ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಮಿಸ್, ಸ್ಟೀವ್ ವಾ ಬೇಸರ

India vs Australia: Steve Waugh disappointed Virat Kohli will miss Tests

ಸಿಡ್ನಿ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾಕ್ಕೆ ಪ್ರವಾಸ ಹೋಗಲಿದೆ. ಅಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ, ಮೂರು ಪಂದ್ಯಗಳ ಟಿ20ಐ ಸರಣಿ ಮತ್ತು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಪ್ರವಾಸದ ವೇಳೆ ಭಾರತದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಲ್ಲೂ ಆಡುತ್ತಿಲ್ಲ. ಸರಣಿ ಆರಂಭದಲ್ಲಿ ನಡೆಯುವ ಪಿಂಕ್‌ ಬಾಲ್ ಟೆಸ್ಟ್‌ನಲ್ಲಿ ಮಾತ್ರ ಆಡಿ ಮತ್ತೆ ಪಿತೃತ್ವ ರಜೆ ಪಡೆಯಲಿದ್ದಾರೆ. ಕೊಹ್ಲಿ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮಗುವಿಗೆ ಜನ್ಮ ನೀಡಲಿರುವುದರಿಂದ ಕೊಹ್ಲಿ ಆ ವೇಳೆ ರಜೆಯಲ್ಲಿರಲು ನಿರ್ಧರಿಸಿದ್ದಾರೆ.

ಅದ್ಭುತ ಫೀಲ್ಡಿಂಗ್ ಮೂಲಕ ಕ್ರಿಕೆಟ್ ಲೋಕವನ್ನು ನಿಬ್ಬೆರಗಾಗಿಸಿದ ಮಹಿಳಾ ಕ್ರಿಕೆಟರ್ಅದ್ಭುತ ಫೀಲ್ಡಿಂಗ್ ಮೂಲಕ ಕ್ರಿಕೆಟ್ ಲೋಕವನ್ನು ನಿಬ್ಬೆರಗಾಗಿಸಿದ ಮಹಿಳಾ ಕ್ರಿಕೆಟರ್

ಭಾರತ-ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಕೊಹ್ಲಿ ಆಡದಿರುವ ಬಗ್ಗೆ ಆಸ್ಟ್ರೇಲಿಯಾದ ಕ್ರಿಕೆಟ್ ದಂತಕತೆ ಸ್ಟೀವ್ ವಾ ಬೇಸರ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ದಂಪತಿಗೆ ಜನವರಿಯಲ್ಲಿ ಮಗು ಜನಿಸುವ ನಿರೀಕ್ಷೆಯಿದೆ. ಹೀಗಾಗಿ ಅಡಿಲೇಡ್‌ನಲ್ಲಿ ಡಿಸೆಂಬರ್‌ 17ರಂದು ನಡೆಯಲಿರುವ ಪಿಂಕ್‌ ಬಾಲ್ ಟೆಸ್ಟ್‌ನಲ್ಲಿ ಆಡಿದ ಬಳಿಕ ಕೊಹ್ಲಿ ರಜೆ ಪಡೆಯಲಿದ್ದಾರೆ.

'ಕೊಹ್ಲಿ ಅಲ್ಲಿ ಪೂರ್ತಿ ಸರಣಿ ಆಡುತ್ತಿಲ್ಲ ಎಂಬ ಬಗ್ಗೆ ನನಗೆ ಸ್ವಲ್ಪ ಬೇಸರವಾಗಿದೆ. ಸ್ವಲ್ಪ ಅಚ್ಚರಿಯೂ ಆಗಿದೆ,' ಎಂದು ಆಸ್ಟ್ರೇಲಿಯಾ ಮಾಜಿ ನಾಯಕ, ಸ್ಟೀವ್ ಎಎಸ್‌ಪಿ ಜೊತೆ ಹೇಳಿದ್ದಾರೆ. ನವೆಂಬರ್ 10ರಂದು ಐಪಿಎಲ್ ಫೈನಲ್‌ ಬಳಿಕ ಭಾರತ ತಂಡ ಆಸ್ಟ್ರೇಲಿಯಾಕ್ಕೆ ಪ್ರವಾಸ ಹೊರಡಲಿದೆ.

Story first published: Tuesday, November 10, 2020, 15:52 [IST]
Other articles published on Nov 10, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X