IND vs AUS ODI: ಕಾಂಗರೂ ಬೇಟೆಗೆ ಟೀಮ್ ಇಂಡಿಯಾ ಸಿದ್ಧ: ಗಿಲ್ ಪಡೆಯುತ್ತಾರಾ "ಶುಭ" ಆರಂಭ
ಬಹುನಿರೀಕ್ಷಿತ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಏಕದಿನ ಪಂದ್ಯಗಳ ಸರಣಿ ಭಾನುವಾರದಿಂದ (ಅ.19) ಆರಂಭವಾಗಲಿದೆ. ಈ ಏಕದಿನ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಈ ಸರಣಿಗಾಗಿ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಸರಣಿಯನ್ನು ಗೆಲ್ಲುವ ಮೂಲಕ ತಮ್ಮ ನಾಯಕತ್ವವನ್ನು ಶುಭಾರಂಭ ಗೊಳಿಸಿಕೊಳ್ಳುವ ಆಸೆಯನ್ನು ಶುಭಮನ್ ಗಿಲ್ ಹೊಂದಿದ್ದಾರೆ. ಅನುಭವಿ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತೆ ತಂಡಕ್ಕೆ ಕಂ ಬ್ಯಾಕ್ ಮಾಡಿದ್ದಾರೆ. ಹೀಗಾಗಿ ತಂಡದಲ್ಲಿ ನವ ಉತ್ಸಾಹ ತುಂಬಿದೆ.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಆಸ್ಟ್ರೇಲಿಯಾ ಬಲಿಷ್ಠವಾಗಿದೆ. ಆದರೆ ಸದ್ಯದ ಟೀಮ್ ಇಂಡಿಯಾದ ಪ್ರದರ್ಶನ ಎದುರಾಳಿಗಳಿಗೆ ನಡುಕ ಹುಟ್ಟಿಸಿದಂತೂ ಸುಳ್ಳು ಅಲ್ಲವೇ ಅಲ್ಲ. ಪರ್ತ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿ, ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಭಾರತ ತಂಡದ್ದಾಗಿದೆ. ಈ ಸರಣಿಯ ಮೂಲಕ ಅನುಭವಿ ಬ್ಯಾಟರ್ ಆಗಿ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ.

ಟೀಮ್ ಇಂಡಿಯಾ ಆಟಗಾರರಿಗೆ ಪರ್ತ್‌ನಲ್ಲಿ ಆಡಿದ ಅನುಭವ ಇದೆ. ಹೀಗಾಗಿ ಈ ಪಿಚ್ ಮರ್ಮ ಅರಿತು ಆಡಲಿದ್ದಾರೆ. ಇನ್ನು ಈ ಸರಣಿಯ ಮೊದಲ ಪಂದ್ಯದಲ್ಲಿ ಶುಭಮನ್ ಗಿಲ್ ಅವರೊಂದಿಗೆ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. ಈ ವೇಳೆ ರೋಹಿತ್ ಹಲವು ದಾಖಲೆಗಳನ್ನು ಬರೆಯುವ ಕನಸು ಕಾಣುತ್ತಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಿದ್ದು, ಇವರ ಮೇಲೆ ಭರವಸೆ ಹೆಚ್ಚಿದೆ.
ಶ್ರೇಯಸ್ ಅಯ್ಯರ್ ಬಲ
ಮಧ್ಯಮ ಕ್ರಮಾಂಕದಲ್ಲಿ ಉಪನಾಯಕ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದು, ಭರವಸೆ ಹೆಚ್ಚಿದ್ದಾರೆ. ಇವರು ಸಹ 7 ತಿಂಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುತ್ತಿದ್ದು ಎಲ್ಲರ ಚಿತ್ತ ಕದ್ದಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಕೆಎಲ್ ರಾಹುಲ್ ಅಂಗಳಕ್ಕೆ ಇಳಿಯುವುದು ಪಕ್ಕಾ ಎನ್ನಲಾಗಿದೆ. ಇನ್ನು ಆಲ್‌ರೌಂಡರ್ ರೂಪದಲ್ಲಿ ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್ ಕಾಣಿಸಿಕೊಳ್ಳಲಿದ್ದಾರೆ.

ಪ್ರಸಿದ್ಧ್‌ಗೆ ಅವಕಾಶ ಸಾಧ್ಯತೆ
ಟೀಮ್ ಇಂಡಿಯಾದ ಭರವಸೆಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ಜವಾಬ್ದಾರಿಯನ್ನು ಮೊಹಮ್ಮದ್ ಸಿರಾಜ್ ಮುನ್ನಡೆಸಲಿದ್ದಾರೆ. ಇವರೊಂದಿಗೆ ಪ್ರಸಿದ್ಧ್ ಕೃಷ್ಣಾ ಕಾಣಿಸಿಕೊಳ್ಳಬಹುದು. ಇನ್ನು ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ಮೋಡಿ ಮಾಡಿರುವ ಅರ್ಷದೀಪ್ ಸಿಂಗ್ ಏಕದಿನ ಫಾರ್ಮೆಟ್‌ನಲ್ಲಿ ಕಾಣಿಸಿಕೊಳ್ಳಬಹುದಾಗಿದೆ.
ಟೀಮ್ ಇಂಡಿಯಾ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾವನ್ನು ತವರಿನಲ್ಲಿ ಹಣಿಯುವುದು ಕಷ್ಟದ ಕೆಲಸವಾಗಿದೆ. ಆದರೆ ಸದ್ಯದ ಭಾರತ ತಂಡ ಬಲಿಷ್ಠವಾಗಿದೆ. ಈ ಸರಣಿಗೆ ಆಸೀಸ್ ಸಹ ಸ್ಟಾರ್ ಆಟಗಾರರ ತಂಡವನ್ನು ಘೋಷಿಸಿದೆ. ಮಿಚೆಲ್ ಮಾರ್ಷ್ ತಂಡ ಮುನ್ನಡೆಸಲಿದ್ದು, ವೇಗದ ಬೌಲರ್‌ಗಳು ಟೀಮ್ ಇಂಡಿಯಾದ ಬ್ಯಾಟರ್‌ಗಳಿಗೆ ಕಾಟ ನೀಡಬಲ್ಲರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications