Ind vs Aus: ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಆಸಿಸ್ ಮುಖಾಮುಖಿ: ಟಾಸ್ ರಿಪೋರ್ಟ್, Live ಸ್ಕೋರ್
ವಿಶ್ವಕಪ್‌ಗೆ ಮುನ್ನ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಕೊನೆಯ ದ್ವಿಪಕ್ಷೀಯ ಸರಣಿಯ ಅಂತಿಮ ಪಂದ್ಯ ಇಂದು ರಾಜ್‌ಕೋಟ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದುಕೊಂಡಿರುವ ಆಸ್ಟ್ರೇಲಿಯಾ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಆತಿಥೇಯ ಟೀಮ್ ಇಂಡಿಯಾ ತಂಡ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಟೀಮ್ ಇಂಡಿಯಾ ಈ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಈಗಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ವೈಟ್‌ವಾಶ್ ಮೇಲೆ ಟೀಮ್ ಇಂಡಿಯಾ ತನ್ನ ಚಿತ್ತ ನೆಟ್ಟಿದೆ. ಆದರೆ ಇತ್ತ ಆಸ್ಟ್ರೇಲಿಯಾ ತಂಡ ಸತತವಾಗಿ ಸೋಲು ಅನುಭಸುತ್ತಿದ್ದು ಸೋಲಿನ ಸರಪಳಿಯನ್ನು ಮುರಿದುಕೊಳ್ಳಲು ಸರ್ವ ಪ್ರಯತ್ನ ನಡೆಸಲಿದೆ.

Live ಸ್ಕೋರ್ ಹೀಗಿದೆ
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಎರಡು ತಂಡಗಳು ಕೂಡ ಸಾಕಷ್ಟು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಆಸ್ಟ್ರೇಲಿಯಾ ತಮಡ ಐದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು ಪ್ಯಾಟ್ ಕಮ್ಮಿನ್ಸ್ ತಂಡಕ್ಕೆ ಮರಳಿದ್ದು ಮುನ್ನಡೆಸುತ್ತಿದ್ದಾರೆ. ಜೊತೆಗೆ ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಆಡುವ ಬಳಗಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಆಡಂ ಜಂಪಾ ಬದಲಿಗೆ ತನ್ವೀರ್ ಸಂಘ ಈ ಪಂದ್ಯದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಇನ್ನು ಟೀಮ್ ಇಂಡಿಯಾ ಬಳಗದಲ್ಲಿಯೂ ದೊಡ್ಡ ಬದಲಾವಣೆಗಳಾಗಿದ್ದು ನಾಯಕನಾಗಿ ರೋಹಿತ್ ಶರ್ಮಾ ಮರಳುವ ಜೊತೆಗೆ ವಿರಾಟ್ ಕೊಹ್ಲಿ ಹಾಗೂ ಕುಲ್‌ದೀಪ್ ಯಾದವ್ ಕೂಡ ಆಡುವ ಬಳಗದಲ್ಲಿದ್ದಾರೆ. ಆರ್ ಅಶ್ವಿನ್ ಬದಲಗೆ ವಾಶಿಂಗ್ಟನ್ ಸುಂದರ್‌ಗೆ ಅವಕಾಶ ನೀಡಲಾಗಿದ್ದು ಇಶಾನ್ ಕಿಶನ್ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಬೆಂಚ್: ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ತನ್ವೀರ್ ಸಂಘ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಸೀನ್ ಅಬ್ಬೋಟ್, ಆಡಮ್ ಝಂಪಾ, ಮಾರ್ಕಸ್ ಸ್ಟೋನಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications