India vs Australia: ಭಾರತ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಕಮ್ಮಿನ್ಸ್, ಮ್ಯಾಕ್ಸಿ ವಾಪಸ್!
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಕಿರು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ.
ಇದೀಗ ಆತಿಥೇಯ ಭಾರತ ವಿರುದ್ಧ ನಡೆಯುವ ಮೂರು ಪಂದ್ಯಗಳ ಏಕದಿನ ಸರಣಿಗಾಗಿ 18 ಸದಸ್ಯರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಭಾನುವಾರ, ಸೆಪ್ಟೆಂಬರ್ 17ರಂದು ಪ್ರಕಟಿಸಿದೆ.
ಭಾರತ ತಂಡವನ್ನು ಅದರದೇ ನೆಲದಲ್ಲಿ ಎದುರಿಸಲು ಆಸ್ಟ್ರೇಲಿಯಾ ತಂಡ ಸಜ್ಜಾಗಿದ್ದು, ಅನೇಕ ಗಾಯಗೊಂಡ ಆಟಗಾರರು ತಂಡಕ್ಕೆ ಮರಳಿದರು. ಅದರಲ್ಲೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ತಪ್ಪಿಸಿಕೊಂಡಿದ್ದ ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಭಾರತ ವಿರುದ್ಧದ ಸರಣಿಗೆ ವಾಪಸ್ಸಾಗಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯ ಸೆಪ್ಟೆಂಬರ್ 22ರಂದು ನಡೆಯಲಿದ್ದರೆ, ಉಳಿದೆರಡು ಪಂದ್ಯಗಳು ಕ್ರಮವಾಗಿ ಸೆಪ್ಟೆಂಬರ್ 24 ಮತ್ತು 27ರಂದು ನಡೆಯಲಿದೆ. ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನ ಮೈದಾನಗಳು ತಲಾ ಒಂದೊಂದು ಪಂದ್ಯಗಳನ್ನು ಆಯೋಜಿಸಲಿವೆ.
ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಆಡಮ್ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications