ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್

India vs australia: Rishabh Pant become quickest Indian wicketkeeper to 1000 Test runs

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಅಂತಿಮ ದಿನದಾಟದಲ್ಲಿ ಭಾರತೀಯ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 1000 ರನ್‌ಗಳನ್ನು ಗಳಿಸಿದ ಸಾಧನೆಯನ್ನು ಮಾಡಿದ ರಿಷಬ್ ಭಾರತೀಯ ವಿಕೆಟ್ ಕೀಪರ್‌ಗಳ ಪೈಕಿ ವೇಗವಾಗಿ ಈ ಮೈಲಿಗಲ್ಲು ಮುಟ್ಟಿದ ಆಟಗಾರ ಎನಿಸಿಕೊಂಡಿದ್ದಾರೆ.

ರಿಷಭ್ ಪಂತ್ ಈ ಸಾಧನೆಯನ್ನು ಮಾಡಲು 27 ಇನ್ನಿಂಗ್ಸ್ ಬಳಸಿಕೊಂಡಿದ್ದಾರೆ. ಈ ಮೂಲಕ ಭಾರತೀಯ ವಿಕೆಟ್‌ ಕೀಪರ್‌ಗಳ ಪೈಕಿ ವೇಗವಾಗಿ 1000 ರನ್ ಗಳಿಸಿದ ಸಾಧನೆ ಮಾಡಿದ್ದ ಎಂಎಸ್ ಧೋನಿ ದಾಖಲೆಯನ್ನು ಹಿಂದಕ್ಕೆ ಸರಿಸಿದ್ದಾರೆ. ಈ ಮೈಲಿಗಲ್ಲು ತಲುಪಲು ಧೋನಿ 32 ಇನ್ನಿಂಗ್ಸ್ ಬಳಸಿಕೊಂಡಿದ್ದರು.

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಬ್ರಿಸ್ಬೇನ್, ಅಂತಿಮ ದಿನದಾಟ Live ಸ್ಕೋರ್ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಬ್ರಿಸ್ಬೇನ್, ಅಂತಿಮ ದಿನದಾಟ Live ಸ್ಕೋರ್

ಉಳಿದಂತೆ ಭಾರತೀಯ ಮಾಜಿ ಕ್ರಿಕೆಟಿಗ ಫಾತೂಕ್ ಇಂಜಿನಿಯರ್ 36 ಇನ್ನಿಂಗ್ಸ್‌, ವೃದ್ಧಿಮಾನ್ ಸಾಹ 37 ನಯನ್ ಮೋಂಗಿಯಾ 39, ಸಯ್ಯದ್ ಕಿರ್ಮಾನಿ 45 ಹಾಗೂ ಕಿರಣ್ ಕೋರೆ 50 ಇನ್ನಿಂಗ್ಸ್‌ನಲ್ಲಿ 1000 ಟೆಸ್ಟ್ ರನ್‌ಗಳನ್ನು ಗಳಿಸಿದ ಸಾಧನೆಯನ್ನು ಮಾಡಿದ್ದಾರೆ.

ಒಟ್ಟಾರೆ ವಿಕೆಟ್ ಕೀಪರ್‌ಗಳ ಪೈಕಿ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಕೇವಲ 21 ಇನ್ನಿಂಗ್ಸ್‌ಗಳಲ್ಲಿ 1000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಉಳಿದಂತೆ ಶ್ರೀಲಂಕಾದ ದಿನೇಶ್ ಚಾಂಡಿಮಲ್ 22 ಇನ್ನಿಂಗ್ಸ್‌, ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋವ್ 22 ಇನ್ನಿಂಗ್ಸ್‌, ಶ್ರೀಲಂಕಾದ ದಿಗ್ಗಜ ಆಟಗಾರ ಕುಮಾರ್ ಸಂಗಕ್ಕರ ಹಾಗೂ ದಕ್ಷಿಣ ಆಫ್ರಿಕಾದ ದಿಗ್ಗಜ ಆಟಗಾರ ಎಬಿ ಡಿವಲಿಲಿಯರ್ಸ್ ತಲಾ 23 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ವಿಕೆಟ್ ಕೀಪರ್‌ಗಳಾಗಿದ್ದಾರೆ.

ಭಾರತ vs ಆಸ್ಟ್ರೇಲಿಯಾ: 91 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಶುಬ್ಮನ್ ಗಿಲ್ಭಾರತ vs ಆಸ್ಟ್ರೇಲಿಯಾ: 91 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಶುಬ್ಮನ್ ಗಿಲ್

ನಾಲ್ಕನೇ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್ 1000 ರನ್‌ಗಳ ಮೈಲಿಗಲ್ಲು ತಲುಪಲು 24 ರನ್‌ಗಳ ಅಗತ್ಯವಿತ್ತು. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಪಂತ್ 23 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡಿದ್ದರು. ಹೀಗಾಗಿ ಕೇವಲ 1 ರನ್ ಅಂತರದಿಂದ ಮೊದಲ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಲು ವಿಫಲರಾಗಿದ್ದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಈ ಮೈಲಿಗಲ್ಲನ್ನು ತಲುಪುವಲ್ಲಿ ಪಂತ್ ಯಶಸ್ವಿಯಾಗಿದ್ದಾರೆ.

Story first published: Tuesday, January 19, 2021, 16:32 [IST]
Other articles published on Jan 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X