ್‌ಗಳಿಸಿರುವುದು ಇಲ್ಲಿನ ಅತಿ ಹೆಚ್ಚಿನ ಸ್ಕೋರ್ ಆಗಿದೆ. ಹೀಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿಯೂ ರನ್ ಮಳೆಯಾಗುವ ನಿರೀಕ್ಷೆಯಿದೆ.
ಸಂಭಾವ್ಯ ಆಡುವ ಬಳಗ:
ಭಾರತ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ / ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಕ್ಯಾಮೆರೂನ್ ಗ್ರೀನ್ / ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯ್ನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್ / ಶಾನ್ ಅಬಾಟ್, ಜೋಶ್ ಹ್ಯಾಜಲ್ವುಡ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications