ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಐಯ್ಯರ್ ಅಲಭ್ಯ ಸಾಧ್ಯತೆ: ವರದಿ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾದ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಬಳಿಕ ಟೀಮ್ ಇಂಡಿಯಾ ಕೂಡ ಅಮೋಘ ಪ್ರದರ್ಶನ ನೀಡಿದ್ದು ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್ ಹಾಗೂ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನದ ಕಾರಣದಿಂದಾಗಿ ಮುನ್ನಡೆ ಸಾಧಿಸಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಶ್ರೇಯಸ್ ಐಯ್ಯರ್ ಮತ್ತೊಮ್ಮೆ ಬೆನ್ನುನೋವಿಗೆ ತುತ್ತಾಗಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದಿಲ್ಲ.
ಶ್ರೇಯಸ್ ಐಯ್ಯರ್ ಬೆನ್ನು ನೋವಿಗೆ ತುತ್ತಾಗಿರುವ ಬಗ್ಗೆ ಬಿಸಿಸಿಐ ಅಧಿಕೃತ ಮಾಹಿತಿ ನೀಡಿದ್ದು ಸ್ಕ್ಯಾನಿಂಗ್‌ಗೆ ಒಳಗಾಗಿರುವುದನ್ನು ಸ್ಪಷ್ಟಪಡಿಸಿದೆ. ಆದರೆ ಈ ಪಂದ್ಯದಲ್ಲಿ ಆವರು ಆಡುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆದರೆ ವರದಿಗಳ ಪ್ರಕಾರ ಶ್ರೇಯಸ್ ಐಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಅಲಭ್ಯವಾಗಲಿದ್ದಾರೆ ಎನ್ನಲಾಗಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ಟೆಸ್ಟ್ ಸರಣಿಯ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮಾರ್ಚ್ 17ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಮೂಲಕ ಸರಣಿಗೆ ಚಾಲನೆ ದೊರೆಯಲಿದೆ. ಈ ಸರಣಿಯಲ್ಲಿ ಶ್ರೇಯಸ್ ಐಯ್ಯರ್ ಭಾಗಿಯಾಗುವುದು ಅನುಮಾನವಾಗಿದೆ.
ಇನ್ನು ನಾಲ್ಕನೇ ದಿನದಾಟದ ಆರಂಭದಲ್ಲಿ ಬಿಸಿಸಿಐ ಶ್ರೇಯಸ್ ಐಯ್ಯರ್ ಬೆನ್ನು ನೋವಿಗೆ ಒಳಗಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿತ್ತು. ಟೀಮ್ ಇಂಡಿಯಾದ ಆಟಗಾರ ಶ್ರೇಯಸ್ ಐಯ್ಯರ್ ಬೆನ್ನು ನೋವಿಗೆ ಒಳಗಾಗಿದ್ದು ಹಾಗಾಗಿ ಬಿಸಿಸಿಐನ ವೈದ್ಯಕೀಯ ತಂಡ ಐಯ್ಯರ್ ಮೆಲೆ ನಿಗಾವಹಿಸಿದೆ ಎಂದು ಮಾಗಿತಿ ನೀಡಿತ್ತು. ಅಲ್ಲದೆ ಐಯ್ಯರ್ ಅವರನ್ನು ಸ್ಕ್ಯಾನಿಂಗ್‌ಗೆ ಕೂಡ ಒಳಪಡಿಸಲಾಗಿದೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿತ್ತು. "ಮೂರನೇ ದಿನದಾಟದ ಬಳಿಕ ಶ್ರೇಯಸ್ ಐಯ್ಯರ್ ಬೆನ್ನು ನೋವಿನ ಬಗ್ಗೆ ಹೇಳಿಕೊಂಡಿದ್ದರು. ಅವರು ಸ್ಕ್ಯಾನಿಂಗ್‌ಗೆ ಒಳಗಾಗಿದ್ದು ಬಿಸಿಸಿಐ ವೈದ್ಯಕೀಯ ತಂಡ ಅವರ ಮೇಲೆ ನಿಗಾ ವಹಿಸಿದೆ" ಎಂದು ಬಿಸಿಸಿಐ ಟ್ವೀಟ್ ಮಾಡಿತ್ತು.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕುಹ್ನೆಮನ್, ಟಾಡ್ ಮರ್ಫಿ, ನಾಥನ್ ಲಿಯಾನ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಮಿಚೆಲ್ ಸ್ವೆಪ್ಸನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications