ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಎರಡು ತಂಡಗಳು ಕೂಡ ಕಣಕ್ಕಿಳಿದು ಕಾದಾಟ ನಡೆಸುತ್ತಿದೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ಸುದೀರ್ಘ 18 ತಿಂಗಳುಗಳಿಗೂ ಅಧಿಕ ಸಮಯದ ಬಳಿಕ ಭಾರತ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿಶ್ವಕಪ್‌ಗೆ ಮುನ್ನ ನಡೆಯುವ ಭಾರತದ ಕೊನೆಯ ಏಕದಿನ ಸರಣಿಯಾದ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆರ್ ಅಶ್ವಿನ್ ಅವರನ್ನು ಸೇರ್ಪಡೆಗೊಳಿಸಲಾಗಿತ್ತು. ಇದಕ್ಕೂ ಮುನ್ನ ಆರ್ ಅಶ್ವಿನ್ ಟೀಮ್ ಇಂಡಿಯಾದ ಏಕದಿನ ತಂಡದಲ್ಲಿ ಕೊನೆಯ ಬಾರಿಗೆ 2022ರ ಜನವರಿಯಲ್ಲಿ ಕಣಕ್ಕಿಳಿದಿದ್ದರು.

ವಿಶ್ವಕಪ್ ಟೂರ್ನಿಗಾಗಿ ಈಗಾಗಲೇ ಬಿಸಿಸಿಐ ಪ್ರಕಟಿಸಿರುವ ಭಾರತದ ಆರಂಭಿಕ 15 ಸದಸ್ಯರ ತಂಡದಲ್ಲಿ ಆರ್ ಅಶ್ವಿನ್ ಸ್ಥಾನವನ್ನು ಪಡೆದುಕೊಂಡಿಲ್ಲ. ಆದರೆ ಅಶ್ವಿನ್‌ಗೆ ಕೊನೆಯ ಕ್ಷಣದಲ್ಲಿ ವಿರ್ಶವಕಪ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳುವ ಸಾಧ್ಯತೆ ಯಿದೆ. ಏಷ್ಯಾಕಪ್‌ನಲ್ಲಿ ಭಾಗವಹಿಸದ ಕಾರಣ ಅಶ್ವಿನ್ ಅವರಿಗೆ ಈ ತಂಡದಲ್ಲಿ ಅವಕಾಶ ದೊರೆತಿರುವುದು ಮಹತ್ವ ಪಡೆದುಕೊಂಡಿದೆ.
ಇನ್ನು 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಕೊನೆಯ ಎರಡು ಪಂದ್ಯಗಳು ಐದು ವರ್ಷಗಳ ನಂತರ ಅವರಿಗೆ ಏಕದಿನ ತಂಡದಲ್ಲಿ ದೊರೆತಿದ್ದ ಅವಕಾಶವಾಗಿತ್ತು. ಅದಕ್ಕೂ ಮುನ್ನ ಐದು ವರ್ಷಗಳ ಹಿಂದೆ 2017ರಲ್ಲಿ ಏಕದಿನ ಪಂದ್ಯವನ್ನು ಆಡಿದ ಬಳಿಕ ತಂಡದಿಂದ ಹೊರಬಿದ್ದಿದ್ದರು.
ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ರವಾಸಿ ಆಸ್ಟ್ರೇಲಿಯಾ ಆರಂಬದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ
ಬೆಂಚ್: ತಿಲಕ್ ವರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಡಮ್ ಝಂಪಾ
ಬೆಂಚ್: ಅಲೆಕ್ಸ್ ಕ್ಯಾರಿ, ಜೋಶ್ ಹ್ಯಾಜಲ್ವುಡ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ತನ್ವೀರ್ ಸಂಘ