T20 World Cup 2024: ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಅದ್ಭುತ ದಾಖಲೆ; ಆಸೀಸ್‌ಗೆ ಕೊಹ್ಲಿ-ಬುಮ್ರಾ ತಲೆನೋವು
ಜೂನ್ 24 ಸೋಮವಾರ, ರೋಹಿತ್ ಶರ್ಮಾ ನಾಯಕತ್ವದ ಭಾರತ ಮತ್ತು ಮಿಚೆಲ್ ಮಾರ್ಷ್ ನೇತೃತ್ವದ ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್ 2024ರ ಸೂಪರ್-8 ಪಂದ್ಯವು ಇಂದು ರಾತ್ರಿ 8 ರಿಂದ ಸೇಂಟ್ ಲೂಸಿಯಾದ ಡ್ಯಾರೆನ್ ಸಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಭಾರತ ಗೆದ್ದರೆ 2024ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ಗೆ ಟಿಕೆಟ್ ಪಡೆಯಲಿದೆ. ಇನ್ನೊಂದೆಡೆ ಅಫ್ಘಾನಿಸ್ತಾನ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸಿದ ಆಸ್ಟ್ರೇಲಿಯಾ 'ಮಾಡು ಇಲ್ಲವೇ ಮಡಿ' ಎಂಬ ಸಂದಿಗ್ಧತೆಗೆ ಸಿಲುಕಿದೆ.

ಒಂದು ವೇಳೆ ಆಸ್ಟ್ರೇಲಿಯಾ ತಂಡವು ಭಾರತ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಸೋತರೆ ಮತ್ತು ಅಫ್ಘಾನಿಸ್ತಾನ ತಂಡವು ಜೂನ್ 25 (ಮಂಗಳವಾರ) ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದರೆ, ಆಗ ಕಾಂಗರೂ ಪಡೆ 2024ರ ಟಿ20 ವಿಶ್ವಕಪ್‌ನಿಂದ ಹೊರಗುಳಿಯಲಿದೆ.
ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ದಾಖಲೆ ಉತ್ತಮವಾಗಿದೆ. ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿದೆ. ಮ್
ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ ಒಟ್ಟು 5 ಪಂದ್ಯಗಳು ನಡೆದಿವೆ. ಟೀ ಇಂಡಿಯಾ 3 ಪಂದ್ಯಗಳನ್ನು ಗೆದ್ದಿದೆ. ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಜಯ ಕಂಡಿದೆ. ಇಂದಿನ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಸೋಲಿಸಿದರೆ, ಕಾಂಗರೂ ತಂಡದ ವಿರುದ್ಧ 4-2 ಮುನ್ನಡೆ ಸಾಧಿಸಲಿದೆ.
ವಿಶ್ವಕಪ್ ಮಾತ್ರವಲ್ಲದೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿಯೂ ಆಸ್ಟ್ರೇಲಿಯಾ ವಿರುದ್ಧ ಭಾರತ ಯಾವಾಗಲೂ ಮೇಲುಗೈ ಸಾಧಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ ಒಟ್ಟು 31 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ.
ಭಾರತ 19 ಟಿ20 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಯಾವುದೇ ಫಲಿತಾಂಶಗಳಿಲ್ಲದೆ ಅಂತ್ಯ ಕಂಡಿದೆ.
ಕೊಹ್ಲಿ-ಬುಮ್ರಾ ಆಸ್ಟ್ರೇಲಿಯಾಕ್ಕೆ ತಲೆನೋವು
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 22 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 794 ರನ್ ಗಳಿಸಿದ್ದಾರೆ.
ಈ ವೇಳೆ ವಿರಾಟ್ ಕೊಹ್ಲಿ 8 ಅರ್ಧಶತಕಗಳನ್ನು ಗಳಿಸಿದ್ದಾರೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧ 13 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 16 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಈ ಇಬ್ಬರು ಟೀಮ್ ಇಂಡಿಯಾ ಆಟಗಾರರು ಆಸೀಸ್‌ಗೆ ತಲೆನೋವಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications