Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

India vs Australia: ಟಾಸ್ ಗೆಲ್ಲದಿದ್ದರೂ ಅಂದುಕೊಂಡಿದ್ದು ಪಡೆದ ನಾಯಕ ರೋಹಿತ್ ಶರ್ಮಾ!

ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಟಾಸ್ ಪ್ರಕ್ರಿಯೆ ನಡೆದಿದ್ದು ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ. ಕುತೂಹಲಕಾರಿ ಸಂಗತಿಯೆಂದರೆ ನಾಯಕ ರೊಹಿತ್ ಶರ್ಮಾ ಈ ಪಂದ್ಯದಲ್ಲಿ ಟಾಸ್ ಗೆಲ್ಲಲು ಸಾಧ್ಯವಾಗದಿದ್ದರೂ ತಾವೇನು ಆಯ್ಕೆ ಮಾಡಬೇಕು ಎಂದುಕೊಂಡಿದ್ದರೋ ಅದನ್ನು ಪಡೆದುಕೊಂಡಿದ್ದಾರೆ.

ಹೌದು ಟಾಸ್ ಗೆದ್ದ ಬಳಿಕ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಆರಂಭದಲ್ಲಿ ಬೌಲಿಂಗ್ ನಡೆಸುತ್ತೇವೆ ಎಂದು ತಮ್ಮ ನಿರ್ಧಾರ ಪ್ರಕಟಿಸಿದರು. ಹೀಗಾಗಿ ಟೀಮ್ ಇಂಡಿಯಾ ಬ್ಯಾಟಿಂಗ್ ನಡೆಸುವ ಸವಾಲು ಪಡೆದಿರುವುದು ಸ್ಪಷ್ಟವಾಗಿತ್ತು. ನಂತರ ನಾಯಕ ರೋಹಿತ್ ಶರ್ಮಾ ರವಿ ಶಾಸ್ತ್ರಿ ಅವರೊಂದಿಗೆ ಮಾತನಾಡುತ್ತಾ ಟಾಸ್ ಗೆದ್ದಿದ್ದರೆ ನಾವು ಬ್ಯಾಟಿಂಗನ್ನೇ ಆಯ್ಕೆ ಮಾಡಿರುತ್ತಿದ್ದೆವು ಎಂದಿದ್ದಾರೆ. ಈ ಮೂಲಕ ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಟಾಸ್ ಸೋತಿದ್ದರೂ ಭಾರತ ತಂಡದ ನಾಯಕನಿಗೆ ಏನು ಬೇಕಿತ್ತೋ ಅದು ದೊರೆತಿದೆ.

India vs Australia: Rohit Sharma reaction after the toss said i would have batted first

"ನಾನು ಬ್ಯಾಟಿಂಗನ್ನೇ ಮೊದಲು ಆರಿಸುತ್ತಿದ್ದೆ. ಪಿಚ್ ಬಹಳ ಅದ್ಭುತವಾಗಿದೆ. ಬಹಳ ದೊಡ್ಡ ಪಂದ್ಯ, ಹಾಗಾಗೊ ಸಾಧ್ಯವಾದಷ್ಟು ರನ್ ಕಲೆಹಾಕಬೇಕು. ಇದು ಬಹಳ ಅದ್ಭತವಾಗಿರಲಿದೆ. ಪ್ರತಿ ಬಾರಿ ನಾವು ಇಲ್ಲಿಗೆ ಬಂದಾಗಲೂ ಬಹಳ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಇರುತ್ತಾರೆ. ಇದು ಕ್ರಿಕೆಟ್‌ನ ಬಹಳ ದೊಡ್ಡ ಸಂದರ್ಭ. ಇಂಥಾ ಸಂದರ್ಭದಲ್ಲಿ ನಾವು ಉತ್ತಮವಾಗಿ ಹಾಗೂ ತಾಳ್ಮೆಯಿಂದ ಇರಬೇಕು. ಫೈನಲ್‌ನಲ್ಲಿ ತಂಡವನ್ನು ಮುನ್ನಡೆಸುವುದು ಕನಸು ನನಸಾದ ಸಂದರ್ಭ. ನಮ್ಮ ಮುಂದೆ ಏನು ಸವಾಲಿದೆ ಎಂದು ನನಗೆ ಗೊತ್ತಿದೆ. ಉತ್ತಮ ಪ್ರದರ್ಶನ ನೀಡಿ ಫಲಿತಾಂಶ ತರಬೇಕಿದೆ" ಎಂದಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ.

ಇನ್ನು ಈ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಎರಡೂ ತಂಡಗಳು ಯಾವುದೇ ಬದಲಾವಣೆ ಮಾಡದೆ ಕಣಕ್ಕಿಳಿಯುತ್ತಿದೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಪ್ರಸಿದ್ಧ್ ಕೃಷ್ಣ

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಸೀನ್ ಅಬ್ಬೋಟ್, ಮಾರ್ಕಸ್ ಸ್ಟೋನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್

Story first published: Sunday, November 19, 2023, 13:59 [IST]
Other articles published on Nov 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+