ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಫೀಲ್ಡಿಂಗ್‌ನಲ್ಲಿ ವಿಶೇಷ ಸಾಧನೆ ಮಾಡಿದ ರೋಹಿತ್ ಶರ್ಮಾ

India vs Australia: Rohit Sharma bags 5 catches and joins elite list against australia

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ರೋಹಿತ್ ಶರ್ಮಾ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 48 ರನ್‌ಗಳ ಕೊಡುಗೆಯನ್ನು ನೀಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಹೊರತಾಗಿ ಮಾಡಿದ ಸಾಧನೆಯಿಂದ ಗಮನಸೆಳೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಆಸ್ಟ್ರೇಲಿಯಾ ತಂಡದ ಆಟಗಾರರ ಐದು ಕ್ಯಾಚ್‌ಗಳನ್ನು ಪಡೆಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾದರು. ಇದು ಫೀಲ್ಡರ್‌ ಆಗಿ ವಿಶೇಷ ಸಾಧನೆಯೆನಿಸಿದೆ.

ನೀವೂ ಕೋಟ್ಯಾಧಿಪತಿಯಾಗಬಹುದು; ಹಣ ಗಳಿಸಲು ಇಲ್ಲಿದೆ ಸುಲಭ ದಾರಿ!ನೀವೂ ಕೋಟ್ಯಾಧಿಪತಿಯಾಗಬಹುದು; ಹಣ ಗಳಿಸಲು ಇಲ್ಲಿದೆ ಸುಲಭ ದಾರಿ!

ಎಲೈಟ್ ಲಿಸ್ಟ್‌ಗೆ ಸೇರಿದ ರೋಹಿತ್

ಎಲೈಟ್ ಲಿಸ್ಟ್‌ಗೆ ಸೇರಿದ ರೋಹಿತ್

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಕೇವಲ ನಾಲ್ವರು ಆಟಗಾರರ ಪೈಕಿ ರೋಹಿತ್ ಶರ್ಮಾ ಕೂಡ ಒಬ್ಬರೆನಿಸಿದ್ದಾರೆ. ಈ ಮೂಲಕ ಹಿಟ್‌ಮ್ಯಾನ್ ಚುರುಕಿನ ಫೀಲ್ಡಿಂಗ್ ಮೂಲಕ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ದಿನದಾಟದ ಮೂರನೇ ಸೆಶನ್‌ನಲ್ಲಿ ಕ್ಯಾಮರೂನ್ ಗ್ರೀನ್ ನೀಡಿದ ಕ್ಯಾಚ್ ಪಡೆಯುವಲ್ಲಿ ಯಶಸ್ವಿಯಾದ ರೋಹಿತ್ ಶರ್ಮಾ ಈ ಎಲೈಟ್‌ ಲಿಸ್ಟ್‌ಗೆ ಸೇರಿಕೊಂಡಿದ್ದಾರೆ.

ದೊಡ್ಡ ಬ್ರೇಕ್ ನೀಡಿದ ಶರ್ಮಾ

ದೊಡ್ಡ ಬ್ರೇಕ್ ನೀಡಿದ ಶರ್ಮಾ

ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಅಂತಿಮ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ಟಿಮ್ ಪೈನ್ ಕ್ಯಾಚ್ ಪಡೆದು ಮಿಂಚಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಮಾರ್ನಾ ಸ್ ಲಾಬುಶೇನ್ ಹಾಗೂ ಕ್ಯಾಮರೂನ್ ಗ್ರೀನ್ ಕ್ಯಾಚ್ ಪಡೆದು ತಂಡಕ್ಕೆ ಯಶಸ್ಸು ತಂದುಕೊಟ್ಟರು.

ಸಾಧನೆ ಮಾಡಿದ ಆಟಗಾರರು

ಸಾಧನೆ ಮಾಡಿದ ಆಟಗಾರರು

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಆಟಗಾರರು:

ಏಕನಾಥ ಸೋಲ್ಕರ್, ಚೆನ್ನೈ 1969/70
ಕೃಷ್ಣಮಾಚಾರಿ ಶ್ರೀಕಾಂತ್, ಪರ್ತ್ 1991/92
ರಾಹುಲ್ ದ್ರಾವಿಡ್, ಚೆನ್ನೈ 1997/98
ರೋಹಿತ್ ಶರ್ಮಾ, ಬ್ರಿಸ್ಬೇನ್ 2020/21

ಭರ್ಜರಿಯಾಗಿ ಗೆದ್ದುಬೀಗಿದ ಭಾರತ

ಭರ್ಜರಿಯಾಗಿ ಗೆದ್ದುಬೀಗಿದ ಭಾರತ

ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ 3 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದಿದ್ದಲ್ಲದೆ ಸರಣಿಯನ್ನೂ ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ 2018-19ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಮಾಡಿದ ಸಾಧನೆಯನ್ನು ಮಾಡಿದೆ. ಸತತ ಎರಡನೇ ಬಾರಿಗೆ ಭಾರತ ಆಸ್ಟ್ರೇಲಿಯಾ ನೆಲದಲ್ಲಿ ಸರಣಿ ಗೆದ್ದ ಸಾಧನೆ ಮಾಡಿದೆ.

Story first published: Tuesday, January 19, 2021, 18:06 [IST]
Other articles published on Jan 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X