Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸಿಡ್ನಿ ಟೆಸ್ಟ್ ಪಂದ್ಯಕ್ಕೆ ರವಿಚಂದ್ರನ್ ಅಶ್ವಿನ್ ಅಲಭ್ಯ

India vs Australia : R Ashwin ruled out of SCG Test

ಸಿಡ್ನಿ, ಜನವರಿ 02: ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ಮೇಲುಗೈ ಸಾಧಿಸಿದೆ. ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಕೊಹ್ಲಿ ಪಡೆ 2-1 ರಿಂದ ಮುನ್ನಡೆ ಪಡೆದುಕೊಂಡಿದೆ.

ಅಂತಿಮ ಟೆಸ್ಟ್ ಪಂದ್ಯವು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.ಈ ಪಂದ್ಯಕ್ಕೆ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಲಭ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅಶ್ವಿನ್ ಅವರು ನಾಲ್ಕನೇ ಪಂದ್ಯಕ್ಕಾಗಿ ನೆಟ್ ಅಭ್ಯಾಸದಲ್ಲಿ ತೊಡಗಿದ್ದರು.


ಆದರೆ, ಬುಧವಾರ ಬೆಳಗ್ಗೆ ಬಂದಿರುವ ಮಾಹಿತಿಯಂತೆ, ಅಶ್ವಿನ್ ಅವರು ಆಡುವ ಹನ್ನೊಂದರ ಬಳಗದಿಂದ ಹೊರಗುಳಿಯಲಿದ್ದಾರೆ. ಫಿಟ್ನೆಸ್ ಟೆಸ್ಟ್ ನಲ್ಲಿ ಫೇಲ್ ಆಗಿರುವ ಅಶ್ವಿನ್ ಅವರನ್ನು ಆಡುವ XI ರಲ್ಲಿ ಸೇರಿಸಿಕೊಳ್ಳುವ ಬಗ್ಗೆ ನಾಳೆ ಬೆಳಗ್ಗೆ ಪಂದ್ಯಕ್ಕೂ ಮುನ್ನ ತೀರ್ಮಾನಿಸುವುದಾಗಿ ಬಿಸಿಸಿಐ ಹೇಳಿದೆ.

ಏಷ್ಯಾಕಪ್ ಟೂರ್ನಿ ವೇಳೆ ಗಾಯಾಳಾಗಿ ಭಾರತ ತಂಡದಿಂದ ಹೊರ ಬಿದ್ದಿದ್ದ ಪಾಂಡ್ಯ ಈಗ ಸಂಪೂರ್ಣ ಚೇತರಿಸಿಕೊಂಡಿದ್ದು, ಆಸೀಸ್ ವಿರುದ್ಧದ 4ನೇ ಟೆಸ್ಟ್‌ಗೆ ಲಭ್ಯರಿದ್ದಾರೆ. ಇನ್ನೊಂದೆಡೆ ರೋಹಿತ್ ಶರ್ಮ ಅವರು ತಮ್ಮ ನವಜಾತ ಶಿಶು ಕಾಣಲು ಭಾರತಕ್ಕೆ ಮರಳಿದ್ದಾರೆ.

4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 31 ರನ್ ಜಯ ಗಳಿಸಿತ್ತು. ಆದರೆ, ದ್ವಿತೀಯ ಟೆಸ್ಟ್‌ನಲ್ಲಿ ಚತುರ ಆಟ ಆಡಿದ್ದ ಆಸೀಸ್ 146 ರನ್‌ನಿಂದ ಪಂದ್ಯವನ್ನು ವಶ ಪಡಿಸಿಕೊಂಡಿತ್ತು. ಎಂಸಿಜಿಯಲ್ಲಿ ನಡೆದ ಮೂರನೇ ಭಾರತ ಗೆದ್ದುಕೊಂಡಿತು.

ಮೊದಲ ಟೆಸ್ಟ್‌ನಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದ್ದ ಅಶ್ವಿನ್ ಅನಂತರ ಕಿಬ್ಬೊಟ್ಟೆ ನೋವಿಗೆ ತುತ್ತಾಗಿ ಪರ್ತ್‌ (ದ್ವಿತೀಯ) ಟೆಸ್ಟ್‌ನಿಂದ ಹೊರಗಿದ್ದರು. ಪರ್ತ್ ಟೆಸ್ಟ್‌ನಿಂದ ವಂಚಿತರಾಗಿದ್ದ ಜಡೇಜಾ ಕೂಡ ಭುಜದ ನೋವಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸಿಡ್ನಿ ಟೆಸ್ಟಿಗಾಗಿ ಭಾರತ ತಂಡ : ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪ ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರವಾಲ್, ಚೇತೇಶ್ವರ್ ಪೂಜಾರಾ, ಹನುಮ ವಿಹಾರಿ, ರಿಷಬ್ ಪಂತ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬೂಮ್ರಾ, ಉಮೇಶ್ ಯಾದವ್, ಕುಲದೀಪ್ ಯಾದವ್ ಹಾಗೂ ಆರ್ ಅಶ್ವಿನ್.

Story first published: Wednesday, January 2, 2019, 10:30 [IST]
Other articles published on Jan 2, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+